ಬಿಜಾಪುರವನ್ನು ವಿಜಯಪುರ ಎಂದು 2014ರಲ್ಲಿ ಮರುನಾಮಕರಣ ಮಾಡಿದ ಕಾಂಗ್ರೆಸ್ ಸರ್ಕಾರ ಮತ್ತೆ ಜಿಲ್ಲೆಗೆ ಮರುನಾಮಕರಣ ಮಾಡುವತ್ತ ಚಿತ್ತ ಹರಿಸಿದ್ದು, ಇದೀಗ 12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರ ಹೆಸರನ್ನು ವಿಜಯಪುರಕ್ಕೆ ಮರುನಾಮಕರಣ ಮಾಡಲು ಸರ್ಕಾರ ನಿರ್ಧರುಸಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬ್ಲನ್ ತಿಳಿಸಿದ್ದಾರೆ.
ಬಸವೇಶ್ವರರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನಲ್ಲಿ ಜನಿಸಿದ್ದು, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ಬಸವೇಶ್ವರರ ಹೆಸರನ್ನು ಜಿಲ್ಲೆಗೆ ಮರುನಾಮಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬ್ಲನ್ ತಿಳಿಸಿದ್ದಾರೆ.

ಬಸವೇಶ್ವರರ ಕೊಡುಗೆಗಳನ್ನು ಪರಿಗಣಿಸಿ ಸರ್ಕಾರವು ಜಿಲ್ಲೆಯನ್ನು ‘ಬಸವೇಶ್ವರ ಜಿಲ್ಲೆ’ ಅಥವಾ ‘ಬಸವ ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಬಯಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಚುನಾಯಿತ ಪ್ರತಿನಿಧಿಗಳು, ಗಣ್ಯ ವ್ಯಕ್ತಿಗಳು, ಎನ್‌ಜಿಒಗಳು ಮತ್ತು ಸಾರ್ವಜನಿಕರ ಅಭಿಪ್ರಾಯವನ್ನು ಕೇಳಿದೆ. 15 ದಿನಗಳೊಳಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಸರ್ಕಾರ ಜನರಲ್ಲಿ ಮನವಿ ಮಾಡಿದೆ.