ಬೆನ್ನುನೋವಿನ ಕಾರಣ ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದು, ಬಿಡುಗಡೆ ಆಗಿದ್ದಾರೆ.
ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಧರ್ಮೆಂದ್ರ ಅವರನ್ನು ಭಾನುವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಹಿರಿಯ ವಯಸ್ಸಿನಲ್ಲೂ ಅವರು ವ್ಯಾಯಾಮ ಮಾಡುತ್ತಿದ್ದು, ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.