ಬಿಗ್ ಬಾಸ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್ ಬಾಸ್‌ಮನೆಯಿಂದ ಓರ್ವ ಸ್ಪರ್ಧೆಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.ರಾಮೋಹಳ್ಳಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರನ್ನು ಆವರಣದಲ್ಲಿ ಬಳಸಿದ್ದಾರೆ ಎಂಬ ಆರೋಪವಿದ್ದು ಅವರ ವಿರುದ್ದ ಒಬ್ಬರು ಕೇಸ್ ದಾಖಲಿಸಿದ್ದು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ ಅಧಿಕಾರಿಗಳು ಅವರನ್ನು ಬಿಗ್ ಬಾಸ್ ಮನೆಯಿಂದಲೇ ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಕುರಿತು ಅರಣ್ಯ ಅಧಿಕಾರಿಗಳು ಖಾಸಗಿ ವಾಹಿಸಿಗೆ ಪ್ರತಿಕ್ರಿಯೆ ನೀಡಿದ್ದು, ಹೌದು ನಾವು ಸಂತೋಷ್ ಅವರನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.