ಅಪ್ರಾಪ್ತ ವಯಸ್ಸಿನ ಬಾಲಕ ಮಠಾಧೀಶನಾಗಿ ನೇಮಕ – ಸರ್ಕಾರ ಮೂಕಪ್ರೇಕ್ಷಕನಂತೆ ವರ್ತಿಸಬಾರದೆಂದ ಹೈಕೋರ್ಟ್‌

ಉಡುಪಿಯ ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ 16 ವರ್ಷದ ಅಪ್ರಾಪ್ತ ಬಾಲಕ ಅನಿರುದ್ಧ ಸರಳತ್ತಾಯ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಲಾಗಿತ್ತು. ನಿನ್ನೆ ಅದನ್ನ ಪರಿಶೀಲಿಸಿದ ಕೋರ್ಟ್‌, ಸರ್ಕಾರ ಈ ವಿಚಾರದಲ್ಲಿ ಮೂಕಪ್ರೇಕ್ಷಕನಂತೆ ವರ್ತಿ ಸಬಾರದು ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಪ್ರಾಪ್ತ ವಯಸ್ಸಿನ ಬಾಲಕನನ್ನು ಪೀಠಾಧಿಪತಿಯಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ. ಲತವ್ಯ ಆಚಾರ್ಯ ಹಾಗೂ ಇತರೆ 4 ಜನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ ಅರ್ಜಿಯಲ್ಲಿ ಅಪ್ರಾಪ್ತರ ಹಕ್ಕುಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಿ ಮೂಕಪ್ರೇಕ್ಷಕನಂತೆ ವರ್ಥಿಸಬಾರದು ಎಂದು ಹೇಳಿಕೆ ನೀಡಿದೆ.

ಅರ್ಜಿದಾರರು ಖಾಸಗಿ ಮಠ ಹಾಗೂ ವ್ಯಕ್ತಿಗಳಿಗೆ ನಿರ್ದೇಶನ ನೀಡುವಂತೆ ಪಿಐಎಲ್ ಮೂಲಕ ಕೋರಿದ್ದಾರೆ. ಆದರೆ, ಪ್ರಕರಣ ಸಂಪೂರ್ಣವಾಗಿ ಖಾಸಗಿ ವ್ಯಾಜ್ಯವಾಗಿದ್ದು, ಪಿಐಎಲ್ ವ್ಯಾಪ್ತಿಯಲ್ಲಿ ವಿಚಾರಣೆ ನಡೆಸಲಾಗದು ಎಂದು ಕೋರ್ಟ್‌ ತಿಳಿಸಿತ್ತು. ಇದಕ್ಕೆ ಅರ್ಜಿ ಪರ ವಕೀಲರು ಅರ್ಜಿಯನ್ನು ಪರಿಷ್ಕರಿಸಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದ್ದು, ಅದಕ್ಕೆ ಒಪ್ಪಿದ ಕೋರ್ಟ್ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿದೆ.

Related posts

Latest posts

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಇನ್ನಿಲ್ಲ

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಕೊರೊನಾ ಸೋಂಕಿನಿಂದ ಉಂಟಾದ ಹಲವಾರು ಸಮಸ್ಯೆಗಳಿಂದ ಕೊನೆಯುಸಿರೆಳೆದಿದ್ದಾರೆ. ಚಂಡೀಗಡದ ಪಿಜಿಐ ಆಸ್ಪತ್ರೆಯಲ್ಲಿ ತಮ್ಮ 91 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ತಿಂಗಳು ಮಿಲ್ಖಾ ಸಿಂಗ್ ಅವರಿಗೆ...

ಒಂದೇ ದಿನದಲ್ಲಿ ಎರಡು ವಿವಿಧ ಕೋವಿಡ್-19 ಲಸಿಕೆಗಳನ್ನು ಪಡೆದ ಬಿಹಾರದ ಮಹಿಳೆ

ಬಿಹಾರದ 63 ವರ್ಷದ ಮಹಿಳೆಗೆ ಒಂದೇ ದಿನದಲ್ಲಿ ಎರಡು ವಿಭಿನ್ನ ಕಂಪನಿಯ ಕರೋನ ಲಸಿಕೆ ನೀಡಲಾಗಿದೆ. ಅವರು ಈಗ ವೈದ್ಯರ ನಿಗದಲ್ಲಿದ್ದು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಬಿಹಾರದ ಮಹಿಳೆ ಸುನಿಲಾ ದೇವಿ ಎಂಬುವವರಿಗೆ ಜೂನ್ 16...

ಮಸೀದಿಗೆ ಜಾಗ ದಾನ ನೀಡಿದ ಸಿಖ್ ವ್ಯಕ್ತಿ: ಮಸೀದಿಯಲ್ಲಿ ಕಾರ್ಯಕ್ರಮ ಆಯೋಜಿಸಿದ ಗುರುದ್ವಾರ

ಕೋಮು‌‌ ಸಂಘರ್ಷಗಳು, ಪ್ರಚೋದನೆಗಳು ಮತ್ತು ವಿಭಿನ್ನ ಕೋಮಿನ ಜನರ ಮೇಲೆ ವಿನಾಕಾರಣ ಹಲ್ಲೆ, ಕೊಲೆ ನಡೆಯುವ ವಿದ್ಯಮಾನಗಳ ನಡುವೆ ಪಂಜಾಬಿನ‌ ಎರಡು ಜಿಲ್ಲೆಗಳು ಕೋಮುಸಾಮರಸ್ಯವನ್ನು ಉತ್ತೇಜಿಸುವಂತಹ ಘಟನೆಗೆ ಸಾಕ್ಷಿಯಾಗಿವೆ. ಸ್ವಾಭಿಮಾನಕ್ಕೆ, ಕೆಚ್ಚೆದೆಗೆ ಹಠಕ್ಕೆ...