ಅನಾರೋಗ್ಯದ ಹಿನ್ನೆಲೆಯಲ್ಲಿ ಭೂಗತ ಪಾತಕಿ ರವಿ ಪೂಜಾರಿ (Ravi Poojary) ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಹರ್ನಿಯಾ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಾಗಿದ್ದಾನೆ. 60ಕ್ಕೂ ಅಧಿಕ ಕ್ರಿಮಿನಲ್ ಕೇಸ್ ಗಳಲ್ಲಿ ಭಾಗಿಯಾಗಿರುವ ರವಿ ಪೂಜಾರಿ ಮೇಲೆ ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿ ಹಲವೆಡೆ ಪ್ರಕರಣ ದಾಖಲಾಗಿವೆ. ಭೂಗತವಾಗಿದ್ದುಕೊಂಡೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರವಿ ಪೂಜಾರಿಯನ್ನು ಅರೆಸ್ಟ್ ಮಾಡಲು ಭಾರತದ ತನಿಖಾ ಸಂಸ್ಥೆಗಳು ಸೆನೆಗಲ್ ದೇಶದೊಂದಿಗೆ ಸಂಪರ್ಕದಲ್ಲಿದ್ದವು.
![](https://pratidhvani.com/wp-content/uploads/2024/05/Arrest-1-1024x576.jpeg)
ಹೀಗಾಗಿ ರವಿ ಪೂಜಾರಿಯನ್ನು 2019 ರಲ್ಲಿ ಸೆನೆಗಲ್ ಪೊಲೀಸರು ಬಂಧಿಸಿದ್ದರು. ವಿಚಾರಣೆ ನಂತರ ರವಿ ಪೂಜಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದ. ಈಗ ಶಸ್ತ್ರಚಿಕಿತ್ಸೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.