• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಕದನ ವಿರಾಮ ಒಪ್ಪಂದ: ಭಾರತ ಮತ್ತು ಪಾಕಿಸ್ತಾನದ ನಡೆಯನ್ನು ಸ್ವಾಗತಿಸಿದ ವಿಶ್ವಸಂಸ್ಥೆ

by
April 21, 2021
in ವಿದೇಶ
0
ಕದನ ವಿರಾಮ ಒಪ್ಪಂದ: ಭಾರತ ಮತ್ತು ಪಾಕಿಸ್ತಾನದ ನಡೆಯನ್ನು ಸ್ವಾಗತಿಸಿದ ವಿಶ್ವಸಂಸ್ಥೆ
Share on WhatsAppShare on FacebookShare on Telegram

ಜಮ್ಮು ಮತ್ತು ಕಾಶ್ಮೀರದಲ್ಲಿರುವ‌ ಗಡಿ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಒಸಿ) ಈಗಿರುವ ಕದನ ವಿರಾಮ ನಿಯಮಗಳ ಎಲ್ಲ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳು ಒಪ್ಪಿರುವುದನ್ನು ವಿಶ್ವಸಂಸ್ಥೆಯ ನಾಯಕರು ಸ್ವಾಗತಿಸಿದ್ದಾರೆ. ಇದೊಂದು ಸಕರಾತ್ಮಕ ಹೆಜ್ಜೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟನಿಯೋ ಗುಟರೆಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

“… ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮವನ್ನು ಗಮನಿಸಲು ಮತ್ತು ಸ್ಥಾಪಿತ ಕಾರ್ಯವಿಧಾನಗಳ ಮೂಲಕ ತೊಡಗಿಸಿಕೊಳ್ಳಲು ಒಪ್ಪಂದದ ಕುರಿತು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳು ನೀಡಿದ ಜಂಟಿ ಹೇಳಿಕೆಯಿಂದ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ತುಂಬಾ ಉತ್ತೇಜಿತರಾಗಿದ್ದಾರೆ‘” ಎಂದು ವಿಶ್ವಸಂಸ್ಥೆ ಮುಖ್ಯಸ್ಥ ವಕ್ತಾರ ಸ್ಟೀಫನ್ ಡುಜಾರಿಕ್ ಗುರುವಾರ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

‘ಈ ಸಕಾರಾತ್ಮಕ ಬೆಳವಣಿಗೆ ಎರಡು ರಾಷ್ಟ್ರಗಳ ನಡುವೆ ಮುಂದೆ ನಡೆಯುವ ಮಾತುಕತೆಗಳಿಗೆ ಅವಕಾಶವನ್ನು ಕಲ್ಪಿಸಲಿದ್ದು, ಚರ್ಚೆಗೆ ದಾರಿಯೂ ಸುಗಮವಾಗಲಿದೆ ಎಂದು ಗುಟೆರಸ್‌ ಅಭಿಪ್ರಾಯಪಟ್ಟಿರುವುದಾಗಿ‘ ಡುಜಾರಿಕ್ ತಿಳಿಸಿದ್ದಾರೆ.

ಈ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರು ಎರಡು ರಾಷ್ಟ್ರಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡುಜಾರಿಕ್, ‘ಸದ್ಯಕ್ಕೆ ಅಂತ ಯೋಚನೆ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಒಳ್ಳೆಯ ಕೆಲಸಗಳಿಗೆ ಸ್ಪಂದಿಸಲು ಪ್ರಧಾನ ಕಾರ್ಯದರ್ಶಿಯವರು ಸದಾ ಸಿದ್ಧರಿರುತ್ತಾರೆ‘ ಎಂದು ಹೇಳಿದ್ದಾರೆ.

ವಿಶ್ವಸಂಸ್ಥೆಯ 75ನೇ ಮಹಾ ಅಧಿವೇಶನದ ಅಧ್ಯಕ್ಷ ವೋಲ್ಕನ್ ಬೊಜ್ಕಿಕರ್ ಅವರು, ‘ಗಡಿ ಭಾಗದಲ್ಲಿ ಕದನವಿರಾಮದ ನಿಯಮಗಳನ್ನು ಪಾಲಿಸಲು ಒಪ್ಪಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ ನಡೆಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ‘ ಎಂದು ಟ್ವೀಟ್ ಮಾಡಿದ್ದಾರೆ.

ಗಡಿಭಾಗದಲ್ಲಿನ ಉದ್ವಿಗ್ನತೆ ಕಡಿಮೆ ಮಾಡುವ ಮಹತ್ವದ ಕ್ರಮದಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನೆಯ ಅಧಿಕಾರಿಗಳು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕದನ ವಿರಾಮಕ್ಕೆ ಸಂಬಂಧಿಸಿದ ಎಲ್ಲಾ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಒಪ್ಪಿಕೊಂಡಿದ್ದಾರೆ.

ಕಳೆದ ವಾರವಷ್ಟೇ, ಕಣಿವೆ ರಾಜ್ಯದ ಹಿರಿಯ ರಾಜಕಾರಣಿ ಮೆಹಬೂಬಾ ಮುಫ್ತಿ ಕಾಶ್ಮೀರದಲ್ಲಿ ಶಾಂತಿ ಕಾಪಾಡಲು ಕೇಂದ್ರ ಸರ್ಕಾರ ಮುಂದಾಗಬೇಕು. ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಿ ತಾರ್ಕಿಕ ಅಂತ್ಯಕ್ಕೆ ಬರುವಂತೆ ಮುಫ್ತಿ ಆಗ್ರಹಿಸಿದ್ದರು.

Source: IE, DTnext

Previous Post

ದಲಿತ ಕಾರ್ಮಿಕ ಹೋರಾಟಗಾರ್ತಿ ನೋದೀಪ್‌ ಕೌರ್‌ಗೆ ಜಾಮೀನು ನೀಡಿದ ಪಂಜಾಬ್-ಹರಿಯಾಣ ಕೋರ್ಟ್

Next Post

ನೀರವ್‌ ಮೋದಿ ʼಸ್ವಾಗತʼಕ್ಕೆ ಅಣಿಯಾದ ಮುಂಬೈ ಆರ್ಥರ್‌ ರೋಡ್‌ ಜೈಲು

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ವಿದೇಶ

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

by ಪ್ರತಿಧ್ವನಿ
April 27, 2026
0

 ಅಮೆರಿಕದಲ್ಲಿ H-1B ವೀಸಾ ನೀತಿಯನ್ನು ಕಠಿಣಗೊಳಿಸುವ ನಿಟ್ಟಿನಲ್ಲಿ ರಿಪಬ್ಲಿಕನ್ ಶಾಸಕರ ಗುಂಪೊಂದು ಹೊಸ ಮಸೂದೆಯನ್ನು ಮಂಡಿಸಿದ್ದು, ಇದು ವಿದೇಶಿ ಉದ್ಯೋಗಿಗಳ, ವಿಶೇಷವಾಗಿ ಭಾರತೀಯರ ನಡುವೆ ಆತಂಕವನ್ನು ಹೆಚ್ಚಿಸಿದೆ.ಅರಿಜೋನಾ...

Read moreDetails
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post
ನೀರವ್‌ ಮೋದಿ ʼಸ್ವಾಗತʼಕ್ಕೆ ಅಣಿಯಾದ ಮುಂಬೈ ಆರ್ಥರ್‌ ರೋಡ್‌ ಜೈಲು

ನೀರವ್‌ ಮೋದಿ ʼಸ್ವಾಗತʼಕ್ಕೆ ಅಣಿಯಾದ ಮುಂಬೈ ಆರ್ಥರ್‌ ರೋಡ್‌ ಜೈಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada