ಇತ್ತೀಚೆಗೆ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಇತರ ಇಬ್ಬರು ವ್ಯಕ್ತಿಗಳ ಬಂಧನವನ್ನು ಖಂಡಿಸಿ ವಿಶ್ವಸಂಸ್ಥೆ ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ ಹೇಳಿಕೆ ನೀಡಿದ್ದು, ಅದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಬುಧವಾರ “ಅನಗತ್ಯ” (unwarranted) ಎಂದು ಕರೆದಿದೆ.
“ಈ ಹೇಳಿಕೆಗಳು ಸಂಪೂರ್ಣವಾಗಿ ಅನಗತ್ಯ ಮತ್ತು ಭಾರತದ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಸ್ತಕ್ಷೇಪವನ್ನು ರೂಪಿಸುತ್ತವೆ” ಎಂದು MEA ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. “ಭಾರತದ ಅಧಿಕಾರಿಗಳು ಕಾನೂನಿನ ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಾಗಿ ಸ್ಥಾಪಿಸಲಾದ ನ್ಯಾಯಾಂಗ ಪ್ರಕ್ರಿಯೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಾರೆ. ಅಂತಹ ಕಾನೂನು ಕ್ರಮಗಳನ್ನು ಕಿರುಕುಳ ಎಂದು ಲೇಬಲ್ ಮಾಡುವುದು ತಪ್ಪುದಾರಿಗೆಳೆಯುವ ಪ್ರಯತ್ನ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ.
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಬಂಧನದ ಬಗ್ಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದೆ.