ಕೇಂದ್ರ ಗೃಹ ಸಚಿವ ಅಮಿತ್ ಶಾ ( Amith shah ) ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದು, ಮಾರತ್ತಹಳ್ಳಿಯಲ್ಲಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸುವ ಬಗ್ಗೆ ಈವರೆಗೆ ನಿರ್ಧಾರವಾಗಿಲ್ಲ. ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ, ಅರವಿಂದ ಲಿಂಬಾವಳಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶುಕ್ರವಾರ ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಮಾರತ್ತಹಳ್ಳಿಯಲ್ಲಿ ನಡೆಯಲಿರುವ ‘‘ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa), ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ಮಾಜಿ ಸಚಿವ ಅರವಿಂದ ಲಿಂಬಾವಳಿ ( Aravinda limbavali ) ಕೂಡ ವೇದಿಕೆ ಹಂಚಿಕೊಳ್ಳಲಿದ್ದಾರೆ. ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.

ಆದರೆ, ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ರಾಜ್ಯ ಬಿಜೆಪಿ ಬೆಳವಣಿಗೆಗಳ ಕುರಿತು ಕರ್ನಾಟಕದ ನಾಯಕರ ಯಾವುದೇ ಭೇಟಿ ನಿಗದಿಯಾಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.