ಮದ್ಯದ ದೊರೆ ಎಂದೇ ಖ್ಯಾತರಾದ ಉದ್ಯಮಿ ವಿಜಯ್ ಮಲ್ಯಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 4 ತಿಂಗಳು ಜೈಲು ಶಿಕ್ಷೆ ವಿಧಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
2017ರಲ್ಲಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ವಿಜಯ್ ಮಲ್ಯ ತಮ್ಮ ಮಕ್ಕಳಿಗೆ 40 ದಶಲಕ್ಷ ಡಾಲರ್ ಮೊತ್ತವನ್ನು ವರ್ಗಾವಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಆರೋಪ ಸಾಬೀತಾಗಿದ್ದರಿಂದ ಶಿಕ್ಷೆ ಪ್ರಕಟಿಸಿದೆ.

ವಿಜಯ್ ಮಲ್ಯಗೆ 2 ಸಾವಿರ ರೂ. ದಂಡ ವಿಧಿಸಲಾಗಿದ್ದು, 4 ತಿಂಗಳ ಒಳಗಾಗಿ ದಂಡ ಪಾವಿತಸದೇ ಇದ್ದಲ್ಲಿ ಹೆಚ್ಚುವರಿ 2 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಆದೇಶದಲ್ಲಿ ತಿಳಿಸಿದೆ.
ನ್ಯಾಯಮೂರ್ತಿ ಯುಯು ಲಲಿತ್, ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಮತ್ತು ನ್ಯಾಯಮೂರ್ತಿ ಪಿಎಸ್ ನರಸಿಂಹ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಸೋಮವಾರ ಈ ಆದೇಶ ಹೊರಡಿಸಿದೆ.










