ರಾಜ್ಯದಲ್ಲಿ ಸದ್ದು ಮಾಡುತ್ತಿರುವ ವಕ್ಫ್ ಆಸ್ತಿ ವಿವಾದವನ್ನ ರಾಜ್ಯಾದ್ಯಂತ ದೊಡ್ಡ ಹೋರಾಟದ ದಿಕ್ಕಿಗೆ ಕೊಂಡೊಯ್ಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮುಂದಾಗಿದ್ದಾರೆ. ನವೆಂಬರ್ 4 ರಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿವೈ ವಿಜಯೇಂದ್ರ ಕರೆ ಕೊಟ್ಟಿದ್ದಾರೆ.
ರಾಜ್ಯಾದ್ಯಂತ ಈ ಬಗ್ಗೆ ಪ್ರತಿಭಟನೆ ಮಾಡಿ, ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ಮಾಹಿತಿ ನೀಡುವಂತೆ ಪಕ್ಷದ ಪದಾಧಿಕಾರಿಳಿಗೆ ವಿಜಯೇಂದ್ರ ಸೂಚನೆ ನೀಡಿದ್ದಾರೆ. ಇನ್ನು ಉಪಚುನಾವಣೆಯ ಆಖಾಡದಲ್ಲೂ ಕೂಡ ವಕ್ಫ್ ವಿಚಾರವಾಗಿ ಪ್ರಶ್ನೆ ಮಾಡುವಂತೆ ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.