• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
October 23, 2025
in Top Story, ಕರ್ನಾಟಕ, ರಾಜಕೀಯ
0
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕಕ್ಕೆ ಬರಬೇಕಾಗಿದ್ದ ಅನುದಾನ ವಿಚಾರದಲ್ಲಿ ಒಕ್ಕೂಟ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ತನ್ನ ಬುಡಕ್ಕೆ ತಾನೇ ಕೊಡಲಿ ಪೆಟ್ಟು ಹಾಕಿಕೊಂಡಿದ್ದು, ಕೇಂದ್ರದ ವಿರುದ್ಧ ಮಾತನಾಡುವುದು ಹಾಸ್ಯಾಸ್ಪದ ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಈ ಬಗ್ಗೆ ಸಾಮಾಜಿಕ ಜಾಲತಾಣ X ನಲ್ಲಿ ಬರೆದುಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ, ರಾಜ್ಯದ ಅಭಿವೃದ್ಧಿಯನ್ನು ಮೂಲೆಗುಂಪು ಮಾಡಿ,‌ ಆರ್ಥಿಕ ಸ್ಥಿತಿಗತಿಗಳನ್ನು ಹಳ್ಳಕ್ಕೆ ತಳ್ಳಿ, ಇಂದು ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ನಿಂತಿದೆ. ರಾಜ್ಯಕ್ಕೆ ಅನುದಾನ ಇಲ್ಲ ಎಂದು ಆರೋಪ ಮಾಡುವ ಸಿಎಂ ಸಿದ್ದರಾಮಯ್ಯನವರು ರಾಜ್ಯದ ‌ಆರ್ಥಿಕತೆಯನ್ನು ಹಾಳು ಮಾಡಿ, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Krishna byregowda : ಎಲ್ಲ್ಲಾ ಅಧಿಕಾರಿಗಳು  ಕೆಲಸ  ಮಾಡಿದ್ದೀರಾ.. ಸಚಿವ ಕೃಷ್ಣ ಬೈರೇಗೌಡ #pratidhvani

ಸುಮಾರು 30ಕ್ಕೂ ಹೆಚ್ಚು ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸಿ, ರಾಜ್ಯದ ಜನರ ರಕ್ತ ಹೀರುತ್ತಿರುವ ಕಾಂಗ್ರೆಸ್ ಪಕ್ಷ, ರಾಜ್ಯಕ್ಕೆ ಬರುತ್ತಿರುವ ಎಲ್ಲಾ‌ ಹಣವನ್ನು ಅವೈಜ್ಞಾನಿಕ ಗ್ಯಾರಂಟಿಗಳಿಗೆ ಬಳಸಿಕೊಳ್ಳುವ ಮೂಲಕ ಸುಭೀಕ್ಷವಾಗಿದ್ದ ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿದೆ.

ಹೆಚ್ಚುವರಿ ಆದಾಯವಾಗಿದ್ದ ರಾಜ್ಯದಲ್ಲಿ ಇಂದು ₹80,000 ಕೋಟಿಗಳಷ್ಟು‌ ಸಾಲ ಏರಿಕೆ, ₹8 ಲಕ್ಷ ಕೋಟಿಗೂ ಅಧಿಕ‌ ಆರ್ಥಿಕ ಹೊರೆ, ಬಂಡವಾಳ ‌ಶಾಹಿಗಳು‌ ರಾಜ್ಯದಿಂದ ದೂರು ಹೋಗುವ ಪ್ರಸಂಗಕ್ಕೆ ಕಾರಣೀಭೂತರಾಗಿ ಇಂದು ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ

ಇನ್ನು ದೇಶದಲ್ಲಿ 60 ವರ್ಷಗಳ ಕಾಲ ಆಡಳಿತ ನಡೆಸಿದ ಯುಪಿಎ, ತನ್ನ ಅವಧಿಯಲ್ಲಿ 27 ಕ್ಕೂ ಹೆಚ್ಚು ರೀತಿಯ ತೆರಿಗೆಗಳನ್ನು, ಕಂಡ ಕಂಡ ಹಾಗೆ ಜನರ ಮೇಲೆ ವಿಧಿಸಿ, ಜನರ ಬದುಕನ್ನೇ ಮೂರಾಬಟ್ಟೆ ಮಾಡಿ, ಬೀದಿಗೆ ತಳ್ಳಿದ ದಿನಗಳು ಇತಿಹಾಸ. ಆದರೆ, ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಾಮಾನ್ಯ ಜನರ ಜೀವನವನ್ನು ಸುಲಭಗೊಳಿಸಿ, 99% ವಸ್ತುಗಳ ಮೇಲಿನ ತೆರಿಗೆಯನ್ನು ಶೂನ್ಯ ಅಥವಾ 5% ಕ್ಕೆ ಇಳಿಸಿದೆ. ಆದಾಯ ತೆರಿಗೆ ಸ್ಲ್ಯಾಬ್ ಅನ್ನು ಹೆಚ್ಚಿಸಿದೆ.

ದುರಾಡಳಿತದಿಂದ ರಾಜ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. 2023-24ರಲ್ಲಿ ಸಿಎಜಿ ವರದಿಯಲ್ಲಿ ರಾಜ್ಯ ಮಾಡಿದ ಸಾಲವು ₹63,000 ಕೋಟಿಗಳಷ್ಟಿಗೆ ಏರಿಕೆ ಆಗಿದೆ, ಅಲ್ಲದೆ ಮೂಲಸೌಕರ್ಯ ನಿಧಿಯಿಂದ ಇತರ ಯೋಜನೆಗಳಿಗೆ ತಿರುಗಿಸಲ್ಪಟ್ಟಿರುವುದು ಬಹಿರಂಗವಾಗಿದೆ. ಇದು ನಿಮ್ಮ ಸರ್ಕಾರದ ಕೊಡುಗೆ ಎಂದು ತೆರಿಗೆ ತಾರತಮ್ಯ ಸಮರದಲ್ಲಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

Tags: BJPbjp pralhad joshicm siddaramaiah vs pralhad joshiCongress Partymp pralhad joshiprahlad joshi on siddaramaiahPralhad Joshipralhad joshi and siddaramaiah in one stagepralhad joshi hublipralhad joshi kannadapralhad joshi lashes out at cm siddaramaiahpralhad joshi on siddaramaiahpralhad joshi slams cm siddaramaiahpralhad joshi slams siddaramaiahpralhad joshi vs cm siddaramaiahpralhad joshi vs siddaramaiahsiddaramaiah vs prahlad joshiunion minister pralhad joshi on siddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

Next Post

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada