ಬೆಳಗಾವಿ:ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾದ ಡಾ.ಎಂ. ವೀರಪ್ಪ ಮೊಯ್ಲಿ ಅವರು ಇಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಬೆಳಗ್ಗೆ 10 ಗಂಟೆಗೆ ಬೆಳಗಾವಿಗೆ ಆಗಮಿಸಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೇಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡುವರು.
ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಾಂಧೀ ಶತಮಾನೋತ್ಸವ ಕುರಿತು ಸಭೆಯಲ್ಲಿ ಭಾಗಿಯಾಗುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.