• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಳಕೆಯಾಗದ KIADB ಜಮೀನು ವಾಪಸ್, 15 ದಿನಗಳಲ್ಲಿ ನೋಟೀಸ್: ಸಚಿವ ಮುರುಗೇಶ್ ನಿರಾಣಿ

Any Mind by Any Mind
September 8, 2021
in ಕರ್ನಾಟಕ
0
ಬಳಕೆಯಾಗದ KIADB ಜಮೀನು ವಾಪಸ್, 15 ದಿನಗಳಲ್ಲಿ ನೋಟೀಸ್: ಸಚಿವ ಮುರುಗೇಶ್ ನಿರಾಣಿ
Share on WhatsAppShare on FacebookShare on Telegram

ಕೈಗಾರಿಕಾ ಉದ್ದೇಶಗಳಿಗಾಗಿ ಕೆಐಎಡಿಬಿ (KARNATAKA INDUSTRIAL AREA DEVELOPMENT BOARD೦) ಮೂಲಕ ಪಡೆದ ಜಮೀನನ್ನು ಬಳಕೆ ಮಾಡದಿದ್ದರೆ, 15 ದಿನಗಳಲ್ಲಿ ನೋಟೀಸ್ ನೀಡಲಾಗುವುದು. ಒಂದು ವೇಳೆ ಅನ್ಯ ಉದ್ದೇಶಕ್ಕಾಗಿ ಬಳಸಿದ್ದರೆ ಹಿಂಪಡೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಬುಧವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಡಿ ನಡೆಸಿದ ಅವರು, ಯಾವ ಉದ್ದೇಶಕ್ಕೆ ಜಮೀನು ಪಡೆಯಲಾಗಿತ್ತೋ ಅದಕ್ಕೆ ಬಳಸಬೇಕು. ಒಂದು ವೇಳೆ ಬಳಕೆ ಮಾಡದಿದ್ದರೆ, 15 ದಿನದೊಳಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.

ಈಗಾಗಲೇ ಕಳೆದ ಒಂದು ವಾರದಿಂದ ಕೆಲವರಿಗೆ ನೋಟೀಸ್ ನೀಡುವ ಪ್ರಕ್ರಿಯೆ ಆರಂಭವಾಗಿದೆ. 15 ದಿನದಲ್ಲಿ ಸಮರ್ಪಕ ಉತ್ತರ ಬಾರದಿದ್ದರೆ ಮತ್ತೊಂದು ನೋಟೀಸ್ ಕೊಡಲಾಗುವುದು. ಹಾಗೊಂದು ವೇಳೆ ಅದಕ್ಕೂ ಉತ್ತರ ನೀಡದಿದ್ದರೆ ನೀಡಿರುವ ಜಮೀನು ವಾಪಸ್ಸು ಪಡೆಯಲಾಗುವುದು ಎಂದು ಸುದ್ದಿಗೋಷ್ಡಿಯಲ್ಲಿ ತಿಳಿಸಿದ್ದಾರೆ.

ಕೆಲವರು ಕೈಗಾರಿಕಾ ಉದ್ದೇಶಗಳಿಗಾಗಿ ಪಡೆದಿರುವ ಜಮೀನಿನಲ್ಲಿ ಶೇ 100 ರಷ್ಟು ಕೆಲಸವನ್ನು ಪೂರ್ಣ ಮಾಡಿದ್ದರೆ, ಇನ್ನು ಕೆಲವರು ಶೇ 20 ರಷ್ಟು ಮಾತ್ರ ಕೆಲಸ ಪ್ರಾರಂಭಿಸಿದ್ದಾರೆ.ರಾಜ್ಯದ ಯಾವ ಯಾವ ಕಡೆ ಜಮೀನನ್ನು ಖಾಲಿ ಬಿಡಲಾಗಿದೆ ಎಂಬುದರ ಬಗ್ಗೆ ಇಲಾಖೆ ವತಿಯಿಂದ ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಕೆಐಎಡಿಬಿಯಿಂದ ಜಮೀನು ಪಡೆದು ಖಾಲಿ ಬಿಟ್ಟಿರುವ ಪ್ರದೇಶಗಳ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಕರ್ನಾಟಕ ಮೊದಲ ಸ್ಥಾನ ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ ಕರ್ನಾಟಕ 62,085 ಕೋಟಿ ವಿದೇಶಿ ನೇರ ಬಂಡವಾಳ (ಎಫ್ಡಿಎ) ಆಕರ್ಷಿಸುವ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ ಅತ್ಯುತ್ತಮ ಹೂಡಿಕೆದಾರರ ತಾಣವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್ ನಿಂದ ಜೂನ್ ತಿಂಗಳ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳನ್ನು ಹಿಂದಿಕ್ಕಿ ಕರ್ನಾಟಕ ವಿದೇಶಿ ಬಂಡವಾಳ ಆಕರ್ಷಿಸುವ ರಾಜ್ಯಗಳ ಪೈಕಿ ಮೊದಲ ಸ್ಥಾನಕ್ಕೆ ಬಂದಿದೆ. ಇದೊಂದು ಆಶಾದಾಯಕ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

2019-20ರಲ್ಲಿ ಕರ್ನಾಟಕ 30,745 ಕೋಟಿ, 2020-21ರಲ್ಲಿ 56,884, 2021-22ರಲ್ಲಿ 62,085 ಕೋಟಿ ಬಂಡವಾಳ ಆಕರ್ಷಿಸಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಬಂಡವಾಳ ಆಕರ್ಷಣೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ ಎಂದು ತಿಳಸಿದ್ದಾರೆ.

ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ನಮ್ಮ ಸರ್ಕಾರ ಸಾಕಷ್ಟು ವಿಶೇಷ ಗಮನ ಹರಿಸಿದೆ. ದೇಶದಲ್ಲಿ ಒಟ್ಟಾರೆ ವಿದೇಶಿ ಹೂಡಿಕೆಯಲ್ಲಿ ಕರ್ನಾಟಕದ ಪಾಲು ಶೇ.48ರಷ್ಟಿದೆ. ಇದಕ್ಕೆ ಕಾರಣ ವಿಶ್ವದರ್ಜೆ ಮೂಲಭೂತ ಸೌಕರ್ಯಗಳು. ಹೀಗಾಗಿ ವಿದೇಶಿ ಹೂಡಿಕೆದಾರರು ನಮ್ಮ ಕಡೆ ಕರ್ನಾಟಕದತ್ತ ಮುಖ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ನಮಗೆ ಇನ್ನೂ ದೊಡ್ಡ ಮೊತ್ತದಲ್ಲಿ ನೇರ ಬಂಡವಾಳು ಹರಿದು ಬರಲಿದೆ. ವಿಶ್ವದಲ್ಲೇ ಅತ್ಯುತ್ತಮವಾದ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ವಿಶ್ವದರ್ಜೆಯ ರಸ್ತೆಗಳು, ವಿದ್ಯುತ್ ಸೇರಿದಂತೆ ಹತ್ತು ಹಲವು ರೀತಿಯ ಸೌಲಭ್ಯಗಳನ್ನು ಒದಗಿಸಿದ್ದೇವೆ. ಕೈಗಾರಿಕೆಗೆ ಸಂಬಂಧಿಸಿದ ಯಾವುದೇ ವಿವಾದಗಳನ್ನು ಕಾಲಮಿತಿಯೊಳಗೆ ಪರಿಹರಿಸಿಕೊಡುವ ರಾಜ್ಯಗಳಲ್ಲಿ ನಾವೇ ಮೊದಲಿಗರು ಎಂದಿದ್ದಾರೆ.

ಕರ್ನಾಟಕ ಉದ್ಯೋಗ ಮಿತ್ರವು ದೇಶದ ಅಗ್ರಮಾನ್ಯ ಹೂಡಿಕೆ ಪ್ರಚಾರದ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂಬ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ರಾಷ್ಟ್ರೀಯ ಹೂಡಿಕೆ ಉತ್ತೇಜನ ಮತ್ತು ಪೂರಕ ಸೌಲಭ್ಯ ಒದಗಿಸುವ ಏಜೆನ್ಸಿ “ಇನ್ವೆಸ್ಟ್ ಇಂಡಿಯಾ”ದ ರಾಜ್ಯವಾರು ಐಪಿಎ (ಹೂಡಿಕೆ ಪ್ರಚಾರ ಏಜೆನ್ಸಿ) ಶ್ರೇಯಾಂಕದಡಿ ಕರ್ನಾಟಕ ಉದ್ಯೋಗ ಮಿತ್ರ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ ಎಂದು ತಿಳಿಸಿದ್ದಾರೆ.

ದೇಶದ ಒಟ್ಟು 20 ರಾಜ್ಯಗಳ ಸಾಧನೆಯನ್ನು ಪರಿಗಣಿಸಿ ಈ ಶ್ರೇಯಾಂಕ ನೀಡಲಾಗಿದೆ. ಹೂಡಿಕೆ ಉತ್ತೇಜನ ಪ್ರಚಾರಕ್ಕೆ ಸಂಬಂಧಿಸಿದ ಒಟ್ಟು 8 ವಿಭಾಗಳ ಪೈಕಿ 4ರಲ್ಲಿ ಕರ್ನಾಟಕ ಉದ್ಯೋಗ ಮಿತ್ರ ಶೇ.100 ಅಂಕಗಳನ್ನು ಗಳಿಸಿದೆ.

ಹೂಡಿಕೆ ಯೋಜನೆಗಳ ಗಳಿಕೆ, ಹೂಡಿಕೆ ಯೋಜನೆಗಳಿಗೆ ಸೌಲಭ್ಯ, ಯೋಜನೆ ಜಾರಿ ಬಳಿಕ ಪೂರಕ ನೆರವು ಮತ್ತು ವೆಬ್ಸೈಟ್ ನಿರ್ವಹಣೆ ವಿಭಾಗದಲ್ಲಿ ಉದ್ಯೋಗ ಮಿತ್ರ ಪೂರ್ಣಾಂಕ ಗಳಿಸಿದೆ. ಉದ್ಯಮಿಗಳಿಗೆ ಹೂಡಿಕೆ ಅವಕಾಶಗಳು ಹಾಗೂ ಆಯ್ಕೆ ಕುರಿತಂತೆ ಸಮರ್ಪಕ ಮಾಹಿತಿ ಒದಗಿಸುವ ಪ್ರಕ್ರಿಯೆ ಪಾಲಿಸುವ ಜತೆಗೆ, ಹೂಡಿಕೆಗೆ ಪೂರಕ ಸೌಲಭ್ಯ ಒದಗಿಸುವಲ್ಲಿ ಏಜೆನ್ಸಿಯ ಪಾತ್ರ ಗಣನೀಯವಾದುದು ಎಂದು ಸಚಿವ ನಿರಾಣಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.

Tags: Government of KarnatakaKIADBmurugesh niraniಮುರುಗೇಶ್ ನಿರಾಣಿ
Previous Post

ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಬೆಳಗಾವಿ: 15 ಜನ ಎಂಇಎಸ್ ಬೆಂಬಲಿತರು ಬಿಜೆಪಿಗೆ.?

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ತೃತೀಯ ರಂಗವು ಬಿಜೆಪಿಗೆ ಸವಾಲೊಡ್ಡಲಿದೆ ಎಂದು ನನಗನ್ನಿಸುವುದಿಲ್ಲ– ಪ್ರಶಾಂತ್‌ ಕಿಶೋರ್

ಬೆಳಗಾವಿ: 15 ಜನ ಎಂಇಎಸ್ ಬೆಂಬಲಿತರು ಬಿಜೆಪಿಗೆ.?

Please login to join discussion

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada