ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಆಘಾತ ನೀಡುವಂತಹ ವರದಿಯೊಂದು ಹೊರ ಬಿದ್ದಿದೆ. ದೇಶದಲ್ಲಿ ಅತ್ಯಂತ ಕೆಟ್ಟ ಆಡಳಿತವನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಇದೇ ಉತ್ತರ ಪ್ರದೇಶವು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ.
ಇತ್ತೀಚಿನ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದ ಪ್ರಕಾರ, ಬೆಂಗಳೂರು ಮೂಲದ ಥಿಂಕ್-ಟ್ಯಾಂಕ್ ಸಾರ್ವಜನಿಕ ವ್ಯವಹಾರಗಳ ಕೇಂದ್ರವು ಸಿದ್ಧಪಡಿಸಿದ ರಾಜ್ಯಗಳ ಆಡಳಿತದ ಅಳತೆಗೋಲಿನ ಪ್ರಕಾರ, ಕಳಪೆ ಗುಣಮಟ್ಟದ ಆಡಳಿತದಿಂದಾಗಿ ಉತ್ತರ ಪ್ರದೇಶವು ಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ಈ ಸೂಚ್ಯಂಕವು ಮೂರು ವಿಶಾಲ ಅಂಶಗಳನ್ನು ಹೊಂದಿದ್ದು, ರಾಜ್ಯದ ಅಭಿವೃದ್ಧಿ, ನ್ಯಾಯ ಮತ್ತು ಸುಸ್ಥಿರತೆಯನ್ನು ಆಧರಿಸಿದ 43 ಮಾನದಂಡಗಳ ಆಧಾರದ ಮೇಲೆ ನಿರ್ಧರಿಸಲಾಗಿದೆ. ಐದು ವರ್ಷಗಳ ಹಿಂದೆ ಸೂಚ್ಯಂಕವನ್ನು ಪ್ರಕಟಿಸಲು ಪ್ರಾರಂಭಿಸಿದ್ದು, ಕೇರಳವು ಮತ್ತೊಮ್ಮೆ ಅತ್ಯುತ್ತಮ ಆಡಳಿತವನ್ನು ನೀಡಿದ ರಾಜ್ಯಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

ಸಿವೋಟರ್- ಐಎಎನ್ಎಸ್ ಸಮೀಕ್ಷೆಯ ಪ್ರಕಾರ ಕೆಟ್ಟ ಸಿಎಂ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್… ಶೇ. 28.10ರಷ್ಟು ಜನ ಇವರ ಆಡಳಿತದ ಬಗ್ಗೆ ಸಮಾಧಾನವನ್ನು ಹೊಂದಿಲ್ಲ ಎಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ.
ದೇಶದಲ್ಲಿ ಹೆಚ್ಚು ಜನಪ್ರಿಯ ಹೊಂದಿರೋ ಪ್ರಧಾನಿ ನರೇಂದ್ರ ಮೋದಿ ಬಿಟ್ಟರೆ ಅದು ಯೋಗಿ ಆದಿತ್ಯನಾಥ್ ಎಂದು ಹೇಳಲಾಗುತ್ತಿತ್ತು. ಆದ್ರೆ ಈಗ ಹೊರ ಬಿದ್ದಿರೋ ಸಮೀಕ್ಷೆ ಪ್ರಕಾರ ಎಲ್ಲವೂ ತಲೆ ಮೇಲಾಗಿಸಿದೆ. ಇದು ಬಿಜೆಪಿಗೆ ದೊಡ್ಡ ಪೆಟ್ಟು ಕೊಡಬಲ್ಲದು ಎಂದು ಹೇಳಲಾಗ್ತಾಯಿದೆ.
ಶೇ. 30.3ರಷ್ಟು ಜನ ಇವರ ಕಾರ್ಯಶೈಲಿಗೆ ಸಿಟ್ಟಾಗಿದ್ದಾರೆ. ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ಗೆ ಅಲ್ಲಿ ಅನುಕೂಲಕರ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದೂ ಸಮೀಕ್ಷೆಯಲ್ಲಿ ಹೇಳಲಾಗಿದೆ.
ಇನ್ನು, ಯೋಗಿ ಆದಿತ್ಯನಾಥ್ ಮೇಲೆ ಜನ ವಿಶ್ವಾಸವನ್ನ ಕಳೆದುಕೊಂಡಿದ್ದಾರೆ ಎಂದು ಈ ಸಮೀಕ್ಷೆ ಮೂಲಕ ತಿಳಿದು ಬಂದಿದೆ. ಆದ್ರೆ ಇದು ಮುಂಬರುವ ದಿನಗಳಲ್ಲಿ ಅದೆಷ್ಟರ ಮಟ್ಟಿಗೆ ಪರಿಣಾಮ ಬೀರುತ್ತೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಕಾದು ನೋಡಬೇಕು