30 ವರ್ಷದ ದಲಿತ ಮಹಿಳೆಗೆ ಏಳು ಮಂದಿ ಅಪರಿಚಿತರು ಬಂದೂಕು ತೋರಿಸಿ ಆಕೆಯ ಬಟ್ಟೆಗಳನ್ನು ವಿವಸ್ತ್ರಗೊಳಿಸುವಂತೆ ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೇ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಘಟನೆ ಉತ್ತರಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.
ಶನಿವಾರ ಸಂಜೆ ಮುಜಾಫರ್ನಗರ ಜಿಲ್ಲೆಯ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ದೂರಿನಲ್ಲಿ, ʻನಾನು ಹೊಲಕ್ಕೆ ಹುಲ್ಲು ತರಲು ಹೋಗಿದ್ದೆ. ಈ ವೇಳೆ ಅಲ್ಲಿಗೆ ಬಂದ ಏಳು ಮಂದಿ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಬಂದೂಕು ತೋರಿಸಿ ತನ್ನ ಬಟ್ಟೆ ತೆಗೆಯುವಂತೆ ಒತ್ತಾಯಿಸಿ ನಂತರ ವೀಡಿಯೊ ಮಾಡಿದರುʼ ಎಂದು ಮಹಿಳೆ ತಿಳಿಸಿದ್ದಾರೆ.
ಪೊಲೀಸರು ಐಪಿಸಿಯ ಸೆಕ್ಷನ್ 354 ಬಿ ಮತ್ತು 506, ಎಸ್ಸಿ/ಎಸ್ಟಿ ಕಾಯ್ದೆಯ ಸೆಕ್ಷನ್ 3 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಭಾನುವಾರ ಪ್ರಕರಣದಲ್ಲಿ ಏಳು ಜನರನ್ನು ಬಂಧಿಸಿದ್ದಾರೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಎಸ್ಎಚ್ಒ ಆನಂದ್ ದೇವ್ ಮಿಶ್ರಾ ಹೇಳಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಾದ ಅನುಜ್, ಕುಲದೀಪ್, ಅಂಕಿತ್, ರವಿ, ರಿಜ್ವಾನ್, ಚೋಟಾ ಮತ್ತು ಅಬ್ದುಲ್ ಎಂಬುವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಎಸ್ಎಚ್ಒ ಆನಂದ್ ದೇವ್ ಮಿಶ್ರಾ ಹೇಳಿದ್ದಾರೆ.