ರಾಜ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿದೆ. ಇನ್ನೇನು ಕೆಲವೇ ದಿನಗಳಲ್ಲಿ 2023ರ ಕರ್ನಾಟಕ ವಿಧಾನಸಭೆ ಚುನಾವಣೆ(karnataka assembly election 2023) ನಡೆಯಲಿದ್ದು, ಈಗಾಗಲೇ ರಾಜಕೀಯ ನಾಯಕರು ಅಖಾಡಕ್ಕಿಳಿದು, ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ವರುಣ ಕ್ಷೇತ್ರದಲ್ಲಂತೂ ಕಾಂಗ್ರೆಸ್‌ನಿಂದ ಸಿದ್ದರಾಮಯ್ಯ, ಬಿಜೆಪಿಯಿಂದ ವಿ.ಸೋಮಣ್ಣ(V somanna) ಸಮರ ಸಾರಿದ್ದಾರೆ. ಸದ್ಯ ಈಗ ಚಾಮರಾಜನಗರದಲ್ಲಿ ಪ್ರಚಾರ ನಡೆಸುತ್ತಿರುವ ಸಚಿವ ವಿ.ಸೋಮಣ್ಣ(V Somanna) ಸಿದ್ದರಾಮಯ್ಯಗೆ(Siddaramaiah) ಚಾಲೆಂಜ್ ಮಾಡಿದ್ದು, ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ʻಸಿದ್ದರಾಮಯ್ಯ ಒಂದು ಸಲ ವರುಣ(varuna) ಕ್ಷೇತ್ರದಲ್ಲಿ ಓಡಾಡಲಿ. ಅವರ ಜೊತೆ ನಾನು ಒಬ್ಬನೇ ಬರ್ತೀನಿ, ಹೋಗೋಣ. ಅದೆಷ್ಟು ಚೆನ್ನಾಗಿ ರಸ್ತೆಗಳಿವೆ ನೋಡಲಿ. ಯಾವ ರೀತಿ ಅವ್ಯವಸ್ಥೆಯಿದೆ ನೋಡಲಿ. ಯಾವ ರೀತಿ ಜನರು ಒದ್ದಾಡ್ತಿದ್ದಾರೆ ನೋಡಲಿ. ಸಿದ್ದರಾಮಯ್ಯ ಕರೆದ್ರೆ ಹೋಗಲೂ ಸಿದ್ಧ, ಹೋಗಿ ಸುತ್ತಾಡೋಣ. ಅವರು ಮಾಡಿರುವ ಕೆಲಸ ಅವರಿಗೆ ತೃಪ್ತಿ ಕೊಟ್ಟಿದೆ ಅನ್ಸಿದ್ರೆ, ಅವರಿಗೆ ನಮಸ್ಕಾರ ಮಾಡಿ, ನಾನು ಏನೂ ಮಾತಾಡಲ್ಲ. ನಿಜಲಿಂಗಪ್ಪ, ದೇವರಾಜ ಅರಸುಗಿಂತ ಸಿದ್ದರಾಮಯ್ಯ(siddaramaiah) ದೊಡ್ಡವರಲ್ಲ. ಜನರು ತೀರ್ಮಾನ ಮಾಡ್ತಾರೆ. ಹಿಂದೆ ನೀವು ಸೋತಾಗ ಮಂತ್ರಿಯಾಗಿದ್ರಷ್ಟೇ. ಇವತ್ತು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕರಾಗಿ ನಿಂತಿದ್ದೀರಾ. ಸಿದ್ದರಾಮಯ್ಯ ಇನ್ನೊಬ್ಬರ ಮೇಲೆ ಗೂಬೆ ಕೂರಿಸೋದು ಬಿಟ್ಟು, ವಾಸ್ತಾವಾಂಶಕ್ಕೆ ಗಮನ ಕೊಟ್ರೆ ಒಳ್ಳೇಯದು ಎಂದು ಚಾಮರಾಜಗರದಲ್ಲಿ(chamarajnagar) ಸಿದ್ದರಾಮಯ್ಯಗೆ ವಿ.ಸೋಮಣ್ಣ(V somanna) ಓಪನ್ ಚಾಲೆಂಜ್ ಮಾಡಿದ್ದಾರೆ.