ಹಾಸನ: ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸೋತವರು ಹಾಗೂ ಗೆದ್ದವರ ನಡುವೆ ಘರ್ಷಣೆ ನಡೆದಿರುವ ಘಟನೆ ಹಾಸನದ ಪ್ರತಿಷ್ಠಿತ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಐದನೇ ಸೆಮಿಸ್ಟರ್ ವಿದ್ಯಾರ್ಥಿ ಪ್ರಜ್ವಲ್ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾನೆ. ಆದರೆ ಈ ವಿಚಾರವಾಗಿ ಗೆದ್ದ ಪ್ರಜ್ವಲ್ ಹಾಗೂ ಸೋತ ಅಭ್ಯರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಘಟನೆಯಿಂದಾಗಿ ಕಾಲೇಜಿನ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸ್ ಲಾಠಿ ಚಾರ್ಚ್ ನಡೆಸುವ ಮೂಲಕ ಎರಡು ಗುಂಪುಗಳ ನಡುವಿನ ಗಲಾಟೆಯನ್ನ ತಹಬದಿಗೆ ತಂದರು. ಆದರೆ ಕಾಲೇಜಿನಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರು ಕಾಲೇಜಿನ ಪ್ರೀಸಿಪಾಲ್ ಹಾಗೂ ಇನ್ನಿತರ ಸಿಬ್ಬಂದಿ ತಮಗೂ ಇದಕ್ಕೂ ಸಂಬಂಧವೇ ಇಲ್ಲವೆಂಬಂತೆ ಮೌನವಹಿಸಿದ್ದರು ಎನ್ನಲಾಗಿದೆ