ಉಡುಪಿಯ ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ 16 ವರ್ಷದ ಅಪ್ರಾಪ್ತ ಬಾಲಕ ಅನಿರುದ್ಧ ಸರಳತ್ತಾಯ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ನಿನ್ನೆ ಅದನ್ನ ಪರಿಶೀಲಿಸಿದ ಕೋರ್ಟ್, ಸರ್ಕಾರ ಈ ವಿಚಾರದಲ್ಲಿ ಮೂಕಪ್ರೇಕ್ಷಕನಂತೆ ವರ್ತಿ ಸಬಾರದು ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.
ಅಪ್ರಾಪ್ತ ವಯಸ್ಸಿನ ಬಾಲಕನನ್ನು ಪೀಠಾಧಿಪತಿಯಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ. ಲತವ್ಯ ಆಚಾರ್ಯ ಹಾಗೂ ಇತರೆ 4 ಜನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ ಅರ್ಜಿಯಲ್ಲಿ ಅಪ್ರಾಪ್ತರ ಹಕ್ಕುಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಿ ಮೂಕಪ್ರೇಕ್ಷಕನಂತೆ ವರ್ಥಿಸಬಾರದು ಎಂದು ಹೇಳಿಕೆ ನೀಡಿದೆ.
ಅರ್ಜಿದಾರರು ಖಾಸಗಿ ಮಠ ಹಾಗೂ ವ್ಯಕ್ತಿಗಳಿಗೆ ನಿರ್ದೇಶನ ನೀಡುವಂತೆ ಪಿಐಎಲ್ ಮೂಲಕ ಕೋರಿದ್ದಾರೆ. ಆದರೆ, ಪ್ರಕರಣ ಸಂಪೂರ್ಣವಾಗಿ ಖಾಸಗಿ ವ್ಯಾಜ್ಯವಾಗಿದ್ದು, ಪಿಐಎಲ್ ವ್ಯಾಪ್ತಿಯಲ್ಲಿ ವಿಚಾರಣೆ ನಡೆಸಲಾಗದು ಎಂದು ಕೋರ್ಟ್ ತಿಳಿಸಿತ್ತು. ಇದಕ್ಕೆ ಅರ್ಜಿ ಪರ ವಕೀಲರು ಅರ್ಜಿಯನ್ನು ಪರಿಷ್ಕರಿಸಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದ್ದು, ಅದಕ್ಕೆ ಒಪ್ಪಿದ ಕೋರ್ಟ್ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿದೆ.