ರಾಜ್ಯ ಸರ್ಕಾರವನ್ನು (Congress government) ಉರುಳಿಸಲು ಪ್ರತಿಪಕ್ಷ ಬಿಜೆಪಿ (BJP) ಕಾಂಗ್ರೆಸ್ ನ 50 ಶಾಸಕರಿಗೆ ತಲಾ ₹50 ಕೋಟಿ ನೀಡುವ ಆಮಿಷ ಒಡ್ಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Cm siddaramaiah) ಹಾಗೂ ಡಿಸಿಎಂ ಡಿಕೆಶಿ ಗಂಭೀರ ಆರೋಪ ಮಾಡಿದ್ದರು.
ಈ ಆರೋಪದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY vijayendra) ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಸಿದ್ದರಾಮಯ್ಯನವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸ ಕಳೆದುಕೊಂಡಂತೆ ಕಾಣುತ್ತಿದೆ ಎಂದು ಸಿಎಂ ಕಾಲೆಳೆದಿದ್ದಾರೆ.
ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರ ಬೆಲೆ 50 ಕೋಟಿ ಎಂದು ಹೇಳುವ ಮೂಲಕ, ನೀವು ನಿಮ್ಮ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಅವಮಾನ ಮಾಡುತ್ತಿದ್ದೀರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ.