ಪರೀಕ್ಷೆ ನಡೆದ ಮರುದಿನವೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) NET ಎಕ್ಸಾಂ ರದ್ದುಗೊಳಿಸಿ ಆದೇಶ
ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ದೂರು ಬಂದ ಬೆನ್ನಲ್ಲೇ ನಿರ್ಧಾರ
ಈ ಬಗ್ಗೆ ಟ್ವೀಟ್ ಮಾಡಿದ Ministry Of Education
ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಅಥವಾ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಹುದ್ದೆಗೆ ಅರ್ಹತೆಯನ್ನು ನಿರ್ಧರಿಸಲು ನಡೆಸು UGC-NET ಎಕ್ಸಾಂ
ದೇಶದಾದ್ಯಂತ 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು
ಪರೀಕ್ಷೆಯನ್ನು ಹೊಸದಾಗಿ ನಡೆಸಲು ನಿರ್ಧಾರ
ಶೀಘ್ರದಲ್ಲೇ ಮಾಹಿತಿ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಿಸಿದ NTA
ಅಲ್ಲದೆ ಪ್ರಕರಣವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ಹಸ್ತಾಂತರಿಸಲಾಗಿದೆ ಎಂಬುದಾಗಿ NTA ತಿಳಿಸಿದೆ