ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ನಡೆಸುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.

ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದಾದ್ಯಂತ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.

ನವದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹಾಗೂ ವಿದ್ಯಾರ್ಥಿಗಳು 2026ರ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ, ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪದೋಷಗಳು ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕೈಗೆತ್ತಿಕೊಂಡಿದ್ದರು. ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ದೇಶದಾದ್ಯಂತ ಸಂಚಲನ ಮೂಡಿಸಿತ್ತು.







