ಉಡುಪಿ, : ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ಉಡುಪಿ(Udupi)ಯಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಆನಂದ (37) ಮೃತಪಟ್ಟವರು. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಬಳಿಕ ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು.
ನಂತರ ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಂ ಸಿಗದ ಕಾರಣ, ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಹಿನ್ನಲೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.