ವಿಧ್ವಂಸಕ ಕೃತ್ಯಗಳ ಮೂಲಕ ದೇಶದ ಶಾಂತಿ ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದೆ ಎಂದು ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು(PFI) 5 ವರ್ಷಗಳ ಕಾಲ ನಿಷೇಧಿಸಿ ಆದೇಶ ಹೊರಡಿಸಿದೆ.
ಈ ಕುರಿತು ವಿಸ್ತೃತ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರವು ನಿಷೇಧದ ಬಗ್ಗೆ ನಿಖರ ಕಾರಣಗಳನ್ನು ತಿಳಿಸಿದೆ.
ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಸಂಘಟನೆ ಜೊತೆ ಗುರುತಿಸಿಕೊಂಡಿದ್ದ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ನಿರಂತರವಾಗಿ ದಾಳಿ ನಡೆಸಿತ್ತು.