ಕೋವಿಡ್‌ ಸಂಕಷ್ಟ: ಭಾರತಕ್ಕೆ ಬ್ರಿಟನ್‌ನಿಂದ 1000 ಹೆಚ್ಚುವರಿ ವೆಂಟಿಲೇಟರ್‌

ಭಾರತದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪಾಸಿಟಿವ್‌  ಪ್ರಕರಣ ಮತ್ತು ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಆಕ್ಸಿಜನ್‌, ಬೆಡ್‌, ವೆಂಟಿಲೇಟರ್‌ಗಳ ಸಮಸ್ಯೆ ಉಂಟಾಗಿದ್ದು, ಈಗಾಗಲೇ ಅನೇಕ ರಾಷ್ಟ್ರಗಳು ಭಾರತಕ್ಕೆ ವೈದ್ಯಕೀಯ ನೆರವನ್ನು  ನೀಡಿದ್ದು, ಬ್ರಿಟನ್‌ ಈಗಾಗಲೇ 200 ವೆಂಟಿಲೇಟರ್‌ಗಳನ್ನು ಭಾರತಕ್ಕೆ ಕಳುಹಿಸಿದೆ. ಇದೀಗ ಮತ್ತೆ ಹೆಚ್ಚುವರಿಯಾಗಿ 1000 ವೆಂಟಿಲೇಟರ್‌ಗಳನ್ನು ಕಳುಹಿಸುವುದಾಗಿ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಬಿಬಿಸಿ ಟೆಲಿವಿಷನ್‌ಗೆ ತಿಳಿಸಿದ್ದಾರೆ.

ಭಾರತಕ್ಕೆ ತುರ್ತು ಅಗತ್ಯವಿರುವ ವೈದ್ಯಕೀಯ ನೆರವನ್ನು ನಮ್ಮಿಂದ ಎಷ್ಟು ಸಾಧ್ಯಯೋ ಅಷ್ಟು,ಸಹಾಯ ಮಾಡಲು ನಾವು ಸಿದ್ಧ ಎಂದು ಬ್ರಿಟನ್‌ ತಿಳಿಸಿದೆ. ಭಾರತದ ವೈದ್ಯರ ಮೇಲಿನ ಒತ್ತಡಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತ ಮೂಲದ  ಬ್ರಿಟನ್ ವೈದ್ಯರ ಸಂಸ್ಥೆಯು (ಬಿಎಪಿಐಒ)  ತುರ್ತು ಆರೈಕೆಯ ಅವಶ್ಯಕತೆ ಇರುವ ರೋಗಿಗಳಿಗೆ ಆನ್‌ಲೈನ್‌ ಮೂಲಕವೇ ಸಲಹೆ, ಸೂಚನೆ ನೀಡುವ ಚಟುವಟಿಕೆಯನ್ನು ಆರಂಭಿಸಿದೆ.

ಭಾರತ ಪ್ರವಾಸವನ್ನು ಕೈಗೊಂಡ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್, ಕರೋನಾ ಹೆಚ್ಚಳದಿಂದಾಗಿ ಭಾರತ ಪ್ರವಾಸವನ್ನು ರದ್ದುಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆನ್‌ಲೈನ್ ಸಭೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

Related posts

Latest posts

ಇಸ್ರೇಲ್‌ vs ಫೆಲಸ್ತೀನ್: ಯಥಾಸ್ಥಿತಿ ಕಾಪಾಡುವಂತೆ ಭಾರತ ಆಗ್ರಹ

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ವಿಷಮ ಪರಿಸ್ಥಿತಿ ಕುರಿತಂತೆ ಭಾರತ ತನ್ನ ಹೇಳಿಕೆಯನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸಭೆಯಲ್ಲಿ ದಾಖಲಿಸಿದೆ. ಎರಡೂ ದೇಶಗಳು ಯತಾಸ್ಥಿತಿಯನ್ನು ಕಾಪಾಡಬೇಕೆಂದು ಒತ್ತಾಯಿಸಿರುವ ಭಾರತ, ಪರಸ್ಪರ ರಾಕೆಟ್‌ ದಾಳಿಯನ್ನು ಖಂಡಿಸಿದೆ. ಇಸ್ರೇಲ್‌ ಮತ್ತು ಫೆಲಸ್ತೀನ್‌...

ಕರೋನಾ ಪ್ರಕರಣ ಇಳಿಕೆಯಾಗಿದೆ ಅನ್ನುವುದು ಭ್ರಮೆ, ಭಾರತದ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ – ತಜ್ಞರ ಕಳವಳ

ಕೋವಿಡ್‌ ಸೋಂಕುಗಳಲ್ಲಿ ಕಳೆದೊಂದು ತಿಂಗಳಿನಿಂದ ತತ್ತರಿಸಿರುವ ಭಾರತ ಕ್ರಮೇಣ ಸೋಂಕಿನ ತೀವ್ರತೆ ಇಳಿಯುತ್ತಿರುವುದಾಗಿ ವರದಿ ಮಾಡುತ್ತಿದೆ. ಅದಾಗ್ಯೂ, ಕೋವಿಡ್‌ ಸಂಬಂಧಿತ ದೈನಂದಿನ ಸಾವಿನ ಪ್ರಮಾಣ ಈಗಲೂ 4 ಸಾವಿರಕ್ಕೂ ಹೆಚ್ಚಿದೆ. ಭಾರತದ ಗ್ರಾಮೀಣ...

ಬ್ಲಾಕ್ ಫಂಗಸ್: ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ, ಉಚಿತ ಚಿಕಿತ್ಸೆ ಕೊಡಿ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೋವಿಡ್ ನಿಂದಾಗಿ ಸಾವು...