ಕರ್ನಾಟಕದಲ್ಲಿ ಕಳೆದೊಂದೂವರೆ ತಿಂಗಳಿನಿಂದ ಒಂದಲ್ಲ ಒಂದುತರಹದ ವಿವಾದಗಳು ಸೃಷ್ಠಿಯಾಗುತ್ತಲೇ ಇದೆ. ಹಿಜಾಬ್ ನಿಂದ ಶುರುವಾದ ವಿವಾದ ಈಗ ದೇವಸ್ಥಾನದ ಆವರಣವನ್ನು ತಲುಪಿದೆ ಹೌದು. ದೇವಸ್ಥಾನಗಳ ಜಾತ್ರೆಗಳಲ್ಲಿ ಹಿಂದೂಯೇತರ ವ್ಯಾಪಾರಕ್ಕೆ ನಿಷೇಧ ಹೇರಿದ ಬಳಿಕ ವಿಶ್ವ ಹಿಂದೂ ಪರಿಷತ್ ಈಗ ದೇವಸ್ಥಾನದ ಒಳಗೆ ನಡೆಯುವ ಧಾರ್ಮಿಕ ಪೂಜೆಗೂ ಕೈ ಹಾಕಿದೆ.
ಹೌದು, ಇತಿಹಾಸ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರತಿ ದಿನ ಟಿಪ್ಪು ಸುಲ್ತಾನ್ ನೆನಪಿನಲ್ಲಿ ನಡೆಯುವ ಸಲಾಂ ಪೂಜೆಯನ್ನು ನಿಲ್ಲಿಸುವಂತೆ ವಿಶ್ವ ಹಿಂದೂ ಪರಿಷತ್ ಮುಜಾರಾಯಿ ಸಚಿವೆ ಶಶಿಕಲಾ ಜೊಲ್ಲೆ, ಮುಜಾರಾಯಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿಗೆ ಪತ್ರದ ಮೂಲಕ ಒತ್ತಾಯಿಸಲಾಗಿದೆ.
ವಿಶ್ವ ಹಿಂದೂ ಪರಿಷತ್ನ ಪ್ರಮುಖರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಮುಜಾರಾಯಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರವಾಗಿದೆ. ಭಾರತದ 108 ಶಕ್ತಿಪೀಠಗಳಲ್ಲಿ ಒಂದು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರವಾಗಿದೆ. ಆದಿ ಶಂಕರಾಚಾರ್ಯರು ಮೂಕಾಂಬಿಕಾ ತಾಯಿಯನ್ನು ಇಲ್ಲಿ ನೆಲೆಗೊಳಿಸಿದ್ದಾರೆ. ಮೂಕಾಂಬಿಕಾ ತಾಯಿಯು ದುರ್ಗೆ, ಸರಸ್ವತಿ ಮತ್ತು ಮಹಾಲಕ್ಷ್ಮಿಯ ಒಂದು ಅವತಾರ. ಮೂಕಾಂಬಿಕಾ ದೇವಿಯ ದೇವಸ್ಥಾನದಲ್ಲಿ ಕೋಟ್ಯಂತರ ಭಕ್ತರು ಅತೀವ ನಂಬಿಕೆಯನ್ನು ಇರಿಸಿಕೊಂಡಿದ್ದಾರೆ. ಇಂತಹ ಪುಣ್ಯ ಕ್ಷೇತ್ರದಲ್ಲಿ ಒಬ್ಬ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ಕನ್ನಡ ವಿರೋಧಿ ಸಾವಿರಾರು ಹಿಂದುಗಳನ್ನು ನರಮೇಧ ಮಾಡಿ, ನೂರಾರು ದೇವಸ್ಥಾನಗಳನ್ನು ಧ್ವಂಸಗೊಳಿಸಿದಂತಹ ಟಿಪ್ಪುವಿನ ಹೆಸರಿನಲ್ಲಿ ಪ್ರತಿದಿನ ರಾತ್ರಿ 8 ಗಂಟೆಗೆ ದೇವಿ ಮೂಕಾಂಬಿಕೆಗೆ ಸಲಾಂ ಎಂಬ ಹೆಸರಿನಲ್ಲಿ ಮಹಾಮಂಗಳಾರತಿ ಆಗುತ್ತಿರುವುದು ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತಂದಿದೆ. ಸಲಾಂ ಎಂಬ ಹೆಸರಿನಲ್ಲಿ ಪ್ರತಿನಿತ್ಯ ದೇವಿಗೆ ಮಹಾಮಂಗಳಾರತಿ ಮುಂದುವರೆಸುವಂತೆ ಹಿಂದೂ ಸಮಾಜದ ಪರವಾಗಿ ವಿಶ್ವ ಹಿಂದೂ ಪರಿಷತ್ ತಮ್ಮಲ್ಲಿ ಬಲವಾಘಿ ಆಗ್ರಹಿಸಿದೆ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಕ್ಷೇತ್ರದ ವ್ಯವಸ್ಮಾಪನಾ ಸಮಿತಿ ಅಧ್ಯಕ್ಷರಿಗೆ, ಕಾರ್ಯನಿರ್ವಹಣಾಧಿಕಾರಿಗಳಿಗೆ, ದತ್ತಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರಿಗೆ, ಉಡುಪಿ ಜಿಲ್ಲಾಧಿಕಾರಿಗಳಿಗೆ, ದತ್ತಿ ಇಲಾಖೆ ಆಯುಕ್ತರಾದ ರೋಹಿಣಿ ಸಿಂಧೂರಿಯವರಿಗೆ ಮನವಿಯನ್ನು ಸಲ್ಲಿಸಲಾಗಿದೆ.