ಬೆಂಗ್ಗಳೂರು:- ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ಕಾಂಗ್ರೆಸ್ ಶಾಸಕ ಬಸವನಗೌಡ ದದ್ದಲ್ ಅವರ ಮನೆಗಳ ಮೇಲೆ ಇಂದು ಮುಂಜಾನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.ಬೆಂಗಳೂರಿನ ಪದ್ಮನಾಭ್ ನಿವಾಸ, ಹೈದರಾಬಾದ್ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಬೀದರ್ ನಲ್ಲಿ ಅಕ್ರಮ ಗಾಂಜಾ ಬೆಳೆಯ ಮೇಲೆ ಪೊಲೀಸರ ರೇಡ್ :3 ಕೋಟಿಗೂ ಅಧಿಕ ಬೆಳೆ ನಾಶ!
ಬೀದರ್: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ರೈತನ ಜಮೀನಿನ ಮೇಲೆ ಪೊಲೀಸರು ದಾಳಿ ಮಾಡಿ ಸುಮಾರು ಮೂರು ಕೋಟಿಗೂ ಅಧಿಕ ಗಾಂಜಾ ಬೆಳೆಯನ್ನು ನಾಶಪಡಿಸಿರುವ ಘಟನೆ ಬೀದರ್...
Read more