• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುಜಿ/ಎಬಿ ಕೇಬಲ್‌ ಅಳವಡಿಕೆ ಶೇ.97ರಷ್ಟು ಪೂರ್ಣ: ಇಂಧನ ಸಚಿವ ಕೆ.ಜೆ. ಜಾರ್ಜ್‌

ಪ್ರತಿಧ್ವನಿ by ಪ್ರತಿಧ್ವನಿ
August 12, 2024
in Top Story, ಇದೀಗ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಶೇ. 100ರಷ್ಟು ಕಾರ್ಯ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ.
Bangalore:ನಗರದಲ್ಲಿ ವಿದ್ಯುತ್‌ ಪೂರೈಕೆಯ ಭೂಗತ ಕೇಬಲ್‌ ಮತ್ತು ಏರಿಯಲ್‌ ಬಂಚ್ಡ್ ಕೇಬಲ್‌ ಅಳವಡಿಕೆ ಕಾರ್ಯಯನ್ನು ಬೆಸ್ಕಾಂ ಬಹುತೇಕ ಪೂರ್ಣಗೊಳಿಸಿದ್ದು, ಒಟ್ಟಾರೆ ಶೇ.97ರಷ್ಟು ಪ್ರಗತಿ ಸಾಧಿಸಿದೆ.

ADVERTISEMENT

ಭೂಗತ ಕೇಬಲ್‌ ಮತ್ತು ಏರಿಯಲ್‌ ಬಂಚ್ಡ್ ಕೇಬಲ್‌ ಅಳವಡಿಕೆ ಕುರಿತಂತೆ ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನೆ ನಡೆಸಿದ ಇಂಧನ ಸಚಿವ ಕೆ.ಜೆ.ಜಾರ್ಜ್‌, ಬಾಕಿ ಇರುವ ಕೇಬಲ್ ಅಳವಡಿಕೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಭೂಗತ ಕೇಬಲ್‌ ಮತ್ತು ಏರಿಯಲ್‌ ಬಂಚ್ಡ್ ಕೇಬಲ್‌ ಅಳವಡಿಕೆ ಯೋಜನೆಯಲ್ಲಿ ಶೇ. 100ರಷ್ಟು ಯಶಸ್ಸು ಸಾಧಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ನಗರದಲ್ಲಿ ನಾಲ್ಕು ಹಂತಗಳಲ್ಲಿ 11 ಕೆ.ವಿ.ಯ 7396.64 ಕಿ.ಮೀ. ತಂತಿಗಳನ್ನು ಭೂಗತ ಕೇಬಲ್ ಅಥವಾ ಏರಿಯಲ್ ಬಂಚ್ಡ್ ಆಗಿ ಪರಿವರ್ತಿಸಲು ನಿರ್ಧರಿಸಲಾಗಿದ್ದು, ಈ ಪೈಕಿ 7285.03 ಕಿ.ಮೀ. (ಶೇ. 98.49) ಪ್ರಗತಿಯಾಗಿದೆ. ಅದೇ ರೀತಿ 6354.47 ಎಲ್ ಟಿ ಕೇಬಲ್ ಪೈಕಿ 6280.15 ಕಿ.ಮೀ. (ಶೇ. 98.83) ಸಾಧನೆ ಮಾಡಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಭೂಗತ ಕೇಬಲ್‌ಗೆ ಹಾನಿ ಮಾಡಿದರೆ ದಂಡ

ಬೆಸ್ಕಾಂ ವತಿಯಿಂದ ನಗರದಲ್ಲಿ ಅಳವಡಿಸಿರುವ ಭೂಗತ ಕೇಬಲ್ ಗಳಿಗೆ ಇತರೆ ಖಾಸಗಿ ಕಂಪನಿಗಳ ಕೇಬಲ್ ಗಳಿಂದ ಹಾನಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಇಂಧನ ಸಚಿವ ಕೆ.ಜೆ.ಜಾರ್ಜ್(K J George), ಈ ರೀತಿಯ ಕೃತ್ಯಗಳಿಗೆ ದಂಡ ವಿಧಿಸುವ ಬಗ್ಗೆ ಸೂಕ್ತ ನಿಯಮ ರೂಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

“ಖಾಸಗಿ ಜಾಲಗಳು ರಸ್ತೆ ಅಗೆದು ತಮ್ಮ ಕೇಬಲ್ ಅಳವಡಿಸುವ ಸಂದರ್ಭದಲ್ಲಿ ಬೆಸ್ಕಾಂನ ಭೂಗತ ವಿದ್ಯುತ್ ಕೇಬಲ್ ಗಳಿಗೆ ಹಾನಿ ಮಾಡುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವುದರ ಜತಗೆ ಆರ್ಥಿಕವಾಗಿಯೂ ನಷ್ಟವಾಗುತ್ತಿದೆ. ಹೀಗಾಗಿ ಕೇಬಲ್ ಇರುವ ಬಗ್ಗೆ ಗುರುತು ಹಾಕಬೇಕು. ಜತೆಗೆ, ಅದಕ್ಕೆ ಹಾನಿ ಮಾಡಿದರೆ ಹೆಚ್ಚು ಮೊತ್ತದ ದಂಡ ವಿಧಿಸುವ ಬಗ್ಗೆ ನಿಯಮ ರೂಪಿಸಬೇಕು. ತಕ್ಷಣದಿಂದಲೇ ಇದರ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Tags: BescomBJPCongress PartyK J Georgeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದರ್ಶನ್ & ಆರೋಪಿಗಳ ಸಂಪೂರ್ಣ ಕಾಲ್ ಡಿಟೇಲ್ಸ್ ಪೊಲೀಸರ ಕೈಯಲ್ಲಿ ! 400ಕ್ಕೂ ಹೆಚ್ಚು ಕಾಲ್ ಗಳ ಪರಿಶೀಲನೆ ! 

Next Post

ಅಭಿವೃದ್ಧಿಯ ಮರೀಚಿಕೆಯೂ ತಳಸಮಾಜದ ಹತಾಶೆಯೂ..

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post

ಅಭಿವೃದ್ಧಿಯ ಮರೀಚಿಕೆಯೂ ತಳಸಮಾಜದ ಹತಾಶೆಯೂ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada