ಕೊರೋನಾ ರೂಪಾಂತರಿ ತಳಿ BF.7 ಆತಂಕ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ಗಳ ಕಂಡಕ್ಟರ್, ಡ್ರೈವರ್, ಪ್ರಯಾಣಿಕರಿಗೂ ಮಾಸ್ಕ್ ಕಡ್ಡಾಯ ಮಾಡಿದೆ.
ಬೆಂಗಳೂರು: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ ಕೊರೊನಾ ಆತಂಕ ಶುರುವಾಗಿದೆ.ಹೀಗಾಗಿ ಬಿಎಂಟಿಸಿ ,ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣಿಕರು, ಚಾಲಕ, ಕಂಡಾಕ್ಟರ್ ಮಾಸ್ಕ್ ಬಳಸುವುದು ಕಡ್ಡಾಯ ಮಾಡಿ ಇಲಾಖೆ ಆದೇಶ ಹೊರಡಿಸಿದೆ.ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೊರೋನಾ ರೂಪಾಂತರಿ ತಳಿ BF.7 ಆತಂಕ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ಗಳ ಕಂಡಕ್ಟರ್, ಡ್ರೈವರ್, ಪ್ರಯಾಣಿಕರಿಗೂ ಮಾಸ್ಕ್ ಕಡ್ಡಾಯ ಮಾಡಿದೆ.
ಈ ಸಂಬಂಧ ಶೀಘ್ರವೇ ಬಿಎಂಟಿಸಿ ಗೈಡ್ಲೈನ್ಸ್ ಬಿಡುಗಡೆ ಮಾಡಲಿದೆ. ಇಂದಿನಿಂದ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ಗಳಲ್ಲಿ ಪ್ರಯಾಣಿಸಬೇಕಾದರೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಒಂದು ವೇಳೆ ಮಾಸ್ಕ್ ಹಾಕಿಲ್ಲ ಅಂದರೆ ಬಸ್ ಗೆ ಹೋಗಲು ಅವಕಾಶ ನೀಡಲ್ಲ ಎಂದು ಸಾರಿಗೆ ಇಲಾಖೆ ಸೂಚನೆ ನೀಡಿದೆ.