ಬರುವ ತಿಂಗಳು ಗೋವಾ ಚುನಾವಣೆ ನಡೆಯಲಿದ್ದು, ಇಂದು ಬಿಜೆಪಿ ತನ್ನ 34 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮಧ್ಯೆ ಗೋವಾದ ಮಾಜಿ ಸಿಎಂ ಹಾಗೂ ರಕ್ಷಣಾ ಸಚಿವರಾಗಿದ್ದ ದಿ.ಮನೋಹರ್ ಪರಿಕ್ಕರ್ ಪುತ್ರ ಉತ್ಪಾಲ್ ಪರಿಕ್ಕರ್ಗೆ ಟಿಕೆಟ್ ನಿರಾಕರಿಸಲಾಗಿದೆ.
ಪಣಜಿ (ಪಂಜಿಂ) ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ಉತ್ಪಾಲ್ ಹೆಸರು ಘೋಷಿಸದಿರುವುದು ವಿವಾದಕ್ಕೆ ಕಾರಣವಾಗಿದ್ದು, ಕಾರ್ಯಕರ್ತರು ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಈ ಹಿಂದೆ ಮನೋಹರ್ ಪರಿಕ್ಕರ್ 5 ಭಾರೀ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಸದ್ಯ ಈ ಕ್ಷೇತ್ರದ ಅಭ್ಯರ್ಥಿಯಾಗಿ ಬಾಬುಷ್ ಮಾನ್ಸೆರೇಟ್ಗೆ ಟಿಕೆಟ್ ನೀಡಲಾಗಿದೆ. ಈ ಕುರಿತು ಮಾತನಾಡಿರುವ ಉತ್ಪಾಲ್ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಹೆಚ್ಚು ಉತ್ಸುಕನಾಗಿದೆ. ಆದರೆ, ನನಗೆ ಕೊಡುವ ಟಿಕೆಟ್ಅನ್ನು ಬೇರಯವರಿಗೆ ಪಕ್ಷ ನೀಡಿದೆ. ಆದಷ್ಟು ಬೇಗ ನನ್ನ ನಿಲುವನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಉತ್ಕಲ್ ಅವರ ಬಾಯಿಂದ ಈ ಮಾತು ಬರುವುದನ್ನು ಬಿಜೆಪಿ ನಾಯಕರು ಕಾಯುತ್ತಿದ್ದರು ಎಂದು ಅನ್ನಿಸುತ್ತದೆ. ಏಕೆಂದರೆ, ಅವರು ಹೇಳಿಕೆ ನೀಡದ 10 ನಿಮಿಷಗಳ ಅಂತರದಲ್ಲಿ ಅವರ ಮನವೊಲಿಸಲು ಬಿಜೆಪಿ ನಾಯಕರ ದಂಡೆ ಅವರ ಮನೆಯತ್ತ ಹೋಗಿದೆ.
ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಮ್ಮ ಪಕ್ಷದಿಂದ ಟಿಕೆಟ್ ನೀಡುವುದಾಗಿ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್ ನೀವು ಎಎಪಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೀರಿ ಎಂದರೆ ಸ್ವಾಗತ ಎಂದು ಹೇಳಿದ್ದಾರೆ.