
ಬೆಂಗಳೂರು: ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ (Vice President CP Radhakrishnan) ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇಂದು ಬೆಳಗಿನ ಜಾವ ಯಲಹಂಕ ಏರ್ ಫೋರ್ಸ್ ಸ್ಟೇಷನ್ ಗೆ ಆಗಮಿಸಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governer Thavar Chand Gehlot) ಉಪರಾಷ್ಟ್ರಪತಿಗಳಿಗೆ ಹೂಗುಚ್ಚ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವರಾದ ಹೆಚ್. ಡಿ. ಕುಮಾರಸ್ವಾಮಿ(MP HD Kumarswamy), ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್(Minister Byrathi Suresh) , ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್(Chief Secretary Dr. Shalini Rajaneesh), ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಎಂ.ಎ. ಸಲೀಮ್(M A Salim), ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್(Seemanth Kumar Singh), ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಜೆಡಿಎಸ್ ಮುಖಂಡರಾದ ಪುಟ್ಟರಾಜು, ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಉಪರಾಷ್ಟ್ರಪತಿಗಳು ಇಂದು ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಿಂದ ಹೆಲಿಕಾಪ್ಟರ್ ಮೂಲಕ ಹಾಸನ ಜಿಲ್ಲೆಯ ಶ್ರವಣಬೆಳಗೊಳ(Shravana Belagola), ಮಂಡ್ಯ ಜಿಲ್ಲೆಯ ಮೇಲುಕೋಟೆ (Melukote) ಹಾಗೂ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆನ
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ (Vice President CP Radhakrishnan) ಅಧಿಕಾರ ವಹಿಸಿಕೊಂಡ ನಂತರ ಕರ್ನಾಟಕಕ್ಕೆ ಇದು ಮೊದಲ ಭೇಟಿಯಾಗಿದೆ. ಇಂದು ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ 4ನೇ ಬೆಟ್ಟದ ಪದನಾಮ ಅನಾವರಣ ಹಾಗೂ ಆಚಾರ್ಯ ಶ್ರೀ 108ನೇ ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಹಾಗೆ ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಅಂಗ ಸಂಸ್ಥೆಯಾಗಿರುವ ಮೈಸೂರಿನಲ್ಲಿರುವ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಹದಿನಾರನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪದವಿ ಪಡೆದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜೊತೆಗೆ ಸುತ್ತೂರು ಮಠದ ಹಳೆಯ ಆವರಣಕ್ಕೂ ಉಪರಾಷ್ಟ್ರಪತಿ ಭೇಟಿ ನೀಡಲಿದ್ದಾರೆ. ಬಳಕ ಮೈಸೂರಿನ ಬಳಿಯ ಚಾಮುಂಡೇಶ್ವರಿ ದೇವಿ ದೇವಸ್ಥಾನ ಮತ್ತು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿರುವ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿ ದೆಹಲಿಗೆ ಮರಳಲಿದ್ದಾರೆ.


