• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೇಂದ್ರ ಸಚಿವ ಸಂಪುಟ ಪುನರ್ರಚನೆ: ರಾಜ್ಯದಿಂದ ‘ಡಜನ್’ ಆಕಾಂಕ್ಷಿಗಳು

ಯದುನಂದನ by ಯದುನಂದನ
July 5, 2021
in ದೇಶ
0
ಕೇಂದ್ರ ಸಚಿವ ಸಂಪುಟ ಪುನರ್ರಚನೆ: ರಾಜ್ಯದಿಂದ ‘ಡಜನ್’ ಆಕಾಂಕ್ಷಿಗಳು
Share on WhatsAppShare on FacebookShare on Telegram

ಹೆಚ್ಚು ಕಡಿಮೆ ಎರಡು ವರ್ಷದಿಂದ ನೆನೆಗುದಿಗೆ ಬಿದ್ದಿರುವ ಕೇಂದ್ರ ಸಚಿವ ಸಂಪುಟ ಪುನರ್ರಚನೆ ಎಂಬ ಗಜಪ್ರಸವ ಈಗ ಎರಡೋ ಮೂರೋ ದಿನದಲ್ಲಿ ಆಗುವ ಲಕ್ಷಣಗಳು ಕಾಣಿಸುತ್ತಿವೆ. ಒಟ್ಟು 27 ಸ್ಥಾನಗಳು ಖಾಲಿ ಇದ್ದು 15ಕ್ಕೂ ಹೆಚ್ಚು ಸ್ಥಾನಗಳನ್ನು ತುಂಬಲಾಗುತ್ತದೆ. ಮುಂದಿನ ವರ್ಷ ಚುನಾವಣೆ ನಡೆಯುವ ಉತ್ತರ ಪ್ರದೇಶ, ಗುಜರಾತ್, ಉತ್ತರಖಂಡ, ಹಿಮಾಚಲ ಪ್ರದೇಶ, ಪಂಜಾಬ್ ರಾಜ್ಯಗಳನ್ನು ದೃಷ್ಟಿಯಲ್ಲಿ ಸಂಪುಟ ಪುನರ್ರಚನೆ ಆಗಲಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಿಂದ ಈ ಬಾರಿ ಯಾರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬುದು ಕುತೂಹಲಕಾರಿಯಾದ ಸಂಗತಿಯಾಗಿದೆ.

ADVERTISEMENT

ರೈಲ್ವೆ ಸಚಿವರಾಗಿದ್ದ ಸುರೇಶ್ ಅಂಗಡಿ ಕರೋನಾದಿಂದ ಮೃತಪಟ್ಟರು. ಅವರಿಂದ ತೆರವಾಗಿರುವ ಮಂತ್ರಿ ಸ್ಥಾನ ಖಾಲಿ ಇದೆ. ಆದುದರಿಂದ ರಾಜ್ಯಕ್ಕೆ ಕನಿಷ್ಠ ಒಂದು ಸಚಿವ ಸ್ಥಾನವಾದರೂ ಸಿಗಲಿದೆ ಎಂಬ ಲೆಕ್ಕಾಚಾರದೊಂದಿಗೆ ರಾಜ್ಯದಿಂದ 25 ಬಿಜೆಪಿ ಲೋಕಸಭಾ ಸದಸ್ಯರನ್ನು ಆರಿಸಿ ಕಳುಹಿಸಿರುವುದರಿಂದ ಎರಡು ಸ್ಥಾನ ಸಿಗಬಹುದು ಎಂಬ ಅಂದಾಜು-ನಿರೀಕ್ಷೆಗಳು ಕೇಳಿಬರುತ್ತಿವೆ. ಹಿಂದೆ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವ ನಿರ್ಮಲಾ ಸೀತಾರಾಮನ್ ಅವರನ್ನು ಹೊರತುಪಡಿಸಿಯೂ ನಾಲ್ಕು‌ ಸಚಿವ ಸ್ಥಾನ ಸಿಕ್ಕಿದ್ದ ಹಿನ್ನಲೆಯಲ್ಲಿ ಇಂಥ ನಿರೀಕ್ಷೆ ಹುಟ್ಟುಕೊಂಡಿದ

ಸದ್ಯ ರಾಜ್ಯದಿಂದ ಕೇಂದ್ರ ಸಚಿವರಾಗಿರುವವರ ಪೈಕಿ ಡಿ.ವಿ. ಸದಾನಂದಗೌಡ ಹಾಗೂ ಪ್ರಹ್ಲಾದ್ ಜೋಶಿ ಬಹುತೇಕ ಮುಂದುವರೆಯುತ್ತಾರೆ. ಮೊದಲಿಗೆ ಸದಾನಂದಗೌಡರನ್ನು ಸಂಪುಟದಿಂದ ಕೈಬಿಡಲಾಗುತ್ತಿತ್ತು ಎಂಬ ಚರ್ಚೆ ನಡೆಯುತ್ತಿತ್ತು. ಆದರೆ ಕರೋನಾ ಸಂದರ್ಭದಲ್ಲಿ ಸದಾನಂದಗೌಡರು ಸಮರ್ಥವಾಗಿ ಕೆಲಸ ಮಾಡಿದ್ದಾರೆ ಎಂಬ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮೆಚ್ಚುಗೆ ಇದೆ. ಮಂತ್ರಿಗಳ ಸಭೆಯಲ್ಲಿ ಅವರು ಅದನ್ನು ಹೇಳಿದ್ದಾರೆ. ಹಾಗಾಗಿ ಸದಾನಂದಗೌಡರ ಸ್ಥಾನಕ್ಕೆ ಧಕ್ಕೆ ಇಲ್ಲ. ಒಂದೊಮ್ಮೆ ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರು ಪರಿಗಣಿಸುವುದಾದರೆ ಮಾತ್ರ ಪ್ರಹ್ಲಾದ್ ಜೋಶಿ ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ. ಇಲ್ಲದಿದ್ದರೆ ಅವರು ಕೂಡ ಮುಂದುವರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಹೊಸಬರ ವಿಷಯಕ್ಕೆ ಬರುವುದಾದರೆ ಸಿಗುವ ಒಂದೋ ಅಥವಾ ಎರಡೋ ಸ್ಥಾನಕ್ಕೆ ಒಂದು ಡಜನ್ ಆಕಾಂಕ್ಷಿಗಳಿದ್ದಾರೆ. ಅವರುಗಳೆಂದರೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಹಾವೇರಿ ಸಂಸದ ಶಿವಕುಮಾರ್ ಉದಾಸಿ, ಕೊಪ್ಪಳ ಸಂಸದ ಕರಡಿ‌ ಸಂಗಣ್ಣ, ಬೀದರ್ ಸಂಸದ ಭಗವಂತ ಖೂಬಾ, ಬಾಗಲಕೋಟೆ ಸಂಸದ ಪಿ.ಸಿ. ಗದ್ದೀಗೌಡರ್, ಗುಲ್ಬರ್ಗ ಸಂಸದ ಉಮೇಶ್ ಜಾಧವ್, ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ. ಮೋಹನ್, ಚಿತ್ರದುರ್ಗದ ಸಂಸದ ಎ. ನಾರಾಯಣಸ್ವಾಮಿ, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಮೈಸೂರು ಸಂಸದ ಪ್ರತಾಪ ಸಿಂಹ, ಬಿಜಾಪುರ ಸಂಸದ ರಮೇಶ್ ಜಿಗಜಿಣಗಿ ಹಾಗೂ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್.

ಇವರ ಪೈಕಿ ಯಾರಿಗೂ ಹೈಕಮಾಂಡಿನಿಂದ ಯಾರೊಬ್ಬರೂ ‘ನಿಮ್ಮನ್ನು ಮಂತ್ರಿ ಮಾಡುತ್ತೇವೆ’ ಎಂದು ಭರವಸೆ ಕೊಟ್ಟಿಲ್ಲ. ಆದರೆ ಎಲ್ಲರೂ ತಮ್ಮ ತಮ್ಮದೇ ಲೆಕ್ಕಾಚಾರದೊಂದಿಗೆ ‘ಸಚಿವ ಸ್ಥಾನ ಸಿಗಬಹುದು’ ಎಂದುಕೊಂಡಿದ್ದಾರೆ. ಎಲ್ಲಕ್ಕಿಂತ ಹೆಚ್ಚು ಚರ್ಚೆ ಆಗುತ್ತಿರುವ ಹೆಸರು ಬಿ.ವೈ. ರಾಘವೇಂದ್ರ ಅವರದು. ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ವಿಷಯ ಚರ್ಚೆ ರಾಘವೇಂದ್ರ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಂಗತಿಯೊಂದಿಗೆ ತಳುಕು ಹಾಕಿಕೊಂಡಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದರೆ ಅಥವಾ ನಿರ್ಧರಿಸುವುದಾದರೆ ತಮಗೆ ಸಚಿವ ಸ್ಥಾನ‌ ಹುಡುಕಿಕೊಂಡು ಬರಲಿದೆ ಎಂಬುದು ರಾಘವೇಂದ್ರ ಲೆಕ್ಕಾಚಾರ.

ತೆರವಾಗಿರುವ ಸ್ಥಾನ ಲಿಂಗಾಯತರದ್ದಾಗಿರುವುದರಿಂದ ಜಾತಿ ಲೆಕ್ಕಾಚಾರ ಚುಕ್ತಾ ಮಾಡಲು ಮತ್ತು ಅದಕ್ಕೂ ಮಿಗಿಲಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಯಡಿಯೂರಪ್ಪ ಅವರನ್ನು ಸಮಾಧಾನ ಪಡಿಸಲು ಸಾಧನ ಆಗಲಿದೆ ಎಂಬ ಕಾರಣಕ್ಕೆ ರಾಘವೇಂದ್ರಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇವರಿಗೆ ತೀವ್ರವಾಗಿ ಪೈಪೋಟಿ ನೀಡುತ್ತಿರುವವರು ಹಾವೇರಿ ಸಂಸದ ಶಿವಕುಮಾರ್ ಉದಾಸಿ.‌ ಲಿಂಗಾಯತ ಎನ್ನುವುದರ ಜೊತೆಗೆ ವಿದ್ಯಾವಂತ, ಸಂಸದೀಯ ಸ್ಥಾಯಿ ಸಮಿತಿಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ ಎಂಬ ಹೆಚ್ಚುಗಾರಿಕೆ ಇದೆ. ಹಾಗಾಗಿ ತನ್ನ ಹೆಸರನ್ನು ಪರಿಗಣಿಸಬಹುದು ಎಂಬುದು ಶಿವಕುಮಾರ್ ಉದಾಸಿ ಲೆಕ್ಕಾಚಾರ.

ಇನ್ನೊಂದು ಆಸಕ್ತಿಕರ‌ ವಿಚಾರ ಕೇಳಿಬರುತ್ತಿದೆ.‌ ತಮ್ಮ ವಿರುದ್ಧ ಬಂಡಾಯ ಎದ್ದಿರುವ ಪಂಚಮಸಾಲಿ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರಿಗೆ ಸಚಿವ ಸ್ಥಾನ‌ ಕೊಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಲಾಭಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಲಿಂಗಾಯತ ಎನ್ನುವ ಜೊತೆಗೆ ಬಾಬಾ ರಾಮದೇವ್ ಪ್ರಭಾವದಿಂದ ತನಗೆ ಸಚಿವ ಸ್ಥಾನ ಸಿಗಲಿದೆ ಎಂದು ಬೀದರ್ ಸಂಸದ  ಭಗವಂತ ಖೂಬಾ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಲಿಂಗಾಯತರ ಪೈಕಿ ತಾವೇ‌ ಹಿರಿಯರಾಗಿದ್ದು ತಮಗೇ ಸಚಿವ ಸ್ಥಾನ ಎಂಬುದು ಬಾಗಲಕೋಟೆ ಸಂಸದ ಪಿ.ಸಿ. ಗದ್ದೀಗೌಡರ್ ಅವರ ವಿಶ್ವಾಸ.

ಲೋಕಸಭೆಯ ಪ್ರತಿಪಕ್ಷದ ನಾಯಕರಾಗಿದ್ದ ಹಾಗೂ ನರೇಂದ್ರ ಮೋದಿ ವಿರುದ್ಧ ನೇರ ವಾಗ್ದಾಳಿ ಮಾಡುವ ಮುತ್ಸದಿ ರಾಜಕಾರಣಿ ಹಾಗೂ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪರಾಭವಗೊಳಿಸಿದ ಕಾರಣಕ್ಕೆ ತನಗೆ ಮಂತ್ರಿ ಸ್ಥಾನ ನೀಡಬಹುದೆಂದು ಗುಲ್ಬರ್ಗ ಸಂಸದ ಉಮೇಶ್ ಜಾಧವ್ ನಂಬಿಕೊಂಡಿದ್ದಾರೆ. ದಲಿತರ ಪೈಕಿ ಮತ್ತೊಮ್ಮೆ ತಮ್ಮ ಹೆಸರನ್ನು ಪರಿಗಣಿಸಬಹುದೆಂದು ಮಾಜಿ ಸಚಿವ ರಮೇಶ್ ಜಿಗಜಿಣಗಿ ಆಸೆ ಇಟ್ಟುಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬೆಂಬಲಿಸುತ್ತಿರುವ ದಲಿತ ಎಡಗೈ‌ ಸಮುದಾಯದಿಂದ ಈ ಬಾರಿ ಹೊಸಬರಿಗೆ ಅವಕಾಶ ನೀಡುತ್ತಾರೆ, ಅದು ನಾನೇ ಎನ್ನುವುದು ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಲೆಕ್ಕಾಚಾರ.

ರಾಜ್ಯದಲ್ಲಿ ಹಿಂದುಳಿದ ವರ್ಗದ ಪ್ರಬಲ ನಾಯಕ‌ ಸಿದ್ದರಾಮಯ್ಯ ವಿರುದ್ಧ ಹಿಂದುಳಿದ ವರ್ಗಗಳನ್ನು ಸಂಘಟನೆ ಮಾಡಲು ಈ ಸಲ ಕೇಂದ್ರ ಸರ್ಕಾರದಲ್ಲಿ ಹಿಂದುಳಿದ ಜಾತಿಗಳಿಗೆ  ಪ್ರಾತಿನಿಧ್ಯ ನೀಡಬಹುದು. ತನ್ನ ಹೆಸರನ್ನು ಪರಿಗಣಿಸಬಹುದು ಎಂದು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ನಿರೀಕ್ಷೆ ಹೊಂದಿದ್ದಾರೆ.‌ ಡಿ.ವಿ. ಸದಾನಂದಗೌಡ ಅವರನ್ನು ಸಂಪುಟದಿಂದ ಕೈಬಿಟ್ಟರೆ ಒಕ್ಕಲಿಗ ಸಮುದಾಯದ ತಮ್ಮನ್ನು ಪರಿಗಣಿಸಬಹುದೆಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮತ್ತು ‌ಮೈಸೂರು ಸಂಸದ ಪ್ರತಾಪ್ ಸಿಂಹ ಕನಸು ಕಾಣುತ್ತಿದ್ದಾರೆ. ಪುದುಚೇರಿಯಲ್ಲಿ ಎನ್ ಡಿಎ ಸರ್ಕಾರ ರಚಿಸಿದ ಕಾರಣಕ್ಕೆ ಹಾಗೂ ಕೇರಳ ರಾಜ್ಯದ ಪ್ರಾತಿನಿಧ್ಯ ನೀಡಲು ತಮಗೂ ಸಚಿವ ಸ್ಥಾನ ನೀಡಬಹುದು ಎಂದು ರಾಜೀವ್ ಚಂದ್ರಶೇಖರ್ ಲೆಕ್ಕಾಚಾರ. 

Previous Post

ಮುಸ್ಲಿಮರನ್ನು ಭಾರತ ಬಿಟ್ಟು ಹೋಗಬೇಕು ಎಂದು ಹೇಳುವ ವ್ಯಕ್ತಿ ಹಿಂದುವೇ ಅಲ್ಲ: ಮೋಹನ್ ಭಾಗವತ್

Next Post

ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡಲಾಗುತ್ತದೆ: ಸಚಿವ ಆರ್.ಅಶೋಕ್ ಎಚ್ಚರಿಕೆ

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025
Next Post
ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡಲಾಗುತ್ತದೆ: ಸಚಿವ ಆರ್.ಅಶೋಕ್ ಎಚ್ಚರಿಕೆ

ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡಲಾಗುತ್ತದೆ: ಸಚಿವ ಆರ್.ಅಶೋಕ್ ಎಚ್ಚರಿಕೆ

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada