ಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ತಮ್ಮ ತವರು ಕ್ಷೇತ್ರ ಗೋರಖ್ಪುರ ನಗರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹಳೆಯದ್ದು. ಇದೀಗ ಅವರು ಶುಕ್ರವಾರ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದು ಅದಕ್ಕಿಂತ ಮುಂಚೆ ನಡೆಯುವ ಬೃಹತ್ ರೋಡ್ ಶೋನಲ್ಲಿ ಗೃಹ ಸಚಿವ ಅಮಿತ್ ಷಾ, ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಸುದ್ದಿ ಮೂಲಗಳ ಪ್ರಕಾರ ಕೋವಿಡ್ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ರೋಡ್ಶೋ ನಡೆಸಲು ಉದ್ದೇಸಿಸಲಾಗಿದೆ ಎಂದು ತಿಳಿದು ಬಂದಿದೆ. ನಾಮಪತ್ರ ಸಲ್ಲಿಕೆ ನಂತರ ಯೋಗಿ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರ ಜೊತೆಗೆ ಸಭೆ ನಡೆಸಲಿದ್ದಾರೆ.
