• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ ₹25,000 ಕೋಟಿ ಹೂಡಿಕೆಗೆ ಆಸಕ್ತಿ!

Any Mind by Any Mind
October 12, 2023
in Top Story, ಕರ್ನಾಟಕ
0
ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ ₹25,000 ಕೋಟಿ ಹೂಡಿಕೆಗೆ ಆಸಕ್ತಿ!
Share on WhatsAppShare on FacebookShare on Telegram

ಬೆಂಗಳೂರು: ಅಮೆರಿಕ ಪ್ರವಾಸದ ವೇಳೆ ವಿವಿಧ ಕಂಪನಿಗಳ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅಲ್ಲಿನ ಕಂಪನಿಗಳಿಂದ ರಾಜ್ಯದಲ್ಲಿ ಸುಮಾರು 25,000 ಕೋಟಿ ರೂಪಾಯಿ (3 ಶತಕೋಟಿ ಡಾಲರ್) ಹೂಡಿಕೆ ಮಾಡುವ ಆಸಕ್ತಿ ಪ್ರಕಟವಾಗಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ಹೇಳಿದರು.

ADVERTISEMENT

ಅಮೆರಿಕಕ್ಕೆ 12 ದಿನಗಳ ವ್ಯಾಪಾರ ಉತ್ತೇಜನಾ ಪ್ರವಾಸ ತೆರಳಿದ್ದ ರಾಜ್ಯ ನಿಯೋಗದ ನೇತೃತ್ವ ವಹಿಸಿದ್ದ ಎಂ.ಬಿ.ಪಾಟೀಲ ಮತ್ತು ಪ್ರಿಯಾಂಕ್ ಖರ್ಗೆ ಅವರು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಕ್ಕೆ ಬಂಡವಾಳ ಆಕರ್ಷಿಸುವ ದೃಷ್ಟಿಯಿಂದ ಇದೊಂದು ಯಶಸ್ವಿ ಭೇಟಿಯಾಗಿದೆ ಎಂದರು. ಸಚಿವ ಎಂ.ಬಿ.ಪಾಟೀಲ ಮಾತನಾಡಿ, ಕೆಲವು ಕಂಪನಿಗಳು ಹೊಸದಾಗಿ ರಾಜ್ಯದಲ್ಲಿ ಕಾರ್ಯಾಚರಣೆ ಯೋಜನೆ ಹೊಂದಿವೆ.‌ ಇನ್ನು ಕೆಲವು ಕಂಪನಿಗಳು ಈಗಾಗಲೇ ಇಲ್ಲಿ ಘಟಕಗಳನ್ನು ಹೊಂದಿದ್ದು, ತಮ್ಮ ಕಾರ್ಯಾಚರಣೆ ವಿಸ್ತರಿಸುವ ಪ್ರಸ್ತಾವ ಹೊಂದಿವೆ ಎಂದರು.

ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಈಗ ಕರ್ನಾಟಕ ಸೇರಿದಂತೆ ‌ದೇಶದ‌ ಬಹುತೇಕ ರಾಜ್ಯಗಳು ನಡೆಸುತ್ತಿವೆ. ಇಂತಹ ಸಮಾವೇಶದ ಜೊತೆಗೆ ಹೊಸ ಉಪಕ್ರಮವೊಂದನ್ನು ಕೈಗೊಳ್ಳಬೇಕು ಎಂಬುದು ನಮ್ಮ ಆಲೋಚನೆಯಾಗಿತ್ತು. ಹೀಗಾಗಿ, ಉದ್ಯಮಿಗಳಿರುವ ಹಾಗೂ ಉದ್ಯಮ ಸಂಸ್ಥೆಗಳ ಜಾಗಕ್ಕೆ ನಾವೇ ಹೋಗಿ ನಮ್ಮಲ್ಲಿರುವ ಅನುಕೂಲತೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು ಎಂದು ವಿವರಿಸಿದರು.

ಅಮೆರಿಕದ ಪೂರ್ವ ಕರಾವಳಿಯಿಂದ ಹಿಡಿದು ಪಶ್ಚಿಮ ಕರಾವಳಿವರೆಗೆ ಪ್ರಯಾಣಿಸಿ ಬೇರೆ ಬೇರೆ ಕಂಪನಿಗಳ ಉನ್ನತ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಲಾಯಿತು.‌ ಈ ವೇಳೆ 27 ಮುಖಾಮುಖಿ ಸಭೆಗಳು ಮತ್ತು 9 ಸಂವಾದ ಗೋಷ್ಠಿಗಳು ಸೇರಿ ಒಟ್ಟು 36 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೆವು. ಜೊತೆಗೆ, ಅಲ್ಲಿನ ಕೆಲವು ಕೈಗಾರಿಕೆಗಳ ಕಾರ್ಯಾಚರಣೆಯನ್ನು
ಖುದ್ದು ವೀಕ್ಷಿಸಿದೆವು ಎಂದು ಹೇಳಿದರು.

ಮುಖ್ಯವಾಗಿ, ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್, ಏರೋಸ್ಪೇಸ್ & ರಕ್ಷಣೆ, ಆಟೋ/ಇವಿ, ಉತ್ಪಾದನೆ ಮತ್ತು ಮೆಡ್-ಟೆಕ್ ವಲಯಗಳಲ್ಲಿ ಹೂಡಿಕೆ ಅವಕಾಶಗಳನ್ನು ಅವಲೋಕಿಸಲಾಗಿದೆ. ಅಪ್ಲೈಡ್ ಮಟೀರಿಯಲ್ಸ್, ಎಎಂಡಿ, ಜುನಿಪರ್, ಗ್ಲೋಬಲ್ ಫೌಂಡ್ರೀಸ್, ಲ್ಯಾಮ್ ರಿಸರ್ಚ್, ಬೋಯಿಂಗ್, ಕ್ರಿಪ್ಪನ್, ಡೆಲ್, ಎಂಕೆಎಸ್ ಇನ್‌ಸ್ಟ್ರುಮೆಂಟ್ಸ್, ಟೆರಾಡೈನ್, ಜಿಇ ಹೆಲ್ತ್ ಕೇರ್, ಇಂಟೆಲ್‌ಸ್ಯಾಟ್, ಆರ್‌ಟಿಎಕ್ಸ್, ಟೆಕ್ಸಾಸ್ ಇನ್‌ಸ್ಟ್ಯುಮೆಂಟ್ಸ್, ಆಪಲ್ ಮತ್ತು ವಾಟರ್ಸ್‌ ಕಾರ್ಪ್ ನಂತಹ ಮುಂಚೂಣಿ ಕಂಪನಿಗಳೊಂದಿಗೆ ವಿಚಾರ ವಿನಿಮಯ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ಜಂಟಿ ಕೌಶಲ್ಯಾಭಿವೃದ್ಧಿ ಉಪಕ್ರಮಗಳು, ಪೂರೈಕೆದಾರರ ನೆಲೆಯ ವಿಸ್ತರಣೆ, ಆರ್ & ಡಿ ಪರಿಸರ ವ್ಯವಸ್ಥೆ ಬಲಪಡಿಸುವುದು ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುವ ಬಗೆಗೂ ಸಮಾಲೋಚನೆಗಳನ್ನು ನಡೆಸಲಾಗಿದೆ ಎಂದರು. ಬದಲಾಗುತ್ತಿರುವ ಭೌಗೋಳಿಕ-ರಾಜಕೀಯ ಪರಿಸ್ಥಿತಿಯಲ್ಲಿ ಅಮೆರಿಕದ ಉದ್ಯಮಿಗಳು ಭಾರತದಲ್ಲಿ, ಅದರಲ್ಲೂ ಮುಖ್ಯವಾಗಿ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಆಸಕ್ತಿ ಹೊಂದಿದ್ದಾರೆ. ಈ ಅವಕಾಶ ಬಳಸಿಕೊಳ್ಳುವ ದೃಷ್ಟಿಯಿಂದ ನಾವು ಇಲ್ಲಿನ ಕೈಗಾರಿಕಾ ಕಾರ್ಯಪರಿಸರ, ಉದ್ಯಮಸ್ನೇಹಿ ಕಾರ್ಯನೀತಿಗಳು, ಸರ್ಕಾರದ ಪ್ರೋತ್ಸಾಹಕ ಕ್ರಮಗಳು, ಮತ್ತು ಮಾನವ ಸಂಪನ್ಮೂಲ ಲಭ್ಯತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಜೊತೆಗೆ, ಸುಗಮ ವ್ಯಾಪಾರ ಕಾರ್ಯಾಚರಣೆಗೆ ಪೂರಕವಾಗಿ ಸರ್ಕಾರದ ಸಹಕಾರವನ್ನು ಖಾತ್ರಿಗೊಳಿಸಿದ್ದೇವೆ ಎಂದು ಪಾಟೀಲ ಅವರು ಮಾಹಿತಿ ನೀಡಿದರು.

ವಿಷನ್ ಗ್ರೂಪ್:
ಕೈಗಾರಿಕಾ ಇಲಾಖೆಯು ಕ್ಷೇತ್ರವಾರು ಒಂಬತ್ತು ವಿಷನ್ ಗ್ರೂಪ್ ಗಳನ್ನು ರಚಿಸಲಿದೆ ಸಚಿವ ಹೇಳಿದರು. ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಬಂಡವಾಳ ಆಕರ್ಷಿಸುವ ಸಲುವಾಗಿ ಹೊಸ ಹೊಸ ರೀತಿಯ ಪ್ರಯೋಗಗಳನ್ನು ಮಾಡುತ್ತಿದ್ದು ಅದರಲ್ಲಿ ಈ ಅಮೆರಿಕಾ ಭೇಟಿ ಯೂ ಸೇರಿದೆ. ಮಾನವ ಸಂಪನ್ಮೂಲದ ಬೇಡಿಕೆಗಣುಗುಣವಾಗಿ ಎಂಜಿನಿಯರ್ ಗಳಿಗೆ ತರಬೇತಿ ನೀಡುವ ಸಂಬಂಧ ಎಎಂಡಿ ಸಂಸ್ಥೆ ಜತೆ‌ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಳ್ಳಲಿದೆ. ಈ ಸಂಸ್ಥೆ 800 ಎಂಜಿನಿಯರ್ ಗಳನ್ನು‌ ಭಾರತದಲ್ಲಿ ನೇಮಕ‌ ಮಾಡಿಕೊಳ್ಳಲಿದೆ ಎಂದು ಹೇಳಿದರು. ನಾವೀನ್ಯತಾ ಸೂಚ್ಯಂಕ ದಲ್ಲಿ ಕರ್ನಾಟಕ18ನೇ ಸ್ಥಾನ‌ ಪಡೆದಿದ್ದು ಮುಂದಿನ‌ ದಿನಗಳಲ್ಲಿ 10ರೊಳಗೆ ಸ್ಥಾನ‌ ಪಡೆಯುವ ನಿಟ್ಟಿನಲ್ಲಿ ಕೆಲಸ‌ ಮಾಡಲಿದೆ ಎಂದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಮತ್ತಿತರರು ಇದ್ದರು. 2024 ಡಿಸೆಂಬರ್ ಅಥವಾ 2025ರ ಜನವರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮುಂಬರುವ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು (ಜಿಮ್) 2024ರ ಕೊನೆಯಲ್ಲಿ ಅಥವಾ 2025ರ ಆರಂಭದಲ್ಲಿ ಆಯೋಜಿಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

Tags: #investingAmericaBangaloreITBTMB PatilPriyank Kharge
Previous Post

ಆಯೂಷ್ ಟಿವಿ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ “ಫಿಟ್‌ ಬಾಸ್‌” ಮೊಟ್ಟ ಮೊದಲ ಆರೋಗ್ಯದ ಕುರಿತಾದ ರಿಯಾಲಿಟ್‌ ಶೋ

Next Post

ವಿಷಾನಿಲದ ನಡುವೆ ಕನಸು ಕಟ್ಟಿಕೊಳ್ಳುವ ಒಂದು ಜಗತ್ತು

Related Posts

ಮೋದಿ ಪದವಿ ಮಾಹಿತಿ ಪ್ರಕರಣ: ಗುಜರಾತ್‌ ಹೈಕೋರ್ಟ್‌ ಮಹತ್ವದ ಆದೇಶ ಏನು ?
Top Story

ಮೋದಿ ಪದವಿ ಮಾಹಿತಿ ಪ್ರಕರಣ: ಗುಜರಾತ್‌ ಹೈಕೋರ್ಟ್‌ ಮಹತ್ವದ ಆದೇಶ ಏನು ?

by ಪ್ರತಿಧ್ವನಿ
September 29, 2026
0

ಗುಜರಾತ್‌ ವಿಶ್ವವಿದ್ಯಾಲಯದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವಂತೆ ಕೇಂದ್ರೀಯ ಮಾಹಿತಿ ಆಯೋಗ (CIC) ನೀಡಿದ್ದ ನಿರ್ದೇಶನವನ್ನು ರದ್ದುಗೊಳಿಸಿದ ಆದೇಶವನ್ನು ಪ್ರಶ್ನಿಸಿ...

Read moreDetails
ಪಿಂಕ್‌ ಲೈನ್‌ ವಿಳಂಬಕ್ಕೆ ಬೇಸತ್ತು ಜನರಿಂದಲೇ ‘ಮೆಟ್ರೋ ಉದ್ಘಾಟನೆ’; ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ವೈರಲ್‌

ಪಿಂಕ್‌ ಲೈನ್‌ ವಿಳಂಬಕ್ಕೆ ಬೇಸತ್ತು ಜನರಿಂದಲೇ ‘ಮೆಟ್ರೋ ಉದ್ಘಾಟನೆ’; ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ವೈರಲ್‌

September 29, 2026
The Controversy Surrounding the NICE Project: A Brief Overview

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

September 29, 2026
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Next Post
ವಿಷಾನಿಲದ ನಡುವೆ ಕನಸು ಕಟ್ಟಿಕೊಳ್ಳುವ ಒಂದು ಜಗತ್ತು

ವಿಷಾನಿಲದ ನಡುವೆ ಕನಸು ಕಟ್ಟಿಕೊಳ್ಳುವ ಒಂದು ಜಗತ್ತು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada