• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉರಿಗೌಡ-ನಂಜೇಗೌಡ ಸಿನೆಮಾ ಟೈಟಲ್‌ ರಿಜಿಸ್ಟರ್:‌ ಮುನಿರತ್ನ ನಡೆಗೆ ಹೆಚ್‌ಡಿಕೆ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
March 17, 2023
in ಕರ್ನಾಟಕ, ರಾಜಕೀಯ
0
ಉರಿಗೌಡ-ನಂಜೇಗೌಡ ಸಿನೆಮಾ ಟೈಟಲ್‌ ರಿಜಿಸ್ಟರ್:‌ ಮುನಿರತ್ನ ನಡೆಗೆ ಹೆಚ್‌ಡಿಕೆ ಕಿಡಿ
Share on WhatsAppShare on FacebookShare on Telegram

ಟಿಪ್ಪುವನ್ನು ಕೊಂದವರೆಂದು ಬಿಜೆಪಿ ಪ್ರಚಾರ ಮಾಡುತ್ತಿರುವ ಉರಿಗೌಡ-ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಬಗ್ಗೆ ಚಿತ್ರ ಮಾಡಲು ವೃತ್ತಿಯಲ್ಲಿ ಸಿನೆಮಾ ನಿರ್ಮಾಪಕರೂ ಆಗಿರುವ ಸಚಿವ ಮುನಿರತ್ನ ಅವರು ಟೈಟಲ್‌ ರಿಜಿಸ್ಟರ್‌ ಮಾಡಿಸಿದ್ದಾರೆ.

ADVERTISEMENT

ಈ ಸಿನಿಮಾ ಮಾಡಲೆಂದು ಅವರು ಎರಡು ಟೈಟಲ್ ಅನ್ನು ಮುನಿರತ್ನ ರಿಜಿಸ್ಟರ್   ಮಾಡಿಸಿದ್ದಾರೆ. ‌ ಕುರುಕ್ಷೇತ್ರ ಸೇರಿ ಹಲವು ಚಿತ್ರ ನಿರ್ಮಿಸಿರುವ ಮುನಿರತ್ನ ಈ ಬಾರಿ ವಿವಾದಿತ ಪಾತ್ರಗಳ ಕಥೆ ಆಯ್ಕೆ ಮಾಡಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಇದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದು, ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ.ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ BJP Karnataka ಗೆ ಇರುವುದಂತೂ ಸತ್ಯ. ಎಂದಿದ್ದಾರೆ.

ಈ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ. ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ.

ಸಚಿವರು, ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಶ್ರೀ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ ಉರಿಗೌಡ ನಂಜೇಗೌಡ ‘ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ.

 ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು ಎಂದು ಸಚಿವರಾದ ಅಶ್ವಥ ನಾರಾಯಣ ಹಾಗೂ ಆರ್‌ ಅಶೋಕ್‌ ವಿರುದ್ಧವೂ ಹೆಚ್‌ಡಿಕೆ ಕಿಡಿ ಕಾರಿದ್ದಾರೆ.

ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ.

ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ.

ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ.

ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ, ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು.

ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, Bharatiya Janata Party (BJP) ಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ.

ವಿಜ್ಞಾನ,ತಂತ್ರಜ್ಞಾನ,ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು.

ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು.

ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ. ಪ್ರತೀ ಸೂಕ್ಷ್ಮ ವಿಷಯದಲ್ಲೂ ಮತ ರಾಜಕಾರಣ ಮಾಡುವ ಕಮಲ ಪಕ್ಷಕ್ಕೆ ಕರ್ನಾಟಕವೇ ಪ್ರಯೋಗ ಶಾಲೆ. ಜಾತಿ, ಧರ್ಮಗಳ ನಡುವೆ ಕಿಚ್ಚಿಟ್ಟು, ಸರ್ವಜನಾಂಗದ ತೋಟವಾದ ಕರ್ನಾಟಕಕ್ಕೆ ಕೋಮುಪ್ರಾಷನ ಮಾಡಿಸುತ್ತಿದೆ ಬಿಜೆಪಿ .

ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಒಕ್ಕಲಿಗ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ಬಿಜೆರಿ ಬೀರುತ್ತಿರುವ ವಕ್ರದೃಷ್ಟಿ… ಇದೆಲ್ಲವೂ ಒಕ್ಕಲಿಗರನ್ನು ರಾಜಕೀಯವಾಗಿ ಮುಗಿಸಿಬಿಡುವ ಬಿಜೆಪಿ ರಕ್ಕಸ ಹಿಡೆನ್ ಅಜೆಂಡಾ ಅಲ್ಲದೆ ಮತ್ತೇನೂ ಅಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Previous Post

ʼಕಿತ್ತೋದ ಸಿಟಿ ರವಿʼ ಎಂದ ವೀರಶೈವರು: ಲಿಂಗಾಯತರ ಆಕ್ರೋಶಕ್ಕೆ ಬೆದರಿ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಿದ ಸಿಟಿ ರವಿ

Next Post

Uri Gowda, Nanje Gowda Will be Destroyed If They Make A Movie: ಉರಿಗೌಡ, ನಂಜೇಗೌಡ ಸಿನಿಮಾ ಮಾಡಿದರೆ ಸರ್ವನಾಶ ಆಗ್ತಾರೆ : ಸಚಿವ ಮುನಿರತ್ನ ವಿರುದ್ಧ ಹೆಚ್.ಡಿಕೆ ಆಕ್ರೋಶ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
Uri Gowda, Nanje Gowda Will be Destroyed If They Make A Movie: ಉರಿಗೌಡ, ನಂಜೇಗೌಡ ಸಿನಿಮಾ ಮಾಡಿದರೆ ಸರ್ವನಾಶ ಆಗ್ತಾರೆ : ಸಚಿವ ಮುನಿರತ್ನ ವಿರುದ್ಧ ಹೆಚ್.ಡಿಕೆ ಆಕ್ರೋಶ

Uri Gowda, Nanje Gowda Will be Destroyed If They Make A Movie: ಉರಿಗೌಡ, ನಂಜೇಗೌಡ ಸಿನಿಮಾ ಮಾಡಿದರೆ ಸರ್ವನಾಶ ಆಗ್ತಾರೆ : ಸಚಿವ ಮುನಿರತ್ನ ವಿರುದ್ಧ ಹೆಚ್.ಡಿಕೆ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada