ಕರ್ನಾಟಕ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ 125ನೇ ಚಿತ್ರ ವೇದ ಬಿಡುಗಡೆಗೂ ಮುನ್ನ ಸಾಕಷ್ಟು ಸದ್ದು ಮಾಡುತ್ತಿದ್ದು ಸಿನಿರಸಿಕರ ಕುತೂಹಲ ಹೆಚ್ಚಿಸಿದೆ.
ಶುಕ್ರವಾರ ಚಿತ್ರ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಇರುವ ಕ್ರೇಜ್ ಅನ್ನು ಮತ್ತಷ್ಟು ಹೆಚ್ಚಿಸಿದೆ.
ಪೋಸ್ಟರ್ ಮೂಲಕ ಭಾರೀ ಸದ್ದು ಮಾಡುತ್ತಿರುವ ವೇದ ಚಿತ್ರವು ಇದೇ ಡಿಸೆಂಬರ್ 25ರದಂಉ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಇನ್ನು ಚಿತ್ರದಲ್ಲಿ ಶಿವಣ್ಣನಿಗೆ ಜೋಡಿಯಾಗಿ ಗಾನವಿ ಲಕ್ಷ್ಮಣ್ ಜೊತೆಯಾಗಿದ್ದು, ಶಿವಣ್ಣನ ಪುತ್ರಿಯಾಗಿ ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನುಳಿದಂತೆ ಕುರಿ ಪ್ರತಾಪ್, ಜಗ್ಗಪ್ಪ ಹಾಗೂ ಹಿರಿಯ ನಟಿ ಉಮಾಶ್ರೀ ತಾರಾಬಳಗದಲ್ಲಿದ್ದಾರೆ.
ಚಿತ್ರಕ್ಕೆ ಎ.ಹರ್ಷ ನಿರ್ದೇಶನ ಮಾಡುತ್ತಿದ್ದು, ಗೀತಾ ಶಿವರಾಜ್ಕುಮಾರ್ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸುತ್ತಿದ್ದು 1960ರ ದಶಕದಲ್ಲಿ ನಡೆಯುವ ಕ್ರೂರ ಕಥಾಹಂದರದ ಸುತ್ತ ಚಿತ್ರ ಸಾಗಲಿದೆ.