ಉತ್ತರಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪ್ರಧಾನ ಮೋದಿ ತಲಾ 2 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.
ಹೌದು, ಉತ್ತರಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯ NH-28 ನಲ್ಲಿ ನಿಂತಿದ್ದ ಟ್ರಕ್‌ಗೆ 11 ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಿಗೂ ಸಹ ತಲಾ 50 ಸಾವಿರ ರೂ.ಗಳನ್ನು ಘೋಷಿಸಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಸ್ತೆ ಅಪಘಾತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

