• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ಸಂಶೋಧನೆ, ಉತ್ಪಾದನೆ, ಉದ್ಯೋಗ ಸೂತ್ರದಡಿ ಸಮಾಲೋಚನೆ ನಡೆಸಿದ ಕೇಂದ್ರ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ..

ಪ್ರತಿಧ್ವನಿ by ಪ್ರತಿಧ್ವನಿ
March 4, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿ (FKCCI) ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕೈಗಾರಿಕೋದ್ಯಮಿಗಳ ಜತೆ ಮಹತ್ವದ ಸಭೆ ನಡೆಸಿದರು.

ADVERTISEMENT
Iran Israel War : Khameneiಪರ Indiaದಲ್ಲಿ  ಪ್ರತಿಭಟನೆ ಮಾಡೋದು ಬೇಡ  |Major| Raghu Ram Reddy |Pratidhvani

ನಗರದ ಹೆಚ್ ಎಂಟಿ ಭವನದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ವಿಸ್ತರಣೆಗೆ ಇರುವ ವಿಪುಲ ಅವಕಾಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ 500 ರೂ ಕೋಟಿ ರೂಪಾಯಿ ವೆಚ್ಚದಲ್ಲಿ ಜಾಗತಿಕ ಮಟ್ಟದ ARAI (ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ) ಪರೀಕ್ಷಾ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರಕ್ಕೆ, ಅದರಲ್ಲಿಯೂ ಮುಖ್ಯಮಂತ್ರಿಗಳಿಗೆ ಸ್ವತಃ ನಾನೇ ಪತ್ರ ಬರೆದಿದ್ದೇನೆ. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಈ ತರಬೇತಿ ಕೇಂದ್ರಕ್ಕೆ ಕಳೆದ ಬಜೆಟ್ ನಲ್ಲಿ 500 ಕೋಟಿ ಮೀಸಲಿಡಲಾಗಿದೆ. ಅಗತ್ಯಬಿದ್ದರೆ ಇನ್ನೂ 500 ಕೋಟಿ ಹೂಡಿಕೆ ಮಾಡಲು ಕೇಂದ್ರ ತಯಾರಿದೆ ಎಂಬ ಅಂಶವನ್ನು ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಸಂಶೋಧನೆ, ಉತ್ಪಾದನೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು. ಸಾರಿಗೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಿ ಪರಿಸರ ಪೂರಕ ಸಾರಿಗೆ ವ್ಯವಸ್ಥೆ ರೂಪಿಸುವ ದೃಢ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೊಂದಿದ್ದಾರೆ. ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ :

ಕಂಪನಿಗಳು ಕರ್ನಾಟಕದಲ್ಲಿ ಹುಟ್ಟಿಕೊಳ್ಳುತ್ತಿವೆ, ಆದರೆ ಬೇರೆ ರಾಜ್ಯಗಳಲ್ಲಿ ಉತ್ಪಾದನೆ ಮಾಡುತ್ತಿವೆ. ಇಂಥ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರಬೇಕಿದೆ. ಅದಕ್ಕೆ ARAI ಕೇಂದ್ರ ದೊಡ್ಡ ಮಟ್ಟದ ಕೊಡುಗೆ ನೀಡುತ್ತದೆ. ಆಟೋಮೊಬೈಲ್ ಪರೀಕ್ಷಾ ಕೇಂದ್ರ ಬರುವುದರ ಜತೆಗೆ ಆ ಮೂಲಕ ಸಂಶೋಧನೆ, ಉತ್ಪಾದನೆಗೂ ಮುಂದಿನ ದಿನಗಳಲ್ಲಿ ಅವಕಾಶಗಳು ತೆರೆದುಕೊಳ್ಳಲಿವೆ ಎಂದು ಕುಮಾರಸ್ವಾಮಿ ಆಶಯ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಮಟ್ಟದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ ಆಗಬೇಕು ಎಂಬುದು ಪ್ರಧಾನಿಗಳ ದೂರದೃಷ್ಟಿ. ಆ ನಿಟ್ಟಿನಲ್ಲಿ ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ಬೃಹತ್ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದ್ದೇವೆ. ರಾಜ್ಯದಲಿ ARAI ಪರೀಕ್ಷಾ ಕೇಂದ್ರ ಸ್ಥಾಪನೆ ಆದರೆ ಸಾವಿರಾರು ಸಂಖ್ಯೆಯಷ್ಟು ಉದ್ಯೋಗ ಸೃಷ್ಟಿ ಆಗುವುದಷ್ಟೇ ಅಲ್ಲದೆ, ಪರೋಕ್ಷ ಉದ್ಯೋಗಗಳನ್ನು ಬೃಹತ್ ಪ್ರಮಾಣದಲ್ಲಿ ಸೃಷ್ಟಿಸಿ ದೊಡ್ಡ ಮಟ್ಟದ ಆಟೋ ಇಕೋ ಸಿಸ್ಟಮ್ ನಿರ್ಮಾಣಕ್ಕೆ ನಾಂದಿ ಹಾಡುತ್ತದೆ. ಹೀಗಾಗಿ ಈ ಯೋಜನೆಗೆ ರಾಜ್ಯ ಸರ್ಕಾರದ ಸಹಕಾರವನ್ನು ಕೋರಿದ್ದೇವೆ ಎಂದಿದ್ದಾರೆ.

ಅದೇ ರೀತಿ ಕರ್ನಾಟಕದಲ್ಲಿ ಇವಿ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೂ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ. ಅತ್ಯಾಧುನಿಕ, ಸಮಗ್ರವಾದ ಇವಿ ಪೂರಕ ವ್ಯವಸ್ಥೆ ಮಾಡುವುದರಿಂದ ರಾಜ್ಯಕ್ಕೆ ಆರ್ಥಿಕ, ಉದ್ಯೋಗ ಹಾಗೂ ಉತ್ಪಾದನೆ ಕ್ಷೇತ್ರಗಳಲ್ಲಿ ಭಾರೀ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಸಚಿವರು ಪ್ರತಿಪಾದಿಸಿದ್ದಾರೆ.

ಕುಮಾರಸ್ವಾಮಿಗೆ ಅಭಿನಂದಿಸಿದ ಉದ್ಯಮಿಗಳು…

ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು  ಅಭಿನಂದಿಸಿದ ಕೈಗಾರಿಕೋದ್ಯಮಿಗಳು, ಇಂಥ ಕೇಂದ್ರವೊಂದು ರಾಜ್ಯಕ್ಕೆ ಅಗತ್ಯವಿದ್ದು, ವಾಹನೋದ್ಯಮಕ್ಕೆ ದೊಡ್ಡ ಶಕ್ತಿ ನೀಡಲಿದೆ. ಮುಖ್ಯವಾಗಿ ಇವಿ ಉದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಬೂಸ್ಟ್ ನೀಡಲಿದೆ ಎಂದು ನಿರೀಕ್ಷೆ ಹೊರಹಾಕಿದ್ದಾರೆ.

ಎಫ್ ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ, ಹಿರಿಯ ಉಪಾಧ್ಯಕ್ಷ ಟಿ. ಸಾಯಿರಾಂ ಪ್ರಸಾದ್, ಉಪಾಧ್ಯಕ್ಷ ಬಿ.ಪಿ. ಶಶಿಧರ್, ಗ್ರೀನ್ ಎನರ್ಜಿ ಸಮಿತಿ ಅಧ್ಯಕ್ಷ ರಮೇಶ್ ಶಿವಣ್ಣ, ಮಾಜಿ ಅಧ್ಯಕ್ಷರಾದ ಎಸ್. ಸಂಪತ್ ರಾಮನ್, ಆರ್. ಶಿವಕುಮಾರ್, ಕೆ. ಶಿವಷಣ್ಮುಗಂ, ಎಲ್. ಲಕ್ಷ್ಮಣ ಸೇರಿದಂತೆ ಕೈಗಾರಿಕೋದ್ಯಮಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

 

 

Tags: ARAicongress karnatakaEV VehicleFKCCIGovernment of IndiaGovernment of KarnatakaHD KumaraswamyHMTJDS Karnatakakarnataka newsKarnataka PoliticsMandya MPMinister of SteelNarendra ModiNDA alliancePratidhvaniprime minister of indiaSteel Industry
Previous Post

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

Next Post

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada