• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ʼಕಿತ್ತೋದ ಸಿಟಿ ರವಿʼ ಎಂದ ವೀರಶೈವರು: ಲಿಂಗಾಯತರ ಆಕ್ರೋಶಕ್ಕೆ ಬೆದರಿ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಿದ ಸಿಟಿ ರವಿ

Shivakumar A by Shivakumar A
March 17, 2023
in ರಾಜಕೀಯ
0
ʼಕಿತ್ತೋದ ಸಿಟಿ ರವಿʼ ಎಂದ ವೀರಶೈವರು: ಲಿಂಗಾಯತರ ಆಕ್ರೋಶಕ್ಕೆ ಬೆದರಿ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಿದ ಸಿಟಿ ರವಿ
Share on WhatsAppShare on FacebookShare on Telegram

ಲಿಂಗಾಯಿತ ಸಮುದಾಯದ ವಿರುದ್ಧ ಹೇಳಿಕೆ ನೀಡಿ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ತಾವು ಆ ರೀತಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅಲ್ಲದೆ, ಲಿಂಗಾಯತ ವಿರೋಧಿ ಮನೋಭಾವನೆ ಬೆಳೆಯಲು ಕಾಂಗ್ರೆಸ್‌ ಈ ರೀತಿ ಸುಲಳುಗಳನ್ನು ಸೃಷ್ಟಿಸುತ್ತಿದೆ ಎಂದು ರವಿ ಹೇಳಿದ್ದಾರೆ. ಇವೆಲ್ಲವೂ ಕಾಂಗ್ರೆಸ್‌ ಸುಳ್ಳಿನ ಫ್ಯಾಕ್ಟರಿಯ ಸೃಷ್ಟಿ, ನಾನು ಜಾತಿ ರಾಜಕಾರಣ ಮಾಡುವವನಲ್ಲ ಎಂದು ವಿಪಕ್ಷದ ಮೇಲೆ ಆರೋಪಿಸಿದ್ದಾರೆ.

ADVERTISEMENT

ಬಿಎಸ್‌ವೈ ಹಾಗೂ ಬಿವೈ ವಿಜಯೇಂದ್ರ ವಿರುದ್ಧ ಪದೇ ಪರೋಕ್ಷ ಹೇಳಿಕೆ ನೀಡುತ್ತಾ ಬಂದಿರುವ ಸಿಟಿ ರವಿ‌, ಲಿಂಗಾಯತರ ವಿರೋಧಿ ಮಾತುಗಳನ್ನು ಆಡಿದ್ದಾರೆ ಎಂಬ ಊಹಾಪೋಹಗಳಿಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು, ಲಿಂಗಾಯತ ಸಮುದಾಯದ ಸಂಘಟನೆಗಳು ಸಿಟಿ ರವಿಗೆ ಕಂಡಲ್ಲಿ ಮುತ್ತಿಗೆ ಹಾಕಲು ಕರೆ ನೀಡಿದ್ದವು. ಟಿಕೆಟ್‌ ವಿಚಾರದಲ್ಲೂ ವಿಜಯೇಂದ್ರ ಸಿಟಿ ರವಿ ವಿರುದ್ಧ ಅಲ್ಲಲ್ಲಿ ಅಸಮಾಧಾನ ಹೊರ ಹಾಕುತ್ತಿದ್ದರು. ಅಲ್ಲದೆ, ಲಿಂಗಾಯತರನ್ನು ಹಿನ್ನೆಲೆಗೆ ಸರಿಸಿ ಸಂಘ ನಿಷ್ಠರನ್ನು ಬಿಜೆಪಿ ಮುನ್ನೆಲೆಗೆ ತರಲಾಗುವುದು ಎಂಬ ಮಾತುಗಳೂ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದ್ದರಿಂದ ಲಿಂಗಾಯತರು ಮೊದಲೇ ಅಸಮಾಧಾನ ಹೊಂದಿದ್ದರು.

ಇಂತಹ ಸಮಯದಲ್ಲೇ, ಲಿಂಗಾಯತರ ಮತಗಳು ಇಲ್ಲದೆಯೂ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತೆ ಎಂದು ಸಿಟಿ ರವಿ ಹೇಳಿದ್ದಾರೆ ಎನ್ನಲಾದ ಬಗ್ಗೆ ವರದಿಗಳು ಬಿತ್ತರವಾಗಿದ್ದವು. ಈ ಹಿನ್ನೆಲೆಯಲ್ಲಿ ಬಿಎಸ್‌ವೈ ಸೇರಿದಂತೆ ಹಲವು ಲಿಂಗಾಯತ ನಾಯಕರು ಪ್ರತಿಕ್ರಿಯೆ ನೀಡಿದ್ದರು.

ಅದರ ಬೆನ್ನಲ್ಲೇ ಸ್ಪಷ್ಟೀಕರಣ ನೀಡಿದ ಸಿಟಿ ರವಿ, ತಾನು ಯಾವುದೇ ಆ ರೀತಿಯ ಹೇಳಿಕೆ ನೀಡಿಲ್ಲ, ಇದೆಲ್ಲಾ ಕಾಂಗ್ರೆಸ್‌ ಸುಳ್ಳಿನ ಫ್ಯಾಕ್ಟರಿ ಸೃಷ್ಟಿ ಎಂದು ವಿಪಕ್ಷದ ಮೇಲೆ ಗೂಬೆ ಕೂರಿಸಿದ್ದಾರೆ.

“ಇವುಗಳೆಲ್ಲವೂ ಸುಳ್ಳು ಸುದ್ದಿಗಳು. ನಾನು ಕನಸಿನಲ್ಲಿಯೂ ಜಾತಿ ರಾಜಕಾರಣ ಮಾಡಿಲ್ಲ. ಜಾತಿಯ ಬಗ್ಗೆ ಯೋಚನೆ ಕೂಡಾ ನಾನು ಮಾಡುವುದಿಲ್ಲ. ನನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ ಲಿಂಗಾಯತ ವಿರೋಧಿ ಭಾವನೆ ಹುಟ್ಟು ಹಾಕುವ ಕೆಲಸವನ್ನು ಕಾಂಗ್ರೆಸ್​ ಮಾಡುತ್ತಿದೆ. ಇದರ ಹಿಂದೆ ಕಾಂಗ್ರೆಸ್​ ಕೈವಾಡ ಇದೆ.” ಎಂದು ಸಿಟಿ ರವಿ ಹೇಳಿದ್ದಾರೆ.

   ಈ ಹಿಂದೆಯೂ ನನ್ನ ವಿರುದ್ಧ ಇಂತಹ ಪ್ರಯತ್ನವನ್ನು ಮಾಡಿ ವಿಫಲರಾಗಿದ್ದರು. ಅದೇ ರೀತಿ ಈಗಲೂ ಒಂದು ಗೊಂದಲ, ಸುಳ್ಳು ಸುದ್ದಿಯನ್ನು ಸೃಷ್ಟಿ ಮಾಡಿ ಹಬ್ಬಿಸಿದ್ದಾರೆ. ನಾನು ಆ ರೀತಿ ಹೇಳಿಕೆ ನೀಡಿದ್ದರೆ ಕ್ಷಮೆಯಾಚನೆ ಮಾಡುತ್ತಿದ್ದೆ. ಜನರು ಜಾತಿಮೀರಿ ಮತನೀಡಿ ನನ್ನನ್ನು ಗೆಲ್ಲಿಸಿದ್ದಾರೆ. ಅಭಿವೃದ್ಧಿ ಕೆಲಸದ ವಿಚಾರಕ್ಕೆ ಸಂಬಂಧಿಸಿ ಚರ್ಚೆ ಮಾಡಲಾಗುವುದಿಲ್ಲ ಎಂದು ಜಾತಿ ಹೆಸರಿನಲ್ಲಿ ಒಡಕು ಮೂಡಿಸಲು ಸುಳ್ಳಿನ ಫ್ಯಾಕ್ಟರಿ ಮೂಲಕ ದಾಳ ಉರುಳಿಸಿದ್ದಾರೆ. ಸುಳ್ಳು ಸುದ್ದಿಯನ್ನು ಯಾರು ಹಬ್ಬಿಸಿದ್ದಾರೋ ಅವರ ವಿರುದ್ಧ ದೂರು ನೀಡಲಾಗಿದೆ. ಷಡ್ಯಂತರದ ಭಾಗವಾಗಿ ಇದನ್ನು ಮಾಡಿದ್ದಾರೆ ಎಂದು ಸಿಟಿ ರವಿ ಆರೋಪಿಸಿದ್ದಾರೆ.

Tags: ಬಿ ಎಸ್ ಯಡಿಯೂರಪ್ಪಬಿಜೆಪಿಸಿಟಿ ರವಿ
Previous Post

PM Modi.. Do you Collect toll without Service? Democracy is being Destroyed By your Government : ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ? ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ? ನಿಮ್ಮ ಸರ್ಕಾರದಿಂದ ಪ್ರಜಾಪ್ರಭುತ್ವ ಹಾಳಾಗುತ್ತಿದೆ : ಎಚ್.ವಿಶ್ವನಾಥ್

Next Post

ಉರಿಗೌಡ-ನಂಜೇಗೌಡ ಸಿನೆಮಾ ಟೈಟಲ್‌ ರಿಜಿಸ್ಟರ್:‌ ಮುನಿರತ್ನ ನಡೆಗೆ ಹೆಚ್‌ಡಿಕೆ ಕಿಡಿ

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
Next Post
ಉರಿಗೌಡ-ನಂಜೇಗೌಡ ಸಿನೆಮಾ ಟೈಟಲ್‌ ರಿಜಿಸ್ಟರ್:‌ ಮುನಿರತ್ನ ನಡೆಗೆ ಹೆಚ್‌ಡಿಕೆ ಕಿಡಿ

ಉರಿಗೌಡ-ನಂಜೇಗೌಡ ಸಿನೆಮಾ ಟೈಟಲ್‌ ರಿಜಿಸ್ಟರ್:‌ ಮುನಿರತ್ನ ನಡೆಗೆ ಹೆಚ್‌ಡಿಕೆ ಕಿಡಿ

Please login to join discussion

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!