ಏಋ ಇಂಡಿಯಾ ವಿಮಾನದಲ್ಲಿ ಸಹ ಮಹಿಳಾ ಪ್ರಯಾಣಕಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ ಮತ್ತು 14ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಪಡೆದಿದ್ದಾರೆ.
ಕಳೆದ ವರ್ಷ ನವೆಂಬರ್ 26ರಂದು ಏರ್ ಇಂಡಿಯಾ ವಿಮಾನದಲ್ಲಿ ಆರೋಪಿ ಶಂಕರ್ ಮಿಶ್ರಾ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದರು ಮತ್ತು ಈ ವಿಚಾರ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಘಟನೆಯ ನಂತರ ತಲೆಮಾರಿಸಿಕೊಂಡಿದ್ದ ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚಿಸಲಾಗಿತ್ತು ಮತ್ತು ಹೊರದೇಶಕ್ಕೆ ಪ್ರಯಾಣಿಸದಂತೆ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿತ್ತು.






