• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿಪಿ

ಮಾದರಿ ಪತ್ರಕರ್ತರನ್ನು ಸನ್ಮಾನಿಸುವುದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ 'ಜಾಗೃತ ಕಣ್ಣು'ಗಳಿಗೆ ಸಲ್ಲಿಸುವ ಗೌರವವಾಗಿದೆ : ಕೆವಿಪಿ

ಪ್ರತಿಧ್ವನಿ by ಪ್ರತಿಧ್ವನಿ
January 2, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್
0
ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿಪಿ
Share on WhatsAppShare on FacebookShare on Telegram

ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಚೇರಿಯಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ಮಾಹಿತಿ ಆಯುಕ್ತರಾದ ಪತ್ರಕರ್ತರಿಗೆ ಸನ್ಮಾನಿಸಿ ಅಭಿನಂದನಾ ನುಡಿಗಳನ್ನು ಆಡಿದರು.

ADVERTISEMENT

ಇಂದು ಇಲ್ಲಿ ಸನ್ಮಾನಿತರಾಗುತ್ತಿರುವ ಐದೂ ಮಂದಿ ಪತ್ರಕರ್ತರಿಗೆ ಮತ್ತು ಇವರನ್ನು ಸನ್ಮಾನಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಾನು ಮೊದಲಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕೃತಜ್ಞತೆ ಸಲ್ಲಿಸಿದರು.

ಇವರಲ್ಲಿ ಸಿದ್ದರಾಜು ಅವರು ಹಿರಿಯರಾಗಿ ನಮಗೆಲ್ಲಾ ಮಾದರಿ ಆಗಿದ್ದವರು. ಉಳಿದವರು ನನ್ನ ಸಮಕಾಲೀನರಾಗಿ ಮಾದರಿಗಳಾಗಿರುವವರು. ಹಿರಿಯ ಮತ್ತು ಮಾದರಿ ಪತ್ರಕರ್ತರನ್ನು ಸನ್ಮಾನಿಸುವುದು ಕೇವಲ ಒಂದು ಶಿಷ್ಟಾಚಾರವಲ್ಲ, ಅದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ‘ಜಾಗೃತ ಕಣ್ಣು’ಗಳಿಗೆ ಸಲ್ಲಿಸುವ ಗೌರವವಾಗಿದೆ.

ಇಲ್ಲಿ ಸನ್ಮಾನಿತರಾಗುತ್ತಿರುವ ಪತ್ರಕರ್ತ ಸ್ನೇಹಿತರು ದಶಕಗಳ ಕಾಲ ಸಮಾಜದ ಏರಿಳಿತಗಳನ್ನು ಹತ್ತಿರದಿಂದ ಕಂಡಿದ್ದಾರೆ. ಗೂಗಲ್, ಜಿ-ಮೇಲ್, ವಾಟ್ಸಾಪ್ ನಂತಹ ತಂತ್ರಜ್ಞಾನವಿಲ್ಲದ ಕಾಲದಿಂದ ಹಿಡಿದು ಅಪಾರ ತಂತ್ರಜ್ಞಾನದ ಹಾವಳಿಯ ಕಾಲಘಟ್ಟದ ಎರಡೂ ಸಂದರ್ಭಗಳ ಪತ್ರಿಕೋದ್ಯಮಕ್ಕೂ ಸಾಕ್ಷಿಯಾಗಿರುವವರು ಎಂದು ಮೆಚ್ಚುಗೆ ಸೂಚಿಸಿದರು.

ತಂತ್ರಜ್ಞಾನ ಇಲ್ಲದಿದ್ದಾಗ ಸತ್ಯವನ್ನು ಹುಡುಕಿ ಹೊರತಂದ ಇವರ ಕಾಳಜಿ, ಪರಿಶ್ರಮ, ವೃತ್ತಿಪರತೆಗೆ ಸನ್ಮಾನವು ಒಂದು ರೀತಿಯ ಮಾನ್ಯತೆ ತಂದು ಕೊಟ್ಟಿದೆ.
ತಂತ್ರಜ್ಞಾನ ಇಲ್ಲದಿದ್ದಾಗಲೂ ಸತ್ಯದ ತೇರು ಎಳೆದ ಪತ್ರಕರ್ತರು, ಈಗ ತಂತ್ರಜ್ಞಾನದ ಯುಗದಲ್ಲೂ ಸತ್ಯ ಕಾಣಲು ಸಾಧ್ಯವಾಗದ ಯುವ ಪೀಳಿಗೆಗೆ ಮಾದರಿ ಮತಗತು ಪ್ರೇರಣೆ ಆಗಿದ್ದಾರೆ‌ ಎಂದರು.

ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ. ಹಿರಿಯರನ್ನು ಗೌರವಿಸುವುದರಿಂದ, ಉದಯೋನ್ಮುಖ ಪತ್ರಕರ್ತರಿಗೆ ಮೌಲ್ಯಾಧಾರಿತ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಮತ್ತು ಸ್ಫೂರ್ತಿ ಮೂಡುತ್ತದೆ. ಈ ಅರ್ಥಪೂರ್ಣ ಕೆಲಸವನ್ನು ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ ಎಂದರು.

ಸಾಮಾಜಿಕ ಜವಾಬ್ದಾರಿಯನ್ನು ಗುರುತಿಸುವುದೂ ಜವಾಬ್ದಾರಿಯುತ ಕೆಲಸ. ಸಾಮಾಜಿಕ ಕಾಳಜಿಗಳನ್ನು ಕಾಪಾಡಿಕೊಂಡಿರುವವರನ್ನು ಗುರುತಿಸುವುದು ಮತ್ತು ಸನ್ಮಾನಿಸುವುದರಿಂದ “ಸಮಾಜವು ಪ್ರಾಮಾಣಿಕ ಸೇವೆಯನ್ನು ಎಂದಿಗೂ ಮರೆಯುವುದಿಲ್ಲ” ಎಂಬ ಸಂದೇಶ ಕೊಟ್ಟಂತೆ ಆಗುತ್ತದೆ.

ಇದು ಸಮಾಜದಲ್ಲಿ ಸತ್ಯವಂತರ, ಸಾಮಾಜಿಕ ಕಾಳಜಿ ಇಟ್ಟುಕೊಂಡವರ ಪರವಾಗಿ ನಿಲ್ಲುವ ಧೈರ್ಯವನ್ನು ತುಂಬುತ್ತದೆ. ಇತಿಹಾಸದ ಕೊಂಡಿಯಾಗಿ ಹಿರಿಯ ಪತ್ರಕರ್ತರು ಒಂದು ಕಾಲಘಟ್ಟದ ಜೀವಂತ ಇತಿಹಾಸವಿದ್ದಂತೆ. ಅವರನ್ನು ಸನ್ಮಾನಿಸುವ ನೆಪದಲ್ಲಿ ಅವರ ಅನುಭವದ ನುಡಿಗಳನ್ನು ದಾಖಲಿಸುವ ಕೆಲಸವನ್ನೂ ಕಾರ್ಯನಿರತ ಪತ್ರಕರ್ತರ ಸಂಘ ಮಾಡಬೇಕು ಎಂದು ಕರೆ ನೀಡಿದರು.

ನಮ್ಮ ಹಿಂದಿನವರು ಮತ್ತು ಸಮಕಾಲೀನ ಮಾದರಿಗಳ ಮೂಲಕ ಇಂದಿನ ತಪ್ಪುಗಳನ್ನು ತಿದ್ದಿಕೊಳ್ಳಲು ಮತ್ತು ಭವಿಷ್ಯದ ದಾರಿಯನ್ನು ಕಂಡುಕೊಳ್ಳಲು ನಮಗೆ ಸಹಾಯ ಆಗುತ್ತದೆ. ನನಗಿರುವ ಸಾಧ್ಯತೆಗಳಲ್ಲೇ ಹೆಚ್ಚೆಚ್ವು ವೃತ್ತಿಬಾಂದವರಿಗೆ ಅವಕಾಶಗಳನ್ನು ಒದಗಿಸಿಕೊಡುವ ಪ್ರಯತ್ನ ಮಾಡಿದ್ದೇನೆ. ಈ ಜವಾಬ್ದಾರಿಯನ್ನು ನನಗೆ ಅವಕಾಶ ಇರುವವರೆಗೂ ನಾನು ಮಾಡುತ್ತಲೇ ಇರುತ್ತೇನೆ. ಇನ್ನೂ ಅನೇಕ ಹಿರಿಯರಿಗೆ ಮತ್ತು ಅನೇಕ ಸಮಕಾಲೀನ ಅರ್ಹರಿಗೆ ಅವಕಾಶಗಳು ದೊರೆತಿಲ್ಲ ಎನ್ನುವ ಅರಿವು ನನಗೂ ಇದೆ. ಮುಂದಿನ ದಿನಗಳಲ್ಲಿ ಉಳಿದ ಅರ್ಹರಿಗೂ ಅವಕಾಶ ಒದಗಿಸಿಕೊಡಲು ಪ್ರಯತ್ನಿಸುತ್ತೇನೆ ಎಂದರು.

ವೃತ್ತಿಜೀವನದಿಂದ ನಿವೃತ್ತರಾದ ನಂತರ ಅಥವಾ ಇಳಿ ವಯಸ್ಸಿನಲ್ಲಿ ಅನೇಕ ಪತ್ರಕರ್ತರು ಆರ್ಥಿಕ ಅಥವಾ ಮಾನಸಿಕ ಏಕಾಂಗಿತನ ಅನುಭವಿಸುತ್ತಾರೆ ಎನ್ನುವುದು ನನಗೆ ಗೊತ್ತಿದೆ. ಇಂತಹ ಸಮಯದಲ್ಲಿ ಪತ್ರಕರ್ತರ ಸಂಘಗಳು, ಪ್ರೆಸ್ ಕ್ಲಬ್ ನಂತಹ ಸಂಸ್ಥೆಗಳು ಅವರನ್ನು ಗುರುತಿಸಿ ಸನ್ಮಾನಿಸಿದರೆ, ಅವರಿಗೆ ಆತ್ಮವಿಶ್ವಾಸ ಮತ್ತು ಗೌರವಯುತ ಬದುಕು ನಡೆಸಲು ನೆರವಾಗುತ್ತದೆ ಎಂದರು.

ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ. ಈ ಸ್ತಂಭವನ್ನು ಭದ್ರವಾಗಿ ಕಟ್ಟಿದವರನ್ನು ಸನ್ಮಾನಿಸುವುದು ಎಂದರೆ ನಾವು ನಮ್ಮ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿದಂತೆ ಎಂದು ಭಾವಿಸುತ್ತೇನೆ ಎಂದರು.

ಸಂಕ್ರಾಂತಿ ವೇಳೆಗೆ ಜಾಹಿರಾತು ನೀತಿ.
ಸಂಕ್ರಾಂತಿ ವೇಳೆಗೆ ಸರ್ಕಾರದ ಹೊಸ ಜಾಹಿರಾತು ನೀತಿ ಜಾರಿಗೆ ಬರಲಿದೆ ಎಂದು ಕೆವಿಪಿ ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯೋತ್ಸವ ಪುರಸ್ಕೃತರಾದ ಸಿದ್ದರಾಜು, ಬಿ.ಎಂ.ಹನೀಫ್, ಶಾಂತಕುಮಾರ್ ಹಾಗೂ ಮಾಹಿತಿ ಆಯುಕ್ತರಾದ ಮಹೇಶ್ ವಾಳ್ವೇಕರ್, ವೆಂಕಟ್ ಸಿಂಗ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸಭಾಪತಿ ಕಾರ್ಯಕ್ರಮ ಉದ್ಘಾಟಿಸಿದರು. KUWJ ಅಧ್ಯಕ್ಷರಾದ ಶಿವಾನಂದ ತಗಡೂರು, ಉಪಾಧ್ಯಕ್ಷರಾದ ಮದನ್ ಗೌಡರು, ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಸೇರಿ ಸಂಘದ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags: BM HaneefCM SiddaramaiahDK ShivakumarKV PrabhakarKVPmadan gowdarMahesh valvekarPress clubShanthakumarShivananda TagadurVenkat SinghVidhanasouda
Previous Post

ಕೊಲೆಗಡುಕರು ಊರಿಗೆ ಬೆಂಕಿ ಹಚ್ಚಲು ಹೊರಟಿದ್ದಾರೆ: ʼಕೈʼ ಶಾಸಕ ನಾರಾ ವಿರುದ್ಧ ಗುಡುಗಿದ ರೆಡ್ಡಿ ಬ್ರದರ್ಸ್‌..!

Next Post

ಕೊನೆಗೂ ಎಚ್ಚೆತ್ತ ಪೊಲೀಸರು: ದರ್ಶನ್‌ ಪತ್ನಿ ಕೊಟ್ಟ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಕೊನೆಗೂ ಎಚ್ಚೆತ್ತ ಪೊಲೀಸರು: ದರ್ಶನ್‌ ಪತ್ನಿ ಕೊಟ್ಟ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

ಕೊನೆಗೂ ಎಚ್ಚೆತ್ತ ಪೊಲೀಸರು: ದರ್ಶನ್‌ ಪತ್ನಿ ಕೊಟ್ಟ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada