• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS ; ತಮಿಳುನಾಡಿನಲ್ಲಿ “ಕೈ” ಹಿಡಿದ ವಿಜಯ್‌ : ಕಾಂಗ್ರೆಸ್‌ ಜೊತೆ ಟಿವಿಕೆ ಮೈತ್ರಿ ಘೋಷಣೆ..

ತಮಿಳುನಾಡಿನಲ್ಲಿ ಇನ್ಮುಂದೆ ಟಿವಿಕೆ ಕಾಂಗ್ರೆಸ್‌ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ..!

ಪ್ರತಿಧ್ವನಿ by ಪ್ರತಿಧ್ವನಿ
May 6, 2026
in Top Story, ಇದೀಗ, ದೇಶ, ರಾಜಕೀಯ
0
BREAKING NEWS ; ತಮಿಳುನಾಡಿನಲ್ಲಿ “ಕೈ” ಹಿಡಿದ ವಿಜಯ್‌ : ಕಾಂಗ್ರೆಸ್‌ ಜೊತೆ ಟಿವಿಕೆ ಮೈತ್ರಿ ಘೋಷಣೆ..
Share on WhatsAppShare on FacebookShare on Telegram

ಚೆನೈ : ತಮಿಳುನಾಡಿನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಪಕ್ಷದ ಜೊತೆ ಕೈ ಜೋಡಿಸಿ ಕಾಂಗ್ರೆಸ್‌ ಸರ್ಕಾರ ರಚನೆ ಮಾಡಲಿದೆ. ಇಂದು ಟಿವಿಕೆ ಮುಖ್ಯಸ್ಥ ನಟ ವಿಜಯ್‌ ಅವರ ಪಕ್ಷದ ಕಚೇರಿಗೆ ಕಾಂಗ್ರೆಸ್‌ ನಾಯಕರು ಭೇಟಿ ನೀಡಿ ಮೈತ್ರಿ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ.

ADVERTISEMENT
TVK MLA Suni Anand :Pratidhvani ನ್ಯೂಸ್‌ ಜೊತೆ ಗೆಲುವಿನ ಸೀಕ್ರೇಟ್ ಬಿಚ್ಚಿಟ್ಟ ಕನ್ನಡಿಗ TVK ಶಾಸಕ. #tvkvijay

ಅಲ್ಲದೆ ವಿಜಯ್‌ಗೆ ತಮಿಳುನಾಡಿನ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರು ಹಾಗೂ ಉಸ್ತುವಾರಿ ಗಿರೀಶ್‌ ಚೋಡಂಕರ್‌ ತಮ್ಮ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಪ್ರವೀಣ್‌ ಚಕ್ರವರ್ತಿ ನೇತೃತ್ವದ ಶಾಸಕರ ನಿಯೋಗ ಪಣಿಯೂರಿನ ಟಿವಿಕೆ ಕಚೇರಿಗೆ ತೆರಳಿ ವಿಜಯ್‌ಗೆ ಶಾಲು ಹೊದಿಸಿ ಆತ್ಮೀಯವಾಗಿ ಗೌರವಿಸಿದ್ದಾರೆ. ಇನ್ನೂ ಕಾಂಗ್ರೆಸ್‌ ನಾಯಕರ ಜೊತೆ ವಿಜಯ್‌ ತಮಿಳುನಾಡಿನ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಕುರಿತು ಮುಂದಿನ ಪ್ರಕ್ರಿಯೆಗಳಿಗೆ ಅನುಮತಿ ಕೇಳಲಿದ್ದಾರೆ.

ಸದ್ಯ ರಾಜ್ಯಪಾಲ (Rajendra Arlekar) ರಾಜೇಂದ್ರ ಅರ್ಲೇಕರ್ ಚೆನೈನಲ್ಲಿ ಲಭ್ಯವಿಲ್ಲದಿರುವ ಕಾರಣಕ್ಕೆ ಸಂಜೆಯ ವೇಳೆಗೆ ಆಗಮಿಸುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಸಂಜೆಯ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ವೇಗ ಪಡೆಯಲಿವೆ. ಮೇ 7 ರಂದು ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆಯಿದ್ದು, ಟಿವಿಕೆ ಮುಖ್ಯಸ್ಥ ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ.

ಮೈತ್ರಿ ಸರ್ಕಾರದ ರಚನೆಯೊಂದಿಗೆ ಬೇರೆ ಬೇರೆ ಪಕ್ಷಗಳ ಬೆಂಬಲಕ್ಕೆ ಯತ್ನಿಸುತ್ತಿದೆ. ಹೀಗಾಗಿ ಟಿವಿಕೆ ಮಾಡಿಕೊಂಡಿದ್ದ ಬೆಂಬಲದ ಮನವಿಗೆ ಸ್ಪಂದಿಸಿರುವ ಕಾಂಗ್ರೆಸ್, ಷರತ್ತು ಬದ್ಧ ಬೆಂಬಲ ನೀಡಲು ಮುಂದೆ ಬಂದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ನ ಷರತ್ತುಗಳೇನು..?

ಭಾರತದ ಸಂವಿಧಾನದಲ್ಲಿ ನಂಬಿಕೆಯಿಲ್ಲದ ಯಾವುದೇ ಕೋಮುವಾದಿ ಶಕ್ತಿಗಳನ್ನು ಟಿವಿಕೆ ಈ ಮೈತ್ರಿಕೂಟದಿಂದ ದೂರವಿಡುವುದರ ಮೇಲೆ ನಮ್ಮ ಬೆಂಬಲವಿರುತ್ತದೆ. ಟಿವಿಕೆ ಮತ್ತು ತಮಿಳುನಾಡು ಕಾಂಗ್ರೆಸ್ ನಡುವಿನ ಈ ಮೈತ್ರಿಕೂಟವು ಪೆರುಂತಲೈವರ್ ಕಾಮರಾಜ್ ಅವರ ತಮಿಳುನಾಡಿನ ವೈಭವದ ದಿನಗಳನ್ನು ಮರಳಿ ತರಲು ಶ್ರಮಿಸುತ್ತದೆ, ತಂತೈ ಪೆರಿಯಾರ್ ಅವರ ಸಾಮಾಜಿಕ ನ್ಯಾಯದ ಆದರ್ಶಗಳು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಂವಿಧಾನಿಕ ಆದರ್ಶಗಳಿಗೆ ಮುಂದಿನ ವರ್ಷಗಳು ಮತ್ತು ದಶಕಗಳಲ್ಲಿ ಬಲವಾದ ಬದ್ಧತೆಯೊಂದಿಗೆ ಮುನ್ನಡೆಯುತ್ತದೆ ಎಂದು ಹೇಳಿದೆ.

ಪರಸ್ಪರ ಗೌರವ, ಸೂಕ್ತ ಹಂಚಿಕೆ ಮತ್ತು ಎರಡೂ ಪಕ್ಷಗಳ ನಡುವಿನ ಹಂಚಿಕೆಯ ಜವಾಬ್ದಾರಿಯ ಮೇಲೆ ಸ್ಥಾಪಿತವಾದ ಈ ಮೈತ್ರಿಕೂಟವು ಈ ಸರ್ಕಾರ ರಚನೆಗೆ ಮಾತ್ರವಲ್ಲದೆ, ಸ್ಥಳೀಯ ಸಂಸ್ಥೆ ಸಂಸ್ಥೆಗಳು, ಲೋಕಸಭೆ ಮತ್ತು ರಾಜ್ಯಸಭೆಗೆ ಭವಿಷ್ಯದ ಚುನಾವಣೆಗಳಿಗೂ ಸಹ ಆಗಿದೆ. ವಿಜಯ್ ಮತ್ತು ರಾಹುಲ್ ಗಾಂಧಿ ಜಂಟಿಯಾಗಿ ಜಾತ್ಯತೀತ ಮತ್ತು ಪ್ರಗತಿಪರ ಸರ್ಕಾರಕ್ಕಾಗಿ ತಮಿಳುನಾಡಿನ ಜನರ ಈ ಐತಿಹಾಸಿಕ ತೀರ್ಪನ್ನು ಗೌರವಿಸುವುದಾಗಿ ಮತ್ತು ಜನರ ಕನಸುಗಳು ಮತ್ತು ಭರವಸೆಗಳನ್ನು ವಿಶೇಷವಾಗಿ ತಮಿಳುನಾಡಿನ ಯುವಕರನ್ನು ಈಡೇರಿಸುವುದಾಗಿ ಪ್ರತಿಜ್ಞೆ ಮಾಡುತ್ತಾರೆ ಎಂದು ಕಾಂಗ್ರೆಸ್‌ ತನ್ನ ಬೆಂಬಲವನ್ನು ಘೋಷಿಸಿದೆ.

ಆದರೆ ಸದ್ಯ ಇದರ ಹೊರತಾಗಿಯೂ ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಮುಂದುವರೆದಿದ್ದು, ವಿಜಯ್‌ ಯಾರೊಂದಿಗೆ ಕೈ ಜೋಡಿಸಿ ಸರ್ಕಾರ ರಚಿಸುತ್ತಾರೆ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ.

Tags: Actor VijayChennaiCongress GovernmentGirish ChodankarPratidhvaniPraveen ChakravartyRahul GandhiRajendra ArlekarTamilnadu CongressTamilnadu PoliticsTVKTVK Government
Previous Post

ತಮಿಳುನಾಡಿನಲ್ಲಿ ಸ್ಫೋಟಕ ರಾಜಕೀಯ ಬೆಳವಣಿಗೆ : ಟಿವಿಕೆಗೆ ಕಾಂಗ್ರೆಸ್‌ ಷರತ್ತು ಬದ್ಧ ಬೆಂಬಲ..!

Next Post

ಬಂಗಾಳದಲ್ಲಿ ಸರ್ಕಾರ ರಚನೆಗೂ ಮುನ್ನವೇ ಬಿಜೆಪಿಗರ ಅಟ್ಟಹಾಸ : ಟಿಎಂಸಿ ಕಚೇರಿ ಧ್ವಂಸ, ಕಾರ್ಯಕರ್ತರ ಬಲಿ..

Related Posts

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?
ರಾಜಕೀಯ

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

by ಪ್ರತಿಧ್ವನಿ
May 20, 2026
0

ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ...

Read moreDetails
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
Next Post
ಬಂಗಾಳದಲ್ಲಿ ಸರ್ಕಾರ ರಚನೆಗೂ ಮುನ್ನವೇ ಬಿಜೆಪಿಗರ ಅಟ್ಟಹಾಸ : ಟಿಎಂಸಿ ಕಚೇರಿ ಧ್ವಂಸ, ಕಾರ್ಯಕರ್ತರ ಬಲಿ..

ಬಂಗಾಳದಲ್ಲಿ ಸರ್ಕಾರ ರಚನೆಗೂ ಮುನ್ನವೇ ಬಿಜೆಪಿಗರ ಅಟ್ಟಹಾಸ : ಟಿಎಂಸಿ ಕಚೇರಿ ಧ್ವಂಸ, ಕಾರ್ಯಕರ್ತರ ಬಲಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada