• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಕ್ಕಲಿಗರನ್ನು ಸಿಎಂ ಮಾಡುವುದು ಕಾಂಗ್ರೆಸ್ಸೇ ಎನ್ನುವುದಾದರೆ, ತತ್‌ʼಕ್ಷಣಕ್ಕೇ ನೀವು ಕುರ್ಚಿ ಬಿಡಬೇಕಲ್ಲವೇ? : ಸಿದ್ದು ಕುಟುಕಿ ಡಿಕೆ ಪರ ದಳಪತಿ ಬ್ಯಾಟಿಂಗ್..!

•ಒಕ್ಕಲಿಗರನ್ನು ಬೆಳೆಸಿದ್ದು ಕಾಂಗ್ರೆಸ್ಸು ಅಂತೀರಿ..‌ ಬರೀ ಬುರುಡೆ.. ವಿಧಾನಸೌಧ ಕಟ್ಟಿದ ಕೆಂಗಲ್‌ ಅವರಿಗೆ ನಿಮ್ಮ ನೆಹರು ಕೊಟ್ಟ ಕಿರುಕುಳ, ಮಾಡಿದ ಅಪಮಾನ ಅಷ್ಟಿಷ್ಟಾ? : ದಳಪತಿ ಪ್ರಶ್ನೆ..

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಒಕ್ಕಲಿಗರನ್ನು ಸಿಎಂ ಮಾಡುವುದು ಕಾಂಗ್ರೆಸ್ಸೇ ಎನ್ನುವುದಾದರೆ, ತತ್‌ʼಕ್ಷಣಕ್ಕೇ ನೀವು ಕುರ್ಚಿ ಬಿಡಬೇಕಲ್ಲವೇ? : ಸಿದ್ದು ಕುಟುಕಿ ಡಿಕೆ ಪರ ದಳಪತಿ ಬ್ಯಾಟಿಂಗ್..!
Share on WhatsAppShare on FacebookShare on Telegram

ಬೆಂಗಳೂರು : ಸಿದ್ದರಾಮಯ್ಯನವರೇ, ನಾನು ಸುತ್ತಿಬಳಸಿ ಮಾತನಾಡಲ್ಲ. ನೇರವಾಗಿ ವಿಷಯಕ್ಕೇ ಬರುತ್ತೇನೆ ನೀವು ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂದು ನಾನು ತಮಾಷೆಗೆ ಹೇಳಿದ್ದಲ್ಲ, ಸೀರಿಯಸ್ಸಾಗೇ ಹೇಳಿದ್ದೇನೆ. ತಮಾಷೆಗೆ ಹೇಳಿದ್ದೇನೆ ಎಂದಿಟ್ಟುಕೊಳ್ಳಿ, ನೀವು ಇಷ್ಟುದ್ದ ಉತ್ತರ ಬರೆಯುವ ಅಗತ್ಯವಿರಲಿಲ್ಲ. ಈ ಬಗ್ಗೆ ನೀವು ಸೀರಿಯಸ್‌ ಆಗಿದ್ದೀರಿ ಎಂಬುದನ್ನು ಬಲ್ಲೆ. ಹಾಗಿದ್ದರೂ ನನ್ನ ಹೇಳಿಕೆಯನ್ನು ನೀವು ತಮಾಷೆಯಾಗಿಯೇ ಸ್ವೀಕರಿಸಿ, ಅಭ್ಯಂತರವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ADVERTISEMENT
Parameshwar on Power : ಸಿದ್ದು - ಹೆಚ್‌ಡಿಕೆ ಟಾಕ್‌ ವಾರ್..ಪರಮೇಶ್ವರ್‌ ಶಾಕಿಂಗ್‌ ರಿಯಾಕ್ಷನ್.. #pratidhvani

•ಸಾಮಾಜಿಕ ನ್ಯಾಯದ ಸೋಗುಕಾರ, ಸಾಮಾಜಿಕ ನ್ಯಾಯದ ಸಂಹಾರಿ ನೀವು. ನಿಮಗೆ ರಾಜಕೀಯ ಶಕ್ತಿ-ಬದುಕು ಕೊಟ್ಟ ದೇವೇಗೌಡರ ಕಡೆ ಬೆಟ್ಟು ಮಾಡುವುದು ಆಘಾತಕಾರಿ. ಇವತ್ತು ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಎಂಬ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ. ನೀವೂ ಅವರ ಸಾಮಾಜಿಕ ನ್ಯಾಯದ ಫಲ ಮತ್ತು ಫಲಾನುಭವಿ. ಸ್ವಜಾತಿ, ಕುಟುಂಬ ಎಂದು ಅವರು ಆವತ್ತೇ ಭಾವಿಸಿದ್ದಿದ್ದರೆ ನೀವು ಹಣಕಾಸು ಮಂತ್ರಿ ಆಗುವುದಿರಲಿ, ಅಟ್‌ಲೀಸ್ಟ್ ಒಂದು ನಿಗಮದ ಅಧ್ಯಕ್ಷಗಿರಿಯೂ ದಕ್ಕುತ್ತಿರಲಿಲ್ಲ. ಅಂದು ನಿಮ್ಮನ್ನು ಹಣಕಾಸು ಮಂತ್ರಿ ಮಾಡಲೇಬೇಕೆಂದು ಹಠತೊಟ್ಟ ಗೌಡರಿಗೆ ಅವತ್ತಿನ ಅವರ ಸಮಕಾಲೀನರು ನಿಮ್ಮ ಬಗ್ಗೆ ಏನೆಲ್ಲಾ ಗುಣಾವಗಾನ ಮಾಡಿ ಬಣ್ಣಿಸಿದ್ದರೆನ್ನುವುದು ನಿಮಗೆ ತಿಳಿದಿರಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನೀವು ಪಟ್ಟಿ ಮಾಡಿರುವ ಒಕ್ಕಲಿಗ ನಾಯಕರ ಹೆಸರುಗಳನ್ನು ಓದಿದೆ. ಪಾಪ.. ನೀವು ಅವರ ಹೆಸರುಗಳನ್ನ ಉಲ್ಲೇಖಿಸಿ ಅವರನ್ನೂ ಅಪಹಾಸ್ಯ ಮಾಡಿದ್ದೀರಿ. ನೀವೂ ಅಪಹಾಸ್ಯಕ್ಕೆ ತುತ್ತಾಗಿದ್ದಲ್ಲದೆ, ನಗೆಪಾಟಲಿಗೀಡಾಗಿದ್ದೀರಿ. ನಿಮ್ಮ ರಾಜಕೀಯ ಸ್ವಾರ್ಥಕ್ಕೆ ಆ 13 ಜನರ ಶೆಲ್ಟರ್‌ ಪಡೆದಿದ್ದೀರಿ, ಸರಿ. ಹಾಗಿದ್ದರೆ ಅವರೆಲ್ಲರೂ ದೇವೇಗೌಡರಿಂದ ಅಧಿಕಾರ ಅನುಭವಿಸಲೇ ಇಲ್ಲವೇ? ಆಗ ಅವರೆಲ್ಲರೂ ಕೂತಿದ್ದ ಅಧಿಕಾರ ಸ್ಥಾನಗಳಲ್ಲಿ ದೇವೇಗೌಡರೇ ಕೂತಿದ್ದರಾ? ಅವರೆಲ್ಲರೂ ನಿಮ್ಮಂತೆಯೇ ದೇವೇಗೌಡರ ಶ್ರಮ, ತ್ಯಾಗದಿಂದ ಅಧಿಕಾರ ಉಂಡು, ಪೊಗದಸ್ತಾಗಿ ಬೆಳೆದು ಬೇಲಿ ಹಾರಿದವರು! ನೀವು ಹೇಳಿದಂತೆ ಕುಟುಂಬವೇ ಮಿಗಿಲು ಎಂದು ಗೌಡರು ಭಾವಿಸಿದ್ದಿದ್ದರೆ ಈ ಪಟ್ಟಿಯಲ್ಲಿನ ಒಬ್ಬರೂ ಶಾಸಕ, ಮಂತ್ರಿ, ಎಂಪಿ ಆಗುತ್ತಲೇ ಇರಲಿಲ್ಲ.. ನಿಮ್ಮನ್ನೂ ಸೇರಿಸಿ! ಏನಂತೀರಿ? ನೀವೆಲ್ಲರೂ ನೆರಳು ಕೊಟ್ಟ ವೃಕ್ಷಕ್ಕೆ ನಿರ್ದಯದಿಂದ ಕೊಡಲಿ ಹಾಕಿದಿರಿ. ಉಂಡು ಹೋದರಿ, ಕೊಂಡು ಹೋದರಿ! ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ : ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ

•ಸಿದ್ದರಾಮಯ್ಯನವರೇ.. ನಿಮ್ಮ ಸ್ವಾರ್ಥಕ್ಕೆ ಜಾತಿ ಎಳೆದು ತಂದಂತೆ ಹಿರಿಯರಾದ ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ, ಎಸ್.ಎಂ. ಕೃಷ್ಣ ಅವರನ್ನು ಏಕೆ ಎಳೆದು ತರುತ್ತೀರಿ? ಎಸ್.ಎಂ.ಕೃಷ್ಣ ಅವರ ಹೆಸರೇಳುವ ಸಾಸಿವೆ ಕಾಳಷ್ಟು ಯೋಗ್ಯತೆ, ನೈತಿಕತೆ ನಿಮಗಿದೆಯೇ? ಹಿ ಈಸ್‌ ಅನ್‌ ಪಾಲಿಷ್ಡ್‌ ಡೈಮಂಡ್‌ ಎಂದು ಸೋನಿಯಾ ಗಾಂಧಿ ಅವರ ಮುಂದೆ ಹೇಳಿ ನೀವು ಕಾಂಗ್ರೆಸ್‌ ಮೆಟ್ಟಿಲತ್ತಲು ಕಾರಣರಾದ ಎಸ್.ಎಂ.ಕೃಷ್ಣರನ್ನು ಎಷ್ಟು ಕ್ರೂರವಾಗಿ ವಂಚಿಸಿದಿರೆನ್ನುವುದು ಜಗತ್ತು ಬಲ್ಲ ಸತ್ಯ. ರಾಜಕೀಯದ ಕಡೆಗಾಲದಲ್ಲಿ ಅವರನ್ನು ನೀವೆಷ್ಟು ತುಚ್ಛವಾಗಿ ನಡೆಸಿಕೊಂಡಿರಿ ಎನ್ನುವುದನ್ನು ಜನ ಮರೆತಿಲ್ಲ. ಅನ್‌ ಪಾಲಿಷ್ಡ್‌ ಡೈಮಂಡ್‌ ಕೃಷ್ಣರಿಗೆ ಚೂರಿ ಆಗಿದ್ದು ಎಲ್ಲರೂ ಬಲ್ಲರು ಎಂದು ತಿವಿದಿದ್ದಾರೆ.

•ಒಕ್ಕಲಿಗರನ್ನು ಬೆಳೆಸಿದ್ದು ಕಾಂಗ್ರೆಸ್ಸು ಅಂತೀರಿ..‌ ಬರೀ ಬುರುಡೆ.. ವಿಧಾನಸೌಧ ಕಟ್ಟಿದ ಕೆಂಗಲ್‌ ಅವರಿಗೆ ನಿಮ್ಮ ನೆಹರು ಕೊಟ್ಟ ಕಿರುಕುಳ, ಮಾಡಿದ ಅಪಮಾನ ಅಷ್ಟಿಷ್ಟಾ? ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರಿಗೆ ಬೆನ್ನಿಗಿರಿದ ದೂರ್ತರು ಯಾರು? ಯಾವ ಪಕ್ಷದವರು? ಒಕ್ಕಲಿಗರನ್ನು ಸಿಎಂ ಮಾಡುವುದು ಕಾಂಗ್ರೆಸ್ಸೇ ಎನ್ನುವುದಾದರೆ, ತತ್‌ʼಕ್ಷಣಕ್ಕೇ ನೀವು ಕುರ್ಚಿ ಬಿಡಬೇಕಲ್ಲವೇ? ಒಕ್ಕಲಿಗರ ಮೇಲೆ ನಿಮ್ಮ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ! ಎಂದು ಚಾಟಿ ಬೀಸಿದ್ದಾರೆ.

•ಸಿದ್ದರಾಮಯ್ಯನವರೇ.. ಒಕ್ಕಲಿಗ ಸಮುದಾಯಕ್ಕೆ ಸಮರ್ಥ ನಾಯಕತ್ವ ನೀಡುವ ಕಾಂಗ್ರೆಸ್‌ ಉದಾರತೆಯನ್ನು ನಾನು ಸ್ವಾಗತಿಸುವೆ. ಈ ಉದಾರತೆ ನಿಮಗೂ ಬೇಕಲ್ಲವೇ? ಈಗ ನೀವು ಉದಾರತೆ ತೋರಬೇಕು. ಎರಡನೇ ಅವಧಿಗೆ ನೀವು ಸಿಎಂ ಆಗುವ ಮುನ್ನ ಅಗ್ರಿಮೆಂಟ್‌ ಆಗಿತ್ತಲ್ಲಾ, ಅದನ್ನು ಬಹಿರಂಗವಾಗಿ ಹೇಳುವ ಉದಾರತೆ ತೋರಿ. ದಿಲ್ಲಿಯಲ್ಲಿ ನಿಮ್ಮಿಬ್ಬರ ನಡುವೆ ಆಗಿದ್ದ ಆ ಅಗ್ರಿಮೆಂಟ್‌ʼಗೆ ಸಾಕ್ಷಿ ಆಗಿದ್ದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ವೇಣುಗೋಪಾಲ್, ಸುರ್ಜಿವಾಲಾಗೆ ನಿಮ್ಮ ಸಾಮಾಜಿಕ ನ್ಯಾಯ, ಒಕ್ಕಲಿಗ ಪ್ರೀತಿಯ ಪರಾಕಾಷ್ಠೆ ಈಗೀಗ ಅರ್ಥವಾಗಿದೆ ಎಂದು ಭಾವಿಸುತ್ತೇನೆ. ಅವರೆಲ್ಲರ ಮಾನಸಿಕ ಸ್ವಾಸ್ಥ್ಯ ಸರಿ ಇದೆ ಎಂದು ನಾನಾದರೂ ನಂಬಿದ್ದೇನೆ ಎಂದು ದಳಪತಿ ಕುಟುಕಿದ್ದಾರೆ.

DK Shivakumar Taunts HC Mahadevappa : ಮಹದೇವಪ್ಪಗೆ ಡಿಕೆ ಟಾಂಗ್ #pratidhvani

ಸಾಮಾಜಿಕ ನ್ಯಾಯದ ಸಂಹಾರಿಯೇ ಅದೇ ಸಾಮಾಜಿಕ ನ್ಯಾಯದ ಬಗ್ಗೆ ಪದೇಪದೆ ಮಾತನಾಡುವುದು ಅಸಹ್ಯ ತರಿಸುತ್ತದೆ. ನಿಮ್ಮ ಸಾಮಾಜಿಕ ನ್ಯಾಯಕ್ಕೆ ಅಂತಃಕರಣವಿಲ್ಲ. ಇದ್ದಿದ್ದರೆ ನಿಮಗಿಂತ ಮೊದಲೇ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗಬೇಕಿತ್ತು. ಇದ್ದ ಪ್ರತಿಪಕ್ಷ ಸ್ಥಾನವನ್ನೂ ಕಿತ್ತುಕೊಂಡು ಅವರನ್ನು ಅತ್ಯಂತ ಅಪಮಾನಕರವಾಗಿ ದಿಲ್ಲಿಗೆ ಓಡಿಸಿದಿರಿ. ಇನ್ನೊಬ್ಬ ದಲಿತ ನಾಯಕ ಡಾ. ಜಿ. ಪರಮೇಶ್ವರ್ ಅವರನ್ನು ನಿಮ್ಮ ದಾರಿಗೆ ಅಡ್ಡ ಬರುತ್ತಾರೆಂದು ಚುನಾವಣೆ ಕಣದಲ್ಲೇ ಮುಗಿಸಿದಿರಿ, ನಿಮ್ಮನ್ನು ಕಾಂಗ್ರೆಸ್ಸಿಗೆ ಕರೆತಂದ ಹೆಚ್. ವಿಶ್ವನಾಥ್’ರನ್ನು ಎಲ್ಲಿ ಇಟ್ಟಿದ್ದೀರಿ? ನೀವು ಸಿಎಂ ಪಟ್ಟಕ್ಕೆ ಏರಿ ಕೂತಿರಿ? ಎರಡು ಸಲ ನೀವು ಸಿಎಂ ಆಗಿದ್ದಲ್ಲ, ಅರ್ಹತೆಯಿಂದ ಆಗಿದ್ದೂ ಅಲ್ಲವೇ ಅಲ್ಲ. ಪಕ್ಷದಲ್ಲಿದ್ದ ಸಮರ್ಥರನ್ನು ಸಾಮಾಜಿಕ ನ್ಯಾಯದ ನೆಪಲ್ಲಿ ರಾಜಕೀಯನರಮೇಧ ಮಾಡಿ ಆಕ್ರಮಿಸಿದ್ದು ಎಂದು ಆರೋಪಿಸಿದ್ದಾರೆ.

ಇನ್ನೆಷ್ಟು ಸುಳ್ಳು ಹೇಳುತ್ತೀರಿ? ಇನ್ನೆಷ್ಟು ದಿನ ಈ ಊಸರವಳ್ಳಿ ಅವತಾರ? ಅಸಲಿಗೆ ಅಹಿಂದಾ ನಾಯಕ, ಸಾಮಾಜಿಕ ನ್ಯಾಯದ ಪ್ರತಿನಿಧಿಯೇ ನೀವಾಗಿದ್ದಿದ್ದರೆ ಈ ಸೂಕ್ಷ್ಮ ಸಂದರ್ಭದಲ್ಲಿ ನೀವು ಹುಟ್ಟಿದ ಜಾತಿಯನ್ನು ಎಳೆದು ತರುತ್ತಿರಲಿಲ್ಲ. ಇದನ್ನೇ ನಾನು ಪ್ರಶ್ನಿಸಿದ್ದು. ಬಸವಣ್ಣ, ನಾರಾಯಣ ಗುರು, ಕುವೆಂಪು, ದೇವರಾಜ ಅರಸು ಅವರುಗಳ ವಿಚಾರ, ತತ್ವಾದರ್ಶಗಳನ್ನು ನಂಬಿದನು ಎನ್ನುವ ನೀವು, ಇನ್ನು ಮುಂದೆ ಆ ಮಹನೀಯರ ಹೆಸರೇಳಬೇಡಿ. ನಿಮಗಿಂತ ವಯಸ್ಸಿನಲ್ಲಿ ಚಿಕ್ಕವನಾದ ನಾನು ನಿಮಗೆ ನೀಡುವ ವಿನಮ್ರ ಸಲಹೆ ಇದು ಎಂದು ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ನಡೆಸಿದ್ದಾರೆ.

Tags: bjp karnatakaCM Siddaramaiahcongress karnatakaH D DevegowdaH D KumaraswamyJDS Karnatakakannada newsKarnataka PoliticsPratidhvanisocial Justice
Previous Post

ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ: ಸ್ವಪಕ್ಷೀಯರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ

Next Post

ಹಾಸನ: ಜೀವಕ್ಕೇ ಕುತ್ತು ತಂದ ಜಾಲಿರೈಡ್‌, ಪ್ರಕರಣದ ವಿವರ ಇಲ್ಲಿದೆ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಹಾಸನ: ಜೀವಕ್ಕೇ ಕುತ್ತು ತಂದ ಜಾಲಿರೈಡ್‌, ಪ್ರಕರಣದ ವಿವರ ಇಲ್ಲಿದೆ..!

ಹಾಸನ: ಜೀವಕ್ಕೇ ಕುತ್ತು ತಂದ ಜಾಲಿರೈಡ್‌, ಪ್ರಕರಣದ ವಿವರ ಇಲ್ಲಿದೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada