ಭಾರತದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೇರಿದ ನಂತರ ಧಾರ್ಮಿಕ ಸ್ವಾತಂತ್ರ್ಯ ಗಮನಾರ್ಹವಾಗಿ ಹದಗೆಟ್ಟಿದೆ ಎಂದು ಅಮೆರಿಕಾದ ಆಯೋಗವು ಸೋಮವಾರ ತಿಳಿಸಿದೆ.
ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಅಮೆರಿಕಾ ಆಯೋಗವು ಭಾರತವನ್ನು ನಿರ್ದಿಷ್ಟ ಕಾಳಜಿಯುಳ್ಳ ದೇಶಗಳ ಪಟ್ಟಿಗೆ ಸೇರಿಸಬೇಕೆಂದು ಸತತ ಮೂರನೇ ವರ್ಷವು ತನ್ನ ಶಿಫಾರಸ್ಸು ಮಾಡಿದೆ. ಇದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ. ಆದರೆ, ಆಯೋಗವು ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸುವುದನ್ನು ಬೆಂಬಲಿಸಿದೆ.
2021ರಲ್ಲಿ ಮೋದಿ ಸರ್ಕಾರವು ಹಿಂದೂ ರಾಷ್ಟ್ರದ ಸೈದ್ಧಾಂತಿಕ ದೃಷ್ಟಿಯನ್ನು ಪ್ರಚಾರ ಮಾಡಿದ್ದರಿಂದ ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ ಅದರಲ್ಲು ವಿಶೇಷವಾಗಿ ಧಾರ್ಮಿಕ ಅಲ್ಪಸಂಖ್ಯಾತರಾದ ಮುಸ್ಲಿಮರು ಹಾಗೂ ಕ್ರಿಶ್ಚಿಯನ್ನರ ಮೇಲೆ ದಾಳಿಗಳಾಗಿವೆ ಎಂದು ಸಮಿತಿ ಹೇಳಿದೆ.
ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ ಎಂದು ಸಮಿತಿ ಕಳವಳ ವ್ಯಕ್ತಪಪಡಿಸಿದೆ.