ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿಕೆ ಶಿವಕುಮಾರ್ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದೀಗ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿಶೇಷವಾಗಿ ಶುಭಕೋರಿದ್ದಾರೆ.

ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ಕುಮಾರಸ್ವಾಮಿ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.






