• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Santhosh S Lad: ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ

ಪ್ರತಿಧ್ವನಿ by ಪ್ರತಿಧ್ವನಿ
October 14, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌(Santhosh S Lad). ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್‌ ಲಾಡ್‌(Santhosh S Lad) ಅವರು ತಿಳಿಸಿದರು.

ADVERTISEMENT

ನಗರದ ಘಾಳೆ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಸಾರಿಗೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಬೀದರ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ದುಡಿಯುವ ಜನರಲ್ಲಿ 85% ಅಸಂಘಟಿತ ವಲಯದ ಕಾರ್ಮಿಕರಾಗಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆʼ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 35 ಲಕ್ಷ ಕಾರ್ಮಿಕರು ಒಳಗೊಂಡಿದ್ದಾರೆ. ಅವರಿಗೆ ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ (Smart Card) ನೀಡಲಾಗಿದೆ ಎಂದರು.

ಬೀದರ್‌ ಜಿಲ್ಲೆಯಲ್ಲಿ 59,493 ಕಾರ್ಮಿಕರು ನೋಂದಾಯಿಸಿಕೊಂಡಿದ್ದು ಅವರಿಗೆ ಸ್ಮಾರ್ಟ್ ಕಾರ್ಡ್ (Smart Card) ನೀಡಲಾಗುತ್ತಿದೆ. ಅಪಘಾತ ಸಂಭವಿಸಿದಲ್ಲಿ ರೂ.1 ಲಕ್ಷ ಪರಿಹಾರ ನೀಡಲಾಗುವುದು ಎಂದರು. ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ 4 ಲಕ್ಷದವರೆಗೆ ವಿಮಾ ಸೌಲಭ್ಯ ನೀಡಲಾಗುವುದು. ಆಶಾದೀಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಉದ್ಯೋಗ ನೀಡಿದಲ್ಲಿ 50% ವೇತನ ಕಾರ್ಮಿಕ ಇಲಾಖೆ ಕಡೆಯಿಂದ ನೀಡಲಾಗುವುದು ಎಂದರು. ಮೋಟಾರು ಸಾರಿಗೆ ಹಾಗೂ ಸಂಬಂಧಿತ ಕಾರ್ಮಿಕರಿಗೆ ಮತ್ತು ಸಿನಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಸೌಲಭ್ಯಗಳನ್ನು ಒದಗಿಸಲಾಗಿದ ಎಂದರು.

ಬೀದರ ಜಿಲ್ಲೆಯಲ್ಲಿ ಯಾವ ರೀತಿ ಸಂಸ್ಥೆ ಮೂಲಕ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಮಿಕರನ್ನು ನೇಮಿಸಲಾಗುತ್ತದೆಯೋ ಅದೇ ರೀತಿಯಲ್ಲಿ ಇಡೀ ಕರ್ನಾಟಕದಲ್ಲಿ ಆಗುವ ಹಾಗೆ ಮಾಡುವುದಾಗಿ ಹಾಗೂ ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ) ಅಧಿನಿಯಮ ರೂಪಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು.

ಅರಣ್ಯ , ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ (Minister Eshwar Khandre) ಮಾತನಾಡಿ, ಸಂತೋಷ್‌ ಲಾಡ್‌ (Santhosh S Lad)ಅವರು ಕಾರ್ಮಿಕ ಸಚಿವರಾದ ಮೇಲೆ ಶ್ರಮೀಕರಿಗಾಗಿ ಅನೇಕ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದು ಕಾರ್ಮಿಕರ ಬಾಳಿಗೆ ಬೆಳಕಾಗಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ ನಿರ್ಮಾಣ ಮಾಡುವ ಕಾರ್ಯ ಮಾಡುತ್ತಿದ್ದಾರೆ. ಈಗಾಗಲೇ ವಸತಿ ಶಾಲೆಗೆ ಖಾನಾಪೂರದಲ್ಲಿ ಸ್ಥಳ ಸೂಚಿಸಲಾಗಿದೆ ಎಂದರು.

ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ (Rahim Khan) ಮಾತನಾಡಿ, ಸಂತೋಷ ಲಾಡ್ (Santhosh S Lad)ಅವರು ಬಡವರ, ದಲಿತರ, ಕಾರ್ಮಿಕರ ಬಗ್ಗೆ ಅಪಾರವಾದ ಪ್ರೀತಿ ಉಳ್ಳವರು. ಸಾಮಾಜಿಕ ನ್ಯಾಯ, ಸಮ ಸಮಾಜದ ನಿರ್ಮಾಣ ಮಾಡಲು ಹಾಗೂ ಕಾರ್ಮಿಕರ ಕಲ್ಯಾಣಕ್ಕಾಗಿ ಸದಾ ಶ್ರಮಿಸುವರು ಎಂದರು. ಈ ಸಂದರ್ಭದಲ್ಲಿ ಆಶಾದೀಪ ಯೋಜನೆಯಡಿ ವೇತನ ಮರುಪಾವತಿ ಚೆಕ್ ವಿತರಣೆ, ಖಾಸಗಿ ವಾಹನ ಚಾಲಕರ ಅಪಘಾತ ಮರಣ ಪರಿಹಾರ ಧನ ಸಹಾಯ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಅಧ್ಯಕ್ಷರಾದ ಬಾಬು ಹೊನ್ನನಾಯ್ಕ(Babu Honnanayka), ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್(Mohammed Gouse), ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಬಾಬು ಜಗಜೀವನರಾಂ ನಿಗಮದ ಅಧ್ಯಕ್ಷ ನಾಗರಾಜ ಮುಂಡರಗಿ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳಾದ ಮೊಹಮದ್ ಮೋಸಿನ್, ಕಾರ್ಮಿಕ ಆಯುಕ್ತ ಹಾಗೂ ರಾಜ್ಯ ವಿಮಾ ಯೋಜನಾ ವೈದ್ಯಕೀಯ ಆಯುಕ್ತರಾದ ಡಾ. ಎಚ್.ಎನ್. ಗೋಪಾಲಕೃಷ್ಣ, ಸಾರಿಗೆ ಇಲಾಖೆಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಯೋಗೇಶ್ ಎಂ.ಎಂ, ಜಂಟಿ ಕಾರ್ಮಿಕ ಆಯುಕ್ತ ಹಾಗೂ ಜಂಟಿ ಕಾರ್ಯದರ್ಶಿ ಎಸ್.ಬಿ. ರವಿಕುಮಾರ, ಕಲಬುರಗಿ ಪ್ರಾದೇಶಿಕ ಸಹಾಯಕ ಆಯುಕ್ತ ಮಹಮ್ಮದ ಬಶೀರ ಅನ್ಸಾರಿ ಸೇರಿದಂತೆ ಇತರೆ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.

Tags: congress mla santhosh ladMinister Santhosh Ladmla santosh ladsanthosh ladsanthosh lad about modisanthosh lad about pm modisanthosh lad lashes out at pm modisanthosh lad lashes out at r ashoksanthosh lad latest newssanthosh lad newssanthosh lad news todaysanthosh lad on operation kamalasanthosh lad questioned modisanthosh lad speechsanthosh lad today newssanthosh lad vs narendra modiSantosh Ladsantosh lad jdssantosh lad mlasantosh lad newssantosh lad winsantosh s lad
Previous Post

ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬರಲಿದೆ ಬಹು ನಿರೀಕ್ಷಿತ ಚಿತ್ರ “ಕೊರಗಜ್ಜ” .

Next Post

ಹಾವೇರಿಯಲ್ಲಿ ಲೋಕಾಯುಕ್ತ ದಾಳಿ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಹಾವೇರಿಯಲ್ಲಿ ಲೋಕಾಯುಕ್ತ ದಾಳಿ

ಹಾವೇರಿಯಲ್ಲಿ ಲೋಕಾಯುಕ್ತ ದಾಳಿ

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada