• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
November 23, 2025
in ಕರ್ನಾಟಕ, ದೇಶ, ರಾಜಕೀಯ
0
Political News Karnataka

Siddaramaiah vs Joshi

Share on WhatsAppShare on FacebookShare on Telegram

ಹುಬ್ಬಳ್ಳಿ: “ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಜ್ಞಾನೋದಯ ಆದಂತಿದೆ’ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ರೈತರ ವಿಚಾರದಲ್ಲಿ ಸಿಎಂ ಸ್ವಲ್ಪ ತಡವಾಗಿ ಕುಂಭಕರ್ಣ ನಿದ್ದೆಯಿಂದ ಎಚ್ಚೆತ್ತುಕೊಂಡಿದ್ದಾರೆ. ಅಂತೂ ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ ಒಪ್ಪಂದ ಮಾಡಿಕೊಳ್ಳುವಂತೆ ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆ. ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ NCCF ಮತ್ತು NAFED ಜತೆ ಒಪ್ಪಂದ ಮಾಡಿಕೊಳ್ಳುವಂತೆ ಡಿಸ್ಟಿಲರಿಗಳಿಗೆ ಪತ್ರ ಬರೆಯುವ ಬುದ್ಧಿ ಈಗಲಾದರೂ ಬಂದಿದೆ ಎಂದು ಚಾಟಿ ಬೀಸಿದ್ದಾರೆ.

ಜೋಶಿ, ಇಷ್ಟು ದಿನ ಪ್ರತಿಯೊಂದಕ್ಕೂ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದ ಸಿಎಂಗೆ ಈಗ ಜ್ಞಾನೋದಯವಾಗಿದೆ. ಎಥೆನಾಲ್ ಉತ್ಪಾದನೆಗಾಗಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಿಕೊಳ್ಳಲು NCCF ಮತ್ತು NAFED ನೊಂದಿಗೆ ಒಪ್ಪಂದ ಮಾಡಿಕೊಳ್ಳತಕ್ಕದ್ದೆಂದು ಸಿಎಂ ಇದೀಗ ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರಕ್ಕೆ ತನ್ನ ಕಾರ್ಯದ ಬಗ್ಗೆ ಅರಿವಾದಂತಿದೆ ಎಂದು ಜೋಶಿ ಕಾಲೆಳೆದಿದ್ದಾರೆ.

ರಾಜ್ಯ ಸರ್ಕಾರ ಹೊಣೆಗಾರಿಕೆ ಮರೆತ ಬಗ್ಗೆ ನಿನ್ನೆ ತಾನೇ ಮಾಧ್ಯಮಗಳೆದುರು ಪ್ರಸ್ತಾಪಿಸಿದ್ದೆ. ಮೆಕ್ಕೆಜೋಳ ಖರೀದಿ ವಿಚಾರವಾಗಿ ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೊರಡಿಸಿರುವ ಮಾರ್ಗಸೂಚಿಗಳನ್ನು (SOP) ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿತ್ತು. ಕೆಟ್ಟ ಮೇಲೆ ಬುದ್ಧಿ ಬಂತು ಎನ್ನುವಂತೆ ರಾಜ್ಯ ಸರ್ಕಾರಕ್ಕೆ ಇದೀಗ ಬುದ್ಧಿ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನಾದರೂ ರೈತರಲ್ಲಿ ಇಲ್ಲ ಸಲ್ಲದ ಗೊಂದಲ ಸೃಷ್ಟಿಸುವುದನ್ನು ಬಿಡಲಿ. ತಮ್ಮ ಸರ್ಕಾರದ ಆಡಳಿತ ವೈಫಲ್ಯ ಮರೆಮಾಚುವುದಕ್ಕಾಗಿ ಕೇಂದ್ರ ಸರ್ಕಾರದತ್ತ ಬೆರಳು ತೋರುವುದನ್ನು ಇಲ್ಲಿಗೆ ನಿಲ್ಲಿಸಲಿ. ರಾಜ್ಯದಲ್ಲಿ ಜನ ಕೊಟ್ಟ ಅಧಿಕಾರವನ್ನು ಜನರಿಗಾಗಿ ಸದ್ವಿನಿಯೋಗ ಆಗುವಂತೆ ಪಾರದರ್ಶಕ ಆಡಳಿತ ನಿರ್ವಹಿಸಲಿ ಎಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರದ ಕಿವಿ ಹಿಂಡಿದ್ದಾರೆ.

Previous Post

ಸ್ಮೃತಿ ಮಂಧಾನ ಮದುವೆ ದಿಢೀರ್ ಮುಂದೂಡಿಕೆ

Next Post

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
Next Post

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada