• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಮಲೆನಾಡ ಸೊಗಡಿನಲ್ಲಿ ʼಉಗ್ರ ತಾಂಡವʼ: ರಾಜಕೀಯ..ಮಾಫಿಯಾ ಕಥೆ ಹೇಳಲು ಹೊರಟ ಹೊಸ ತಂಡ

ಪ್ರತಿಧ್ವನಿ by ಪ್ರತಿಧ್ವನಿ
November 6, 2025
in ಸಿನಿಮಾ
0
ಮಲೆನಾಡ ಸೊಗಡಿನಲ್ಲಿ ʼಉಗ್ರ ತಾಂಡವʼ: ರಾಜಕೀಯ..ಮಾಫಿಯಾ ಕಥೆ ಹೇಳಲು ಹೊರಟ ಹೊಸ ತಂಡ
Share on WhatsAppShare on FacebookShare on Telegram
ADVERTISEMENT

ಮಲೆನಾಡ ಸೊಗಡನ್ನು ವರ್ಣಿಸುವ ಮತ್ತೊಂದು ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಸಿದ್ಧವಾಗುತ್ತಿದೆ. ಸಮಾಜ ಸೇವಕ, ರಿಯಲ್ ಎಸ್ಟೇಟ್ ಉದ್ಯಮಿ ಡಾ.ಎನ್. ನರಸಿಂಹಮೂರ್ತಿ ಸುರಭಿ ಫಿಲಂಸ್ ಬ್ಯಾನರ್‌ನಲ್ಲಿ ʼಉಗ್ರ ತಾಂಡವʼ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಇದೀಗ ಈ ಚಿತ್ರದ ಟೀಸರ್ ಬಿಡುಗಡೆ ಆಗಿದೆ.

ಗೌತಮ ಸೂರ್ಯ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕನಾಗಿ ಚಿರಂತ್ ನಟಿಸುತ್ತಿದ್ದಾರೆ. ಮಲೆನಾಡ ಸೊಗಡಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾದ ಶೂಟಿಂಗ್ ಇನ್ನಷ್ಟೇ ಆರಂಭವಾಗಬೇಕಿದೆ. ಮಲೆನಾಡು ಹಾಗೂ ಕರಾವಳಿಯಲ್ಲಿ ನಡೆಯುವ ರಾಜಕೀಯ, ಮಾಫಿಯಾ ಹಾಗೂ ಜಮೀನುದಾರರು ಹಾಗೂ ಕಾರ್ಮಿಕರ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ.

ಟೀಸರ್ ಬಿಡುಗಡೆ ನಂತರ ಮಾತನಾಡಿದ ನಿರ್ಮಾಪಕ ನರಸಿಂಹಮೂರ್ತಿ, ʼನಿರ್ದೇಶಕರು ತುಂಬಾ ಟೀಸರ್ ಚೆನ್ನಾಗಿ ಮಾಡಿದ್ದಾರೆ. ಹಾಗಾಗಿ ಸಿನಿಮಾ ಕೂಡ ಚೆನ್ನಾಗಿ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಇದು ಹಳ್ಳಿಯಲ್ಲಿ ನಡೆಯುವ ಕಥೆ. ಅಲ್ಲಿಯ ಮೇಲು, ಕೀಳು, ರಾಜಕೀಯ ಹಾಗೂ ಒಬ್ಬ ವ್ಯಕ್ತಿಗೆ ಅನ್ಯಾಯ ಆದಾಗ ಹೇಗೆ ಸಿಡಿದೆದ್ದು ನಿಲ್ಲುತ್ತಾನೆ ಎಂಬುದು ಸಿನಿಮಾದ ಸಾರಾಂಶ. ಇಡೀ ತಂಡ ಶ್ರಮದಿಂದ ಸಿನಿಮಾ ಮಾಡುತ್ತಿದ್ದಾರೆ.

ನನಗೆ ಸಿನಿಮಾ ನಂಟಿನ ಬಗ್ಗೆ ಹೇಳುವುದಾದರೆ 80-90ರ ದಶಕದಲ್ಲಿ ಸಮುದಾಯದಲ್ಲಿ ನಟಿಸಿದ್ದೆ. ನಂತರ ಒಂದು ಸಿನಿಮಾ ಮಾಡಲು ಹೋಗಿ ನಷ್ಟ ಅನುಭವಿಸಿದೆ. ಆ ನಂಟಿನಿಂದ ಈಗ ಮತ್ತೆ ಸಿನಿಮಾ ಮಾಡುವಂತೆ ಆಯ್ತು. ಇದು ನನ್ನ ನಿರ್ಮಾಣದ ಎರಡನೇ ಸಿನಿಮಾ. ಮುಂದಿನ ದಿನಗಳಲ್ಲೂ ಒಳ್ಳೆಯ ಸಿನಿಮಾಗಳನ್ನು ಮಾಡುವ ಯೋಚನೆ ಇದೆʼ ಎಂದು ಹೇಳಿದರು.

R.Ashok ಕಾಂಗ್ರೆಸ್ ಸರ್ಕಾರ ಸತ್ತೊಗಿರೋ ಹೆಣ #pratidhvani #rashok #siddaramaiah #dkshivakumar

ನಂತರ ಚಿತ್ರದ ನಾಯಕ ಚಿರಂತ್ ಮಾತನಾಡಿ, ‘ನಾನು ಈ ಮೊದಲು ʼಆತ್ಮʼ ಸಿನಿಮಾ ಮಾಡಿದ್ದೆ. ಇದು ಎರಡನೇ ಸಿನಿಮಾ. ಕಥೆ ಮಾಡುವಾಗ ರಾಜಕೀಯ ಹಿನ್ನೆಲೆಯಲ್ಲಿ ಮಾಡಬೇಕು ಎಂದು ಹೊರಟಿದ್ದು. ನಂತರ ಜಾತಿಯ ಒಂದು ಎಳೆ ಇಟ್ಟುಕೊಂಡು ಕಥೆ ಮಾಡಿದ್ದೀವಿ. ನಮ್ಮ ಸಮಾಜದಲ್ಲಿ ನಡೆಯುವ ಕಥೆಯೇ ಚಿತ್ರದಲ್ಲಿ ಇರಲಿದೆ. ಅದರಲ್ಲೂ ಮಲೆನಾಡಿನಲ್ಲಿ ನಡೆಯುವ ಜಮೀನ್ದಾರರ ಹಾಗೂ ಕಾರ್ಮಿಕರ ನಡುವೆ ನಡೆಯುವ ಕಥೆಯನ್ನು ಆ್ಯಕ್ಷನ್, ಡ್ರಾಮಾ ಮೂಲಕ ಹೇಳ ಹೊರಟಿದ್ದೇವೆ. ಈ ತಿಂಗಳು ಶೂಟಿಂಗ್ ಶುರು ಮಾಡುತ್ತೇವೆ ಎಂದರು.

ನಿರ್ದೇಶಕ ಗೌತಮ್ ಸೂರ್ಯ ಮಾತನಾಡಿ, ʼನಾನು ಹಿರಿಯ ನಿರ್ದೇಶಕರಾದ ದಿನೇಶ್ ಬಾಬು, ಪಿ. ವಾಸು ಮುಂತಾದವರ ಜೊತೆ ಕೆಲಸ ಮಾಡಿದ್ದೇನೆ. ಈ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ಚಿರಂತ್ ಅವರಿಗೆ ಧನ್ಯವಾದಗಳುʼ ಎಂದರು.

ಇನ್ನು ಉಗ್ರ ತಾಂಡವ ಚಿತ್ರದಲ್ಲಿ ನಟಿ ಮಧುಬಾಲ ಪೊಲೀಸ್ ಅಧಿಕಾರಿದಲ್ಲಿ ನಟಿಸುತ್ತಿದ್ದರೆ, ಹುಬ್ಬಳ್ಳಿ ಮೂಲದ ಅಶ್ವಿನಿ ಎಸ್. ರೀಲ್ಸ್ ಮಾಡುವ ಮಾಡೆಲ್ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರ ಜೊತೆ ಕಿರಣ್ ಕೂಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶ್ರೀ ಸುರೇಶ್ ಸಂಗೀತ ಸಂಯೋಜನೆ ಮಾಡುತ್ತಿದ್ದು, ಸಹ ನಿರ್ಮಾಪಕರಾಗಿ ಸಂಜಯ್ ಹಾಗೂ ಭುವನ ಸಾಥ್ ನೀಡಿದ್ದಾರೆ.

Farmers Protest  :  ರಸ್ತೆ ಗೆ ಇಳಿದ ರೈತರು #pratidhvani #farmersmarket #sugarminister
Tags: CinemaKannadakannada moviesMoviesandalwood
Previous Post

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

Next Post

ಯಾವ ನವೆಂಬರ್ ಕ್ರಾಂತಿಯೂ ಇಲ್ಲ ಏನೂ ಇಲ್ಲ- ಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದ ಡಿ.ಕೆ ಶಿವಕುಮಾರ್

Related Posts

Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
0

ಕುಣಿಗಲ್ ನಗರದ ಇತಿಹಾಸದಲ್ಲೇ ಮೊಟ್ಡ ಮೊದಲ ಬಾರಿಗೆ ಬಿ.ಕೆ.ಬಿ.ಎಂ.ಎಸ್. ಮೈದಾನದಲ್ಲಿ ನೆರೆದಿದ್ದ 35 ಸಾವಿರ ಜನರ ಸಮ್ಮುಖದಲ್ಲಿ 'ಕುಣಿಗಲ್ ಉತ್ಸವ'ದ ಕೊನೇ ದಿನದ ಕಾರ್ಯಕ್ರಮ ನಡೆಯಿತು. ಸಿನಿಮಾ...

Read moreDetails
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಬಿಗ್‌ ಬಾಸ್‌ನಲ್ಲಿ ಗಿಲ್ಲಿಗೆ ಅನ್ಯಾಯ..? ಕಿಚ್ಚ ಸುದೀಪ್‌, ವಾಹಿನಿ ವಿರುದ್ಧ ಸಿಡಿದೆದ್ದ ಕನ್ನಡಿಗರು..!

ಬಿಗ್‌ ಬಾಸ್‌ನಲ್ಲಿ ಗಿಲ್ಲಿಗೆ ಅನ್ಯಾಯ..? ಕಿಚ್ಚ ಸುದೀಪ್‌, ವಾಹಿನಿ ವಿರುದ್ಧ ಸಿಡಿದೆದ್ದ ಕನ್ನಡಿಗರು..!

January 12, 2026
Next Post
ಯಾವ ನವೆಂಬರ್ ಕ್ರಾಂತಿಯೂ ಇಲ್ಲ ಏನೂ ಇಲ್ಲ- ಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದ ಡಿ.ಕೆ ಶಿವಕುಮಾರ್

ಯಾವ ನವೆಂಬರ್ ಕ್ರಾಂತಿಯೂ ಇಲ್ಲ ಏನೂ ಇಲ್ಲ- ಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದ ಡಿ.ಕೆ ಶಿವಕುಮಾರ್

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!