ಹಿರಿಯ IAS ಅಧಿಕಾರಿ ವಂದಿತಾ ಶರ್ಮಾ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಿದ್ದಾರೆ.

ಹೌದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ IAS 1986ನೇ ಬ್ಯಾಚ್ನ ವಂದಿತಾ ಶರ್ಮಾ ಅಧಿಕಾರ ಸ್ವೀಕರಿಸಿದ್ದಾರೆ. ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ಅಂತೆಯೇ, ರಾಜ್ಯ ಸರ್ಕಾರದ 39ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.












