ಪಾಲಾರ್ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ನವೆಂಬರ್ 26ರಂದು ಜ್ಞಾನಪ್ರಕಾಶ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಾನವೀಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದ್ದು ಅರ್ಜಿದಾರರ ಪರ ವಕೀಲರು ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಬಿಡುಗಡೆಗೆ ಅನುಮತಿ ನೀಡುವಂತೆ ಕೋರಿದ್ದರು. ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರ ಶ್ಯೂರಟಿ ಹಾಗೂ 5 ಲಕ್ಷ ರೂಪಾಯಿಗಳ ಬಾಂಡ್‌ಅನ್ನು ಪಡೆದು ಬಿಡುಗಡೆಗೆ ಆದೇಶಿಸಿದೆ.
ಕ್ಯಾನ್ಸರ್‌ನಿಂದ ಬಳಲುತ್ತಿರುವ ಜ್ಞಾನಪ್ರಕಾಶ್‌ಗೆ ಸುಪ್ರೀಂ ಕೋರ್ಟ್ ಮಾನವೀಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ.
