ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಕಚೇರಿ ಮುಂದೆ ಅಹವಾಲು ಗಳನ್ನು ಸ್ವೀಕರಿಸಲು ಒತ್ತಾಯ ಪಡಿಸುತ್ತಿರುವ ಸಾಮಾಜಿಕ ಹೋರಾಟಗಾರರು.



ಬಿಬಿಎಂಪಿಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರವನ್ನು ಪ್ರಶ್ನಿಸಿ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಅರ್ಜಿಯನ್ನು ಹಾಕಿದ್ದರು ಎಂಬ ಒಂದೇ ಒಂದು ಕಾರಣಕ್ಕೆ ಜೀವ ಬೆದರಿಕೆ ಒಡ್ಡಿರುವ ಕಂದಾಯ ನಿರೀಕ್ಷಕನ ವಿರುದ್ಧ ತ್ವರಿತವಾಗಿ ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.






